Homeಅಂತರಾಷ್ಟ್ರೀಯಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

ಬ್ರಿಟನ್: ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ರಾಜೀನಾಮೆ ನೀಡಿದ ಆರೋಗ್ಯ ಸಚಿವ

- Advertisement -
- Advertisement -

ಭಾರತದಲ್ಲಿ ಕೋವಿಡ್ ನಿಯಮಾವಳಿಗಳ  ಪಾಲನೆ ಕುರಿತು ಕೇಂದ್ರ ಸರ್ಕಾರ ದೇಶದಲ್ಲಿ ಸಾಕಷ್ಟು ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದೆ. ಮಾಸ್ಕ್, ಸಾಮಾಜಿಕ ಅಂತರಗಳ ಪಾಲನೆ ಸೇರಿದಂತೆ ಕೋವಿಡ್ ಅಪ್ರಾಪ್ರಿಯೇಟ್ ಬಿಹೇವಿಯರ್ (CAB) ಎಂದು ಸಾಕಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ. ಜನಸಾಮಾನ್ಯರು ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡಗಳನ್ನು ವಿಧಿಸಲಾಗುತ್ತದೆ. ಕಠಿಣ ನಿಯಮಗಳ ಹೊರತಾಗಿಯೂ ಕಟ್ಟು ನಿಟ್ಟಾಗಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿದ ನಿದರ್ಶನಗಳು ಭಾರತದಲ್ಲಿ ಹೆಚ್ಚಾಗಿ ಕಾಣಿಸುವುದಿಲ್ಲ. ಜನಸಾಮಾನ್ಯರ ಜೊತೆ ಸರ್ಕಾರದ ಭಾಗವಾಗಿರುವ ಮಂತ್ರಿ, ಸಂಸದ- ಶಾಸಕರು ಮತ್ತು ಅಧಿಕಾರಿಗಳು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಸಾರ್ವಜನಿಕವಾಗಿ ಓಡಾಡುತ್ತಾರೆ. ಸಭೆ ಸಮಾರಂಭಗಳನ್ನು, ಚುನಾವಣಾ ಪ್ರಚಾರಗಳನ್ನು ನಡೆಸುತ್ತಾರೆ. ಈ ಕುರಿತು ಎಲ್ಲಿಯೂ ವರದಿಯಾಗುವುದಿಲ್ಲ. ಕೋವಿಡ್ ನಿಯಮಗಳ ಪಾಲನೆಯ ಮೂಲಕ ಜನಸಾಮಾನ್ಯರಿಗೆ ಮಾದರಿಯಾಗಬೇಕಿದ್ದ ಮಂತ್ರಿ ಮಹೋದಯರ ನಿಯಮ ಉಲ್ಲಂಘನೆಗೆ ಭಾರತದಲ್ಲಿ ಯಾವ ಶಿಕ್ಷೆಯೂ ಇಲ್ಲ. ಬ್ರಿಟನ್ ದೇಶದಲ್ಲಿ ಭಾರತದಂತೆ ಅಲ್ಲ. ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಕಾರಣಕ್ಕೆ ಬ್ರಿಟನ್‌ನ ಆರೋಗ್ಯ ಸಚಿವರೇ ಭಾರಿ ಬೆಲೆ ತೆತ್ತಿದ್ದಾರೆ. ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಮರೆತು ವರ್ತಿಸುತ್ತಿದ್ದ ಬ್ರಿಟನ್ ಆರೋಗ್ಯ ಮಂತ್ರಿ ಮ್ಯಾಟ್ ಹ್ಯಾಂಕಾಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮ್ಯಾಟ್ ಹ್ಯಾಂಕಾಕ್‌ ತಮ್ಮ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರೊಂದಿಗೆ ಸಲಿಗೆಯಿಂದ ನಡೆದುಕೊಂಡಿದ್ದು ಎಲ್ಲಾ ಸಾಮಾಜಿಕ ಅಂತರವನ್ನು ಮರೆತು ವರ್ತಿಸಿದ್ದರು. ಸಚಿವ ಹ್ಯಾಂಕಾಕ್ ತಮ್ಮ ಉದ್ಯೋಗಿಯೊಬ್ಬರನ್ನು ಕಚೇರಿಯಲ್ಲಿ ಚುಂಬಿಸುತ್ತಿರುವ ದೃಶ್ಯ ಎಲ್ಲೆಡೆ ಹರಿದಾಡಿತ್ತು. ಆರೋಗ್ಯ ಮಂತ್ರಿಗಳೇ ಸಾಮಾಜಿಕ ಅಂತರದ ವಿರುದ್ಧ ವರ್ತಿಸಿದ್ದರ ವಿರುದ್ಧ ಬ್ರಿಟನ್ ಜನತೆ ತೀವ್ರ ಆಕ್ರೋಶವನ್ನು ಹೊರ ಹಾಕಿದ್ದರು. ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಕೂಡ ಮ್ಯಾಟ್ ಹ್ಯಾಂಕಾಕ್‌ ವಿರುದ್ಧ ಸಾಕಷ್ಟು ವರದಿಗಳು ಭಿತ್ತರವಾಗಿದ್ದವು. ಹ್ಯಾಂಕಾಕ್ ರಾಜೀನಾಮೆಗೆ ಪ್ರಮುಖ ವಿರೋಧ ಪಕ್ಷವಾದ ಲೇಬರ್ ಪಾರ್ಟಿ ಪಟ್ಟು ಹಿಡಿದು ಪ್ರತಿಭಟನೆಯನ್ನು ನಡೆಸಿತ್ತು. ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸರ್ಕಾರವನ್ನು ಮುಜುಗರದಿಂದ ರಕ್ಷಿಸಲು ಆರೋಗ್ಯ ಸಚಿವ ಮ್ಯಾಟ್  ಹ್ಯಾಂಕಾಕ್‌ ಅವರಿಂದ ರಾಜೀನಾಮೆ ಪಡೆದಿದ್ದಾರೆ.

ದೇಶ ಸಾಂಕ್ರಾಮಿಕದ ಸಂಕಷ್ಟದಲ್ಲಿರುವಾಗ ಕರೊನಾ ವಿರುದ್ಧ ಹೋರಾಡುತ್ತ ಸಾಕಷ್ಟು ಜನರು ತಮ್ಮ ಅಮೂಲ್ಯ ಜೀವವನ್ನು ತ್ಯಾಗ ಮಾಡಿದ್ದಾರೆ. ಸಾವಿರಾರು ಬ್ರಿಟನ್ ಪ್ರಜೆಗಳು ಕೋವಿಡ್ ಕಾರಣದಿಂದ ತಮ್ಮ ಕುಟುಂಬಸ್ಥರನ್ನು, ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ಆದರೆ ಕೊರೊನಾ ವಿರುದ್ಧ ದೇಶವನ್ನು ಮುನ್ನಡೆಸುವ ಸ್ಥಾನದಲ್ಲಿ ನಿಂತು ನನ್ನಿಂದಲೆ ಸರ್ಕಾರದ ನಿಯಮಾವಳಿಗಳ ಉಲ್ಲಂಘನೆಯಾಗಿರುವುದು ಅಕ್ಷಮ್ಯ ಅಪರಾಧವಾಗಿದೆ. ದೇಶವನ್ನು ಭೀಕರ ವೈರಸ್‌ನಿಂದ ರಕ್ಷಿಸುವ ಹೊಣೆ ಹೊತ್ತು ಬ್ರಿಟನ್ ನಾಗರಿಕರ ತ್ಯಾಗವನ್ನು ಅವಮಾನಿಸುವ ವರ್ತನೆಯಿಂದ ಮುಜುಗರವಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನಿಡುವುದಾಗಿ ಶನಿವಾರ ಜೂನ್‌ 26 ರಂದು ಬ್ರಿಟನ್ ಪ್ರಧಾನಿ ಬೋರಿಸ್‌ ಜಾನ್ಸ್‌ನ್‌ಗೆ ಆರೋಗ್ಯ ಸಚಿವ ಮ್ಯಾಟ್ ಹ್ಯಾಂಕಾಕ್ ಪತ್ರ ಬರೆದಿದ್ದಾರೆ.

ಮ್ಯಾಟ್ ಹ್ಯಾಂಕಾಕ್‌ ಅವರಿಂದ ತೆರವಾದ ಆರೋಗ್ಯ ಸಚಿವರ ಸ್ಥಾನಕ್ಕೆ ಸಾಜಿದ್ ಜಾವಿದ್ ಅವರನ್ನು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ನೇಮಕ ಮಾಡಿದ್ದಾರೆ. ಸಾಜಿದ್ ಜಾವಿದ್ ಅವರು ಹಿಂದೆ ಬ್ರಿಟನ್‌ನ ಹಣಕಾಸು ಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದರು.


ಇದನ್ನೂ ಓದಿ : ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...