Homeಮುಖಪುಟನಕಲಿ ಲಸಿಕೆ ಜಾಲದಿಂದ ಮೋಸಹೋದ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ : ಓರ್ವನ ಬಂಧನ

ನಕಲಿ ಲಸಿಕೆ ಜಾಲದಿಂದ ಮೋಸಹೋದ ಟಿಎಂಸಿ ಸಂಸದೆ ಮಿಮಿ ಚಕ್ರವರ್ತಿ : ಓರ್ವನ ಬಂಧನ

- Advertisement -
- Advertisement -

ನಕಲಿ ಲಸಿಕೆ ಜಾಲದಿಂದ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ಮೋಸ ಹೋಗಿದ್ದಾರೆ. ಮಂಗಳವಾರ ಕಾಸ್ಬಾ ಪ್ರದೇಶದಲ್ಲಿ ನಡೆದಿದ್ದ ಲಸಿಕಾ ಅಭಿಯಾನದಲ್ಲಿ ಸಂಸದೆ ಕೊರೊನಾ ಲಸಿಕೆ ತೆಗೆದುಕೊಂಡಿದ್ದರು.

ಈ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರದಲ್ಲಿ ಐಎಎಸ್ ಅಧಿಕಾರಿಯಂತೆ ನಟಿಸಿ ಕೊಲ್ಕತ್ತಾದಲ್ಲಿ ಹಲವು ವ್ಯಾಕ್ಸಿನೇಷನ್‌ಗಳ ಮೇಲ್ವಿಚಾರಣೆ ನಡೆಸುತ್ತಿದ್ದ ವ್ಯಕ್ತಿಯನ್ನು ಬುಧವಾರ ಬಂಧಿಸಲಾಗಿದೆ. ನೂರಾರು ಜನರಿಗೆ ನಕಲಿ ಲಸಿಕೆಗಳನ್ನು ನೀಡಿರುವ ಸಾಧ್ಯತೆ ಹಿನ್ನೆಲೆ ಕೊಲ್ಕತ್ತಾ ಪೊಲೀಸರು ತೀವ್ರ ತನಿಖೆಗೆ ಆರಂಭಿಸಿದ್ದಾರೆ.

ಕೊಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ ಜಂಟಿ ಆಯುಕ್ತರಂತೆ ಸೋಗು ಹಾಕಿಕೊಂಡು ಲಸಿಕಾ ಶಿಬಿರವನ್ನು ಆಯೋಜಿಸಿದ ಹೊಸೆನ್‌ಪುರದ ದೇಬಂಜನ್ ದೇಬ್ ಎಂಬ 28 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿಬಿರದಲ್ಲಿದ್ದ ಜನರಿಗೆ ನಿಜವಾದ ಅಥವಾ ನಕಲಿ ಲಸಿಕೆಗಳನ್ನು ನೀಡಲಾಗಿದೆಯೇ ಎಂದು ಕಂಡುಹಿಡಿಯಲು ಪೊಲೀಸರು ಲಸಿಕಾ ಸ್ಯಾಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: ‘ಕೇಂದ್ರ ಸರ್ಕಾರ’ ಅಲ್ಲ, ‘ಒಕ್ಕೂಟ ಸರ್ಕಾರ’: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌‌!

ವ್ಯಾಕ್ಸಿನೇಷನ್ ಕೇಂದ್ರದಲ್ಲಿ ಲಸಿಕೆ ತೆಗೆದುಕೊಂಡ ನಂತರ ಯಾವುದೇ ಅಧಿಕೃತ ಪ್ರಮಾಣಪತ್ರ ದೊರೆಯದೆ ಇದ್ದಾಗ ನಟಿ, ಸಂಸದೆ ಮಿಮಿ ಚಕ್ರವರ್ತಿ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಬಿರದಲ್ಲಿ ಸುಮಾರು 250 ಜನರಿಗೆ ಲಸಿಕೆ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

ಶಿಬಿರಕ್ಕೆ ಆಹ್ವಾನಿಸಿದಾಗ ದೇಬಂಜನ್ ದೇವ್ ಐಎಎಸ್ ಅಧಿಕಾರಿ ಎಂದು ಹೇಳಿಕೊಂಡಿದ್ದಾರೆ. ಕೋಲ್ಕತಾ ಮುನ್ಸಿಪಲ್ ಕಾರ್ಪೊರೇಷನ್ ಈ ಇನಾಕ್ಯುಲೇಷನ್ ಪ್ರಯತ್ನವನ್ನು ಆಯೋಜಿಸಿದೆ ಎಂದು ಅವರು ಹೇಳಿದರು.

ಕೋಲ್ಕತಾ ಮುನ್ಸಿಪಲ್ ಕಾರ್ಪೊರೇಶನ್‌ನ ಜಂಟಿ ಆಯುಕ್ತರು ಟ್ರಾನ್ಸ್ಜೆಂಡರ್ ಮತ್ತು ವಿಶೇಷ ಸಾಮರ್ಥ್ಯ ಹೊಂದಿರುವ ಜನರಿಗೆ ಲಸಿಕೆ ಶಿಬಿರವನ್ನು ಆಯೋಜಿಸುತ್ತಿದ್ದಾರೆ ಎಂದು ನಾನು ಶಿಬಿರದಲ್ಲಿ ಭಾಗವಹಿಸಿದ್ದೆ. ಜನರು ಲಸಿಕೆ ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸಲು ಮತ್ತು ಕೊರೊನಾ ವೈರಸ್ ಹರಡುವುದನ್ನು ತಡೆಯಲು ನಾನು ಶಿಬಿರದಲ್ಲಿ ಲಸಿಕೆ ತೆಗೆದುಕೊಂಡೆ ಎಂದು ಹೇಳಿದ್ದಾರೆ.

ಆರೋಪಿತ ವ್ಯಕ್ತಿಯು ಪಶ್ಚಿಮ ಬಂಗಾಳ ಸರ್ಕಾರವನ್ನು ಪ್ರತಿನಿಧಿಸುವ ನೀಲಿ ಬೀಕನ್ ಲೈಟ್, ಲಾಂಛನ ಮತ್ತು ಸ್ಟಿಕ್ಕರ್ ಹೊಂದಿರುವ ಧ್ವಜವನ್ನು ಅಳವಡಿಸಿಕೊಂಡಿದ್ದ ಕಾರನ್ನು ಬಳಸುತ್ತಿದ್ದರು ಎಂದು ಸಂಸದೆ ತಿಳಿಸಿದ್ದು,  ಪೊಲೀಸರು ಕಾರನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ವಶಪಡಿಸಿಕೊಂಡಿರುವ ಲಸಿಕಾ ಬಾಟಲ್‌ಗಳ ಮೇಲೆ ಅವಧಿ ಮುಗಿತದ ದಿನಾಂಕ ಇಲ್ಲ ಎಂಬುದು ತಿಳಿದು ಬಂದಿದ್ದು, ಈ ಬಾಟಲುಗಳು ನಿಜವಾದವೋ ಅಥವಾ ನಕಲಿಯೋ ಎಂದು ಕಂಡುಹಿಡಿಯಲು ಪರೀಕ್ಷೆಗೆ ಕಳುಹಿಸಲಾಗುವುದು. ಈ ನಿಟ್ಟಿನಲ್ಲಿ ಆರೋಪಿತರನ್ನು ವಿಚಾರಣೆ ನಡೆಸಲಾಗುವುದು ಎಂದು ಕೋಲ್ಕತಾ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೋನಾ 3ನೇ ಅಲೆ ನಿರ್ವಹಣೆಗೆ 10 ಜನ ತಜ್ಞರ ಸಮಿತಿ ರಚಿಸಿದ ಪಶ್ಚಿಮ ಬಂಗಾಳ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...