Homeಕರೋನಾ ತಲ್ಲಣಸತತ 10 ತಿಂಗಳು ಕೊರೊನಾ ಸೋಂಕಿಗೆ ಒಳಗಾಗಿದ್ದ 72 ವರ್ಷದ ವೃದ್ಧ!

ಸತತ 10 ತಿಂಗಳು ಕೊರೊನಾ ಸೋಂಕಿಗೆ ಒಳಗಾಗಿದ್ದ 72 ವರ್ಷದ ವೃದ್ಧ!

- Advertisement -
- Advertisement -

72 ವರ್ಷದ ಬ್ರಿಟಿಷ್ ವೃದ್ಧರೊಬ್ಬರು ಸತತ 10 ತಿಂಗಳ ಕಾಲ ಕೊರೊನಾ ಸೋಂಕಿಗೆ ತುತ್ತಾಗಿದ್ದ ಘಟನೆ ವರದಿಯಾಗಿದೆ. ಇದು ಕೊರೊನಾ ಸೋಂಕಿನ ದಾಖಲೆಯ ಪ್ರಕರಣವಾಗಿದ್ದು, ’ಅತಿ ದೀರ್ಘಾವಧಿಯ ಪ್ರಕರಣ’ವೆಂದು ಸಂಶೋಧಕರು ತಿಳಿಸಿದ್ದಾರೆ.

ಪಶ್ಚಿಮ ಇಂಗ್ಲೆಂಡ್‌ನ ಬ್ರಿಸ್ಟಲ್‌ನ ನಿವೃತ್ತ ಚಾಲನಾ ತರಬೇತುದಾರ ಡೇವ್ ಸ್ಮಿತ್, 43 ಬಾರಿ ಕೊರೊನಾ ಪಾಸಿಟಿವ್‌ಗೆ ಒಳಗಾಗಿದ್ದಾರೆ. ಏಳು ಬಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಇಷ್ಟೇ ಅಲ್ಲದೇ, ತಮ್ಮ ಅಂತ್ಯಕ್ರಿಯೆಯ ಯೋಜನೆಗಳನ್ನು ರೂಪಿಸಿದ್ದರು ಎಂದು ಹೇಳಿದ್ದಾರೆ.

“ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ನಾನು ಕೆಲಸಕ್ಕೆ ರಾಜೀನಾಮೆ ನೀಡಿದೆ. ಕುಟುಂಬ ಸದಸ್ಯರನ್ನೆಲ್ಲಾ ಕರೆಸಿಕೊಂಡು, ಎಲ್ಲರೊಂದಿಗೆ ಮಾತನಾಡಿ, ವಿದಾಯ ಹೇಳಿದ್ದೆ” ಎಂದು ಡೇವ್ ಸ್ಮಿತ್ ಹೇಳಿದ್ದಾರೆ ಎಂದು  ಬಿಬಿಸಿ ಉಲ್ಲೇಖಿಸಿದೆ.

ಇದನ್ನೂ ಓದಿ: ಯುಪಿ ವಿಧಾನಸಭಾ ಚುನಾವಣೆಯಲ್ಲಿ ಮಾಯಾವತಿ, ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಅಖಿಲೇಶ್ ಯಾದವ್‌

ಡೆವ್‌ ಸ್ಮಿತ್ ಅವರೊಂದಿಗೆ ಕ್ವಾರಂಟೈನ್‌ನಲ್ಲಿದ್ದ ಅವರ ಪತ್ನಿ ಲಿಂಡಾ, “ಅವರು ಈ ಸೋಂಕಿನಿಂದ ಉಳಿಯುತ್ತಾರೆ ಎಂದು ನಾವು ಅಂದಾಜಿಸಿರಲು ಇಲ್ಲ. ಒಂದು ವರ್ಷ ನಮಗೆ ನರಕ ದರ್ಶನವಾಗಿದೆ” ಎಂದಿದ್ದಾರೆ.

ಬ್ರಿಸ್ಟಲ್ ವಿಶ್ವವಿದ್ಯಾಲಯ ಮತ್ತು ನಾರ್ತ್ ಬ್ರಿಸ್ಟಲ್ ಎನ್‌ಎಚ್‌ಎಸ್ ಟ್ರಸ್ಟ್‌ನ ಸಾಂಕ್ರಾಮಿಕ ರೋಗಗಳ ಸಲಹೆಗಾರ ಎಡ್ ಮೊರಾನ್, ”ಡೇವ್ ಸ್ಮಿತ್ ದೇಹದಲ್ಲಿ ಸತತ 10 ತಿಂಗಳು ಸಕ್ರಿಯ ವೈರಸ್ ಇತ್ತು. ಅದು ಕೇವಲ ಬಂದು ಹೋಗುವ ವೈರಸ್ ಆಲ್ಲ. ಸಕ್ರಿಯ ವೈರಸ್ ಎಂಬುದು ನಮಗೆ ವೈರಸ್ ಮಾದರಿಗಳನ್ನು ಪರೀಕ್ಷಿಸಿದ ಬಳಿಕ ತಿಳಿಯಿತು” ಎಂದು ಮಾಹಿತಿ ನೀಡಿದ್ದಾರೆ.

ಯುಎಸ್ ಬಯೋಟೆಕ್ ಸಂಸ್ಥೆ ರೆಜೆನೆರಾನ್ ಅಭಿವೃದ್ಧಿಪಡಿಸಿದ synthetic antibodies ಬಳಸಿ ನೀಡಿದ  ಚಿಕಿತ್ಸೆಯ ನಂತರ ಡೇವ್ ಸ್ಮಿತ್ ಚೇತರಿಸಿಕೊಂಡಿದ್ದಾರೆ. ಆದರೆ ಈ ಚಿಕಿತ್ಸೆಯನ್ನು ಬಳಸಲು ಬ್ರಿಟಿಷ್ ಆಡಳಿತ ಅನುಮತ ನೀಡಿಲ್ಲ. ಸಹಾನುಭೂತಿಯ ಆಧಾರದಲ್ಲಿ ಡೇವ್ ಸ್ಮಿತ್ ಮೇಲೆ ಬಳಸಲು ಅನುಮತಿ ನೀಡಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ರೆಜೆನೆರಾನ್ ಔಷಧಿಯನ್ನು ಪಡೆದ 45 ದಿನಗಳ ನಂತರ, ಒಟ್ಟು 305 ದಿನಗಳ ನಂತರ ಕೊರೊನಾ ನೆಗೆಟಿವ್ ವರದಿ ಬಂದಾಗ ಪತಿ ಮತ್ತು ಪತ್ನಿ ಇಬ್ಬರು ನಿಟ್ಟುಸಿರು ಬಿಟ್ಟಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...