Homeಮುಖಪುಟಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಕೊರೋನಾದ ರೂಪಾಂತರಿ ವೈರಸ್ಸು ದೇಶದಲ್ಲಿ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದ್ದು, ಇದನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಗುರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ದೇಶದ 80% ರಷ್ಟು ಜನರಿಗೆ ಲಸಿಕೆ ನೀಡುವವರೆಗೆ ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವುದು ಸೂಕ್ತ. ದೇಶದ ಯಾವ ಯಾವ ಸ್ಥಳಗಳಲ್ಲಿ ಕೊರೊನಾ ವೈರಸ್ಸಿನ ಡೆಲ್ಟಾ ಪ್ಲಸ್ ಪ್ರಬೇಧ ಪತ್ತೆಯಾಗಿದೆಯೊ ಆ ಸ್ಥಳಗಳ ಕುರಿತು ತೀವ್ರ ನಿಗಾ ವಹಿಸಿ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಹೊಸ ಹೊಸ ತಳಿಗಳಾಗಿ ಅತ್ಯಂತ ವೇಗವಾಗಿ ರೂಪಾಂತರ ಹೊಂದುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರಗಳು ವ್ಯಾಪಕವಾಗಿ ಮತ್ತು ಉಚಿತವಾಗಿ ಸಾರ್ವಜನಿಕ ಆಂದೋಲನಗಳ ಮೂಲಕ ಲಸಿಕೆಗಳನ್ನು ನೀಡಬೇಕು. ಈಗ ರಾಜ್ಯಗಳ ಬಳಿ 2.5 ಕೋಟಿ ಡೋಸ್ ಲಸಿಕೆಗಳಿವೆ ಎಂದು ಹೇಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ಬಳಿ ಎಷ್ಟಿವೆ ಎಂದು ಹೇಳುತ್ತಿಲ್ಲ. ಲಸಿಕೆ ಉತ್ಪಾದಕ ಕಂಪೆನಿಗಳು ಪ್ರತಿ ದಿನ ಸರ್ಕಾರಕ್ಕೆ ಮತ್ತು ಖಾಸಗಿಯವರಿಗೆ ನೀಡಿದ ಲಸಿಕೆಗಳ ಕುರಿತು ಪ್ರಕಟಣೆಗಳನ್ನು ಹೊರಡಿಸಬೇಕು” ಎಂದು ಆಗ್ರಹಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ, ನಾಯಕತ್ವ ದಿವಾಳಿಯಾಗಿದೆ: ಸಿದ್ದರಾಮಯ್ಯ

“ಮೂರನೆ ಅಲೆಯ ಕುರಿತು ತಜ್ಞರು ಮಾಡಿರುವ ಶಿಫಾರಸ್ಸುಗಳಂತೆ, ಖಾಸಗಿ ಆಸ್ಪತ್ರೆಗಳು ಕಂಪೆನಿಗಳಿಂದ ಲಸಿಕೆಗಳನ್ನು ಸ್ವೀಕರಿಸಿ ಗರಿಷ್ಠ 10 ದಿನಗಳ ಕಾಲ ಮಾತ್ರ ದಾಸ್ತಾನಿರಿಸಿಕೊಳ್ಳಬೇಕೆಂಬ ಕುರಿತು ಆದೇಶ ಹೊರಡಿಸುವಂತೆ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಮಾಡಬೇಕಾದ ಕೆಲಸ ಇದು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

‘ದೇಶದ ಸಮಸ್ತ ಜನರಿಗೆ ಮುಂದಿನ ಮೂರು – ನಾಲ್ಕು ತಿಂಗಳಲ್ಲಿ ಲಸಿಕೆ ಹಾಕುವಷ್ಟು ಪ್ರಮಾಣದಲ್ಲಿ ಉತ್ಪಾದಿಸಲು ಲಸಿಕೆಗಳ ಮೇಲಿನ ಪೇಟೆಂಟುಗಳನ್ನು ಮೊದಲು ಕಿತ್ತು ಹಾಕಬೇಕು. ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಓಲೈಕೆ ಮನಸ್ಥಿತಿಯಿಂದ ಹೊರಬಂದು, ಅವುಗಳ ಮೇಲೆ ಪ್ರಬಲ ಹಿಡಿತ ಸಾಧಿಸಬೇಕು. ಕೊರೊನಾ ಲಸಿಕೆಗಳನ್ನು ‘ಜೆನೆರಿಕ್ ಡ್ರಗ್’ಗಳ ವ್ಯಾಪ್ತಿಗೆ ತಂದು ಸರ್ಕಾರಗಳೆ ಉತ್ಪಾದನೆ ಮತ್ತು ವಿತರಣೆಗಳನ್ನು ನಿಯಂತ್ರಿಸಬೇಕು. ಹೀಗಾದರೆ ಗರಿಷ್ಠ 50 ರೂಪಾಯಿಗಳಿಗೆ ಲಸಿಕೆ ದೊರೆಯುತ್ತದೆ” ಎಂದು ಹೇಳಿದ್ದಾರೆ.

“ಮೋದಿಯವರು ಜೂನ್ 30 ರಂದು ‘ಕೋವಿನ್ ಗ್ಲೋಬಲ್ ಕಾನ್‍ಕ್ಲೇವ್’ ನಡೆಸಲು ಉದ್ದೇಶಿಸಿದ್ದಾರೆಂಬ ಮಾಹಿತಿ ಇದೆ. ಈ ಸಮಾವೇಶದಲ್ಲಿ ಭಾರತವು ಕೊರೋನವನ್ನು ಎದುರಿಸಿದ ರೀತಿಗಳನ್ನು ತಿಳಿಸುವುದಾಗಿ ಹೇಳಿದ್ದಾರೆ. ಇದಂತೂ ಅತ್ಯಂತ ನಾಚಿಕೆಗೇಡಿನ ಮತ್ತು ಅಸೂಕ್ಷ್ಮವಾದ ವಿಷಯ. ಕಳೆದ ಮಾರ್ಚ್ ತಿಂಗಳಿಂದ ದೇಶದಲ್ಲಿ ಏನೇನಾಯಿತು ಎಂದು ಜನರು ಮರೆತು ಬಿಟ್ಟಿದ್ದಾರೆಯೆ? ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು. ಅದರ ಬದಲಾಗಿ ಕೊರೋನಾದ ವಿರುದ್ಧ ವಿಜಯ ಸಾಧಿಸಿ ಬಿಟ್ಟಿದ್ದೇವೆ ಎಂಬಂತೆ ವಿಶ್ವದ ಜನರಿಗೆ ತಿಳಿಸಲು ಹೊರಟಿರುವುದನ್ನು ಏನೆನ್ನಬೇಕು? ಇದನ್ನು ನೋಡಿದರೆ ನಮ್ಮ ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆ ಎನ್ನಿಸುತ್ತದೆಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿ, ಅದಾನಿಯೆದರು ತೆಲೆಯೆತ್ತಲು ಬಿಎಸ್‌ವೈಗೆ ಧೈರ್ಯವಿಲ್ಲ: ವಿದ್ಯುತ್ ದರ ಏರಿಕೆಗೆ ಸಿದ್ದರಾಮಯ್ಯ ಖಂಡನೆ

“ಮೋದಿಯವರು ತಮ್ಮ ಸಾಧನೆಗಳ ಜಾಗತಿಕ ಸಮಾವೇಶ ನಡೆಸುವ ಬದಲು ವಿಶ್ವದ ನಾಯಕರುಗಳನ್ನು ಒತ್ತಾಯಿಸಿ ಕೊರೊನಾ ಲಸಿಕೆಯ ಮೇಲಿನ ಪೇಟೆಂಟುಗಳನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು.
ವಿಶ್ವದ ಜನ ಸಮುದಾಯಗಳ ಆರೋಗ್ಯವು ತುರ್ತುಪರಿಸ್ಥಿತಿಯಲ್ಲಿರುವಾಗ, ಕೊರೊನಾದ ನಿರ್ವಹಣೆಯನ್ನು ಆಯಾ ದೇಶಗಳಿಗೆ ಬಿಡುವುದು ಹಾಗೂ ಔಷಧ ಕಂಪೆನಿಗಳ ಲೂಟಿಗೆ ಅವಕಾಶ ಮಾಡಿಕೊಡುವುದು ಅತ್ಯಂತ ಅಪಾಯಕಾರಿಯಾದ ಸಂಗತಿ ಎಂದು ತಿಳಿಸಬೇಕು” ಎಂದು ಹೇಳಿದ್ದಾರೆ.

ಜಾಗತಿಕ ಸಮಸ್ಯೆಗೆ ಜಾಗತಿಕ ಪರಿಹಾರಗಳೆ ಬೇಕಾಗುತ್ತವೆಯೆ ಹೊರತು ಸ್ಥಳೀಯವಾಗಿ ಪರಿಹಾರ ಕಂಡುಕೊಳ್ಳಲಾಗದು. ಆದ್ದರಿಂದ ವಿಶ್ವ ಸಂಸ್ಥೆ ಮತ್ತು ವಿಶ್ವ ಆರೋಗ್ಯ ಸಂಸ್ಥೆಗಳು ಕ್ರಿಯಾಶೀಲಗೊಂಡು ಸದ್ಯದ ತುರ್ತುಪರಿಸ್ಥಿತಿಯನ್ನು ನಿಭಾಯಿಸುವ ಸಾಮೂಹಿಕ ಪ್ರಯತ್ನಗಳಾಗಬೇಕೆಂದು ಒತ್ತಾಯಿಸಬೇಕು. ಯಾಕೆಂದರೆ ವಿಶ್ವದ ಯಾವುದೋ ಭಾಗದಲ್ಲಿ ರೂಪಾಂತರಗೊಂಡ ವೈರಸ್ಸು ಬೆಂಕಿಯಂತೆ ಜಗತ್ತನ್ನು ಆವರಿಸಿ ಬಿಡಬಹುದು. ಹಾಗಾಗಿ ವಿವೇಕವುಳ್ಳ, ವೈಜ್ಞಾನಿಕ ಮನೋಭಾವವುಳ್ಳ ಮನುಷ್ಯರು ಒತ್ತಾಯಿಸಬೇಕಾದ ಕ್ರಮಗಳಿವು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇವುಗಳ ಜೊತೆಗೆ ಜಗತ್ತಿನ ಅನೇಕ ದೇಶಗಳು ತೆಗೆದುಕೊಂಡಿರುವ ಆರ್ಥಿಕ ಪುನಶ್ಚೇತನದ ಪ್ಯಾಕೇಜುಗಳನ್ನು ಘೋಷಿಸಬೇಕೆಂದು ಒತ್ತಾಯಿಸಿರುವ ಸಿದ್ದರಾಮಯ್ಯ ಅವರು, “ಈ ಸಲಹೆಗಳನ್ನು ಪ್ರಧಾನಿ ಮೋದಿಯವರಿಗೆ ತಿಳಿಸಿ ಅತ್ಯಂತ ತುರ್ತಾಗಿ ಮನುಷ್ಯ ಪರವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಜವಾಬ್ಧಾರಿ ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ಕೇಂದ್ರದ ಸಚಿವರುಗಳ ಮೇಲೆ ಇದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಈ ಕುರಿತು ಪ್ರಧಾನಿಗಳನ್ನು ಒತ್ತಾಯಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

“ಪ್ರತಿಯೊಬ್ಬರಿಗೂ ಲಸಿಕೆ, ಹೊಟ್ಟೆಗೆ ಅನ್ನ, ಒಂದಿಷ್ಟು ಆರ್ಥಿಕ ನೆರವು, ಉಚಿತ ಚಿಕಿತ್ಸೆ ನೀಡದಿದ್ದರೆ ಭಾರತ ವಿಶ್ವ ಗುರುವಾಗುವುದಿರಲಿ ಪಾಕಿಸ್ತಾನ, ಬಾಂಗ್ಲಾ, ಶ್ರೀಲಂಕ ಮತ್ತಿತರ ನೆರೆಯ ದೇಶಗಳ ಎದುರು ತಲೆ ಎತ್ತಿ ನಿಲ್ಲುವಂತೆ ಮಾಡಲಾಗದು ಎಂಬ ತಿಳಿವಳಿಕೆಯನ್ನು ಪ್ರಧಾನಿ ಮೋದಿಯವರಿಗೆ ತಿಳಿಸಬೇಕು” ಎಂದು ರಾಜ್ಯದಿಂದ ಆಯ್ಕೆಯಾದ ಸಂಸದರುಗಳನ್ನು ಮತ್ತು ರಾಜ್ಯದ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಬರೆದಿರುವ ಪತ್ರ

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...