Homeಕರೋನಾ ತಲ್ಲಣಅಲೋಪತಿ ವೈದ್ಯರ ವಿರುದ್ಧ ಅವಹೇಳನ: ವಿಚಾರಣೆಗೆ ತಡೆಯೊಡ್ಡಲು ಸುಪ್ರೀಂ ಮೊರೆ ಹೋದ ಬಾಬಾ ರಾಮ್‌ದೇವ್

ಅಲೋಪತಿ ವೈದ್ಯರ ವಿರುದ್ಧ ಅವಹೇಳನ: ವಿಚಾರಣೆಗೆ ತಡೆಯೊಡ್ಡಲು ಸುಪ್ರೀಂ ಮೊರೆ ಹೋದ ಬಾಬಾ ರಾಮ್‌ದೇವ್

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಚಿಕಿತ್ಸೆ ಕುರಿತು ಅಲೋಪತಿ ಮತ್ತು ಅಲೋಪತಿ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಗಳ ವಿಚಾರಣೆಗೆ ತಡೆಯೊಡ್ಡುವಂತೆ ಯೋಗ ಗುರು ಬಾಬಾ ರಾಮ್‌ದೇವ್ ಸುಪ್ರೀಂ ಮೊರೆ ಹೋಗಿದ್ದಾರೆ.

ರಾಮ್‌ದೇವ ಹೇಳಿಕೆಯಿಂದ ಆಕ್ರೋಶಗೊಂಡಿದ್ದ ವೈದ್ಯಕೀಯ ಸಂಘ ವಿವಿಧ ರಾಜ್ಯಗಳಲ್ಲಿ ಹಲವು ಪ್ರಕರಣ ದಾಖಲಿಸಿತ್ತು. ಹೀಗಾಗಿ ತಮ್ಮ ವಿರುದ್ಧ ದಾಖಲಾಗಿರುವ ಅನೇಕ ಪ್ರಕರಣಗಳ ವಿಚಾರಣೆಯನ್ನು ತಡೆಹಿಡಿಯಬೇಕೆಂದು ಕೋರಿ ರಾಮ್‌ದೇವ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಭಾರತೀಯ ವೈದ್ಯಕೀಯ ಸಂಘ (ಐಎಂಎ) ದಾಖಲಿಸಿರುವ ಎಫ್‌ಐಆರ್‌ಗಳಲ್ಲಿ ಬಲವಂತದ ಕ್ರಮಗಳಿಂದ ರಾಮ್‌ದೇವ್ ರಕ್ಷಣೆ ಕೋರಿದ್ದಾರೆ. ಪಾಟ್ನಾ ಮತ್ತು ರಾಯ್‌ಪುರ ಶಾಖೆಗಳಲ್ಲಿ ಐಎಂಎ ಸಲ್ಲಿಸಿರುವ ಎಫ್‌ಐಆರ್‌ಗಳಲ್ಲಿನ ವಿಚಾರಣೆಯನ್ನು ತಡೆಹಿಡಿಯಲು ರಾಮ್‌ದೇವ್ ಕೋರಿದ್ದಾರೆ. ಜೊತೆಗೆ ಎಫ್‌ಐಆರ್‌ಗಳನ್ನು ದೆಹಲಿ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಅಲೋಪತಿ ವೈದ್ಯರು ದೇವದೂತರು, ಲಸಿಕೆ ಪಡೆಯುವೆ; ಯೂಟರ್ನ್ ಹೊಡೆದ ಬಾಬಾ ರಾಮ್‌ದೇವ್

ಅಲೋಪತಿಯ ಬಗ್ಗೆ ನೀಡಿದ್ದ ಹೇಳಿಕೆಯಿಂದಾಗಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಜ್ಯ ಘಟಕವು ನೀಡಿದ ದೂರಿನ ಮೇರೆಗೆ ಬಾಬಾ ರಾಮ್‌ದೇವ್ ವಿರುದ್ಧ ಛತ್ತೀಸ್‌ಗಢದಲ್ಲಿ  ಎಫ್‌ಐಆರ್ ದಾಖಲಿಸಲಾಗಿದೆ ಎಂದು ಛತ್ತೀಸ್‌ಗಢ ಪೊಲೀಸರು ತಿಳಿಸಿದ್ದರು.

ಬಾಬಾ ರಾಮದೇವ್ ವಿರುದ್ಧ, ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ದುರು ದಾಖಲಿಸಿದ್ದೇವೆ. ಐಎಂಎ ಮತ್ತು ಛತ್ತೀಸ್‌ಗಢ ಆಸ್ಪತ್ರೆ ಮಂಡಳಿಯ ಅಧ್ಯಕ್ಷ ಡಾ. ರಾಕೇಶ್ ಗುಪ್ತಾ ನೀಡಿದ ದೂರಿನ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ” ಎಂದು ರಾಯಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಸಿಎಸ್‌ಪಿ ನಾಸರ್ ಸಿದ್ದಿಕಿ ತಿಳಿಸಿದ್ದರು.

ಎಫ್‌ಐಆರ್ ಅನ್ನು ಐಪಿಸಿ ಸೆಕ್ಷನ್ಸ್ 186 (ಸಾರ್ವಜನಿಕ ಸೇವೆಯಲ್ಲಿರುವುವರನ್ನು ತನ್ನ ಕರ್ತವ್ಯ ನಿರ್ವಹಣೆಯಲ್ಲಿ ಸ್ವಯಂಪ್ರೇರಣೆಯಿಂದ ತಡೆಯುವುದು), 188 (ಅಧಿಕೃತವಾಗಿ ಜಾರಿಗೆ ಬಂದಿರುವ ನಿಯಮಗಳನ್ನು ಪಾಲಿಸಲು ನಿರಾಕರಿಸುವುದು), 270 (ಜೀವಕ್ಕೆ ಅಪಾಯಕಾರಿಯಾಗಿರುವ ಸೋಂಕನ್ನು ಹರಡುವ ಸಾಧ್ಯತೆ ), 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಅವಮಾನ ಮಾಡುವುದು) ಮತ್ತು ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಿದ ಛತ್ತೀಸ್‌ಗಢ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...