Homeಕರೋನಾ ತಲ್ಲಣಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

ಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

- Advertisement -
- Advertisement -

ದೇಶದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್‌ ಆತಂಕವನ್ನೇ ಸೃಷ್ಟಿ ಮಾಡಿದೆ. ಪ್ರಸ್ತುತ 40ಕ್ಕೂ ಹೆಚ್ಚು ಪ್ರಕರಣಗಳು ಇದ್ದು, ಕೊರೊನಾ ಮೂರನೇ ಅಲೆ ತೀವ್ರತೆಗೆ ಕಾರಣವಾಗಬಹುದು ಎನ್ನಲಾಗಿತ್ತು. ಆದರೆ, ಈ ಎಲ್ಲಾ ಸಂಭವವನ್ನು ತಳ್ಳಿರುವ ದೇಶದ ತಜ್ಞ ವೈದ್ಯರು, ಜಿನೋಮ್ ತಜ್ಮರು ಡೆಲ್ಟಾ ಪ್ಲಸ್ ರೂಪಾಂತರಿ ಮೂರನೇ ಅಲೆಗೆ ಕಾರಣವಾಗಬಹುದು ಎಂಬುದಕ್ಕೆ ಯಾವುದೇ ಸಾಕ್ಷಿ, ಆಧಾರವಿಲ್ಲ ಎಂದಿದಾರೆ.

Institute of Genomics and Integrative Biology (ಐಜಿಐಬಿ) ನಿರ್ದೇಶಕ ಡಾ.ಅನುರಾಗ್ ಅಗರ್ವಾಲ್, ’ಈಗ ಕಾಣಿಸಿಕೊಂಡಿರುವುದರಿಂದ, ಮೂರನೇ ಅಲೆಯೊಂದಿಗೆ ಯಾವುದೇ ಸಂಬಂಧವಿಲ್ಲ. 3ನೇ ಅಲೆಯ ತೀವ್ರತೆಗೆ ಕಾರಣವಾಗುತ್ತದೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ’ ಎಂದಿದ್ದಾರೆ. ಜೊತೆಗೆ ಕೊರೊನಾ ಎರಡನೇ ಅಲೆಯಲ್ಲಿ ಎಚ್ಚರಿಕೆ ತೆಗೆದುಕೊಳ್ಳುವುದನ್ನು ನಿಲ್ಲಿಸದಂತೆ ಸಲಹೆ ನೀಡಿದ್ದಾರೆ.

“ನಮ್ಮ ಸಂಸ್ಥೆ ಜೂನ್ ತಿಂಗಳಲ್ಲಿ ಮಹಾರಾಷ್ಟ್ರದಿಂದ 3,500 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷೆ ನಡೆಸಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಈ ಮಾದರಿಗಳನ್ನು ಕಲೆಕ್ಟ್ ಮಾಡಲಾಗಿತ್ತು. ಈ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೂ, ಇವುಗಳ ಸಂಖ್ಯೆ ಶೇಕಡಾಕ್ಕಿಂತ ಒಂದಕ್ಕಿಂತ ಕಡಿಮೆ ಇರುತ್ತವೆ” ಎಂದು ಡಾ.ಅನುರಾಗ್ ಅಗರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ಈ ರೂಪಾಂತರಿ ಪ್ರಕರಣಗಳು ಹೆಚ್ಚಿರುವ ಕಡೆಗಳಲ್ಲಿಯೂ ಅವುಗಳು “ಹೆಚ್ಚು” ಎಂದು ಹೇಳಲು ಸಾಧ್ಯವಿಲ್ಲ. ದೇಶದಲ್ಲಿ ಪದೆಸ್ತುತ ಪರಿಸ್ಥಿತಿ ಸ್ಥಿರವಾಗಿ ಕಾಣುತ್ತಿವೆ ಎಂದು ಡಾ ಅಗರ್ವಾಲ್ ಭರವಸೆ ವ್ಯಕ್ತಪಡಿಸಿದ್ದಾರೆ.

“ಸದ್ಯ 40ಕ್ಕೂ ಹೆಚ್ಚು ಪ್ರಕರಣಗಳು ಭಾರತದಲ್ಲಿ ಕಂಡುಬಂದಿದೆ. ಆದರೆ, ಸದ್ಯಕ್ಕೆ ನಾವು ಡೆಲ್ಟಾ ಪ್ಲಸ್, ಮೂರನೇ  ಅಲೆ ಬಗ್ಗೆ ಚಿಂತೆ ಮಾಡುವ ಮೊದಲು, ಎರಡನೇ ಅಲೆಯನ್ನು ಕೊನೆಗಿಳಿಸುವ ಕುರಿತು ಗಮನ ಹರಿಸಬೇಕು” ಎಂದು ಹೇಳಿದ್ದಾರೆ.

ದೇಶದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು​ ಪತ್ತೆಯಾಗಿದ್ದವು.  ಮೈಸೂರಿನಲ್ಲಿ ಮತ್ತು ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪ್ರಕರಣ ಪತ್ತೆಯಾಗಿವೆ ಎಂದು ಬುಧವಾರ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

’ಡೆಲ್ಟಾ ಪ್ಲಸ್ ಕೇಸ್ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಜಿನೋಮ್ ಲ್ಯಾಬ್ ಗಳನ್ನು ಕೂಡಾ ಸೆಟಪ್ ಮಾಡಲಾಗುತ್ತಿದೆ. ರಾಜ್ಯದಲ್ಲಿ 6 ಜಿನೋಮ್ ಲ್ಯಾಬ್ ಮಾಡಲು ನಿರ್ಧಾರ ಮಾಡಿದ್ದೇವೆ. ಡೆಲ್ಟಾ ಪ್ಲಸ್ ಬಗ್ಗೆ ನಿರಂತರವಾಗಿ ಗಮನಹರಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...