Homeಮುಖಪುಟಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

ಉದ್ಯೋಗ ಕೇಳಿದ ಯುವಜನರ ಮೇಲೆ ಲಾಠಿ ಪ್ರಯೋಗಿಸಿದ ಬಿಹಾರ ಸರ್ಕಾರ

- Advertisement -
- Advertisement -

ತಮ್ಮ ಉದ್ಯೋಗಗಳನ್ನು ಕೇಳಿಕೊಂಡು ಬಿಹಾರದ ‘ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ(ಎಸ್‌‌ಟಿಇಟಿ)’ಯ ಅಭ್ಯರ್ಥಿಗಳು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಈ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಪಾಟ್ನಾದ ಇಕೋ ಪಾರ್ಕ್‌ನಲ್ಲಿ ಭಾರಿ ಪ್ರತಿಭಟನೆ ನಡೆದಿದ್ದು, ಬಿಹಾರ ಶಿಕ್ಷಣ ಸಚಿವ ವಿಜಯ್ ಕುಮಾರ್ ಚೌಧರಿ ಅವರ ವಿರುದ್ಧ ಪ್ರತಿಭಟಿಸಲು ಎಸ್‌ಟಿಇಟಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು ಎಂದು ವರದಿಗಳು ಹೇಳಿವೆ.

ಎಸ್‌ಟಿಇಟಿ ಅಭ್ಯರ್ಥಿಗಳು ತಮ್ಮ ಉದ್ಯೋಗವನ್ನು ಕೋರಿ ಜಮಾಯಿಸಿದ್ದು, ರಾಜ್ ಭವನ ಮತ್ತು ಶಿಕ್ಷಣ ಸಚಿವರ ನಿವಾಸದ ಕಡೆಗೆ ಜಾಥಾ ಮಾಡಿದ್ದರು. ಪ್ರತಿಭಟನಾಕಾರರು ವಿಜಯ್ ಕುಮಾರ್ ಚೌಧರಿಯವರ ನಿವಾಸವನ್ನು ಘೆರಾವ್ ಮಾಡಲು ಯೋಜಿಸುತ್ತಿದ್ದಾರೆಂದು ತಿಳಿಯುತ್ತಿದ್ದಂತೆ, ಇಡೀ ಪ್ರದೇಶದಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿತ್ತು. ಇದರ ಪರಿಣಾಮವಾಗಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

ಇದನ್ನೂ ಓದಿ: ಸೆಂಟ್ರಲ್ ವಿಸ್ತಾ ಯೋಜನೆ ತಡೆಗೆ ಸುಪ್ರೀಂ ನಕಾರ: ಮೇಲ್ಮನವಿ ವಜಾ

“ನಿತೀಶ್‌ ಸರ್ಕಾರವು STET 2019 ರ ಅಭ್ಯರ್ಥಿಗಳ ಶಾಂತಿಯುತ ಪ್ರತಿಭಟನೆಗಳ ಮೇಲೆ ಲಾಠಿ ಚಾರ್ಜ್ ನಡೆಸಿ ಆ ಮೂಲಕ ಅಸಮಾಧಾನವನ್ನು ನಿಗ್ರಹಿಸಲು ಬಯಸಿದೆ. ಆದರೆ ಬಿಹಾರದ ಯುವಕರು ಇದಕ್ಕೆ ಅವಕಾಶ ನೀಡುವುದಿಲ್ಲ. ಸಾಮಾಜಿಕ ನ್ಯಾಯದ ನಿಬಂಧನೆಗಳನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸಿ ಮತ್ತು ಪಾರದರ್ಶಕಗೊಳಿಸಿ. ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ನೀಡಿ” ಎಂದು ರೆವಲ್ಯೂಷನರಿ ಯೂತ್‌ ಅಸೋಷಿಯೇಷನ್‌ ಹೇಳಿದೆ.

ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ನಿಷೇಧಿತ ಪ್ರದೇಶವನ್ನು ಉಲ್ಲಂಘಿಸಿದ್ದಕ್ಕಾಗಿ ಕೆಲವನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಎಸ್‌ಟಿಇಟಿ ಅಭ್ಯರ್ಥಿಗಳು ಏಕೆ ಪ್ರತಿಭಟಿಸುತ್ತಿದ್ದಾರೆ?

ಎಸ್‌ಟಿಇಟಿ ಎಂದರೆ ಸೆಕೆಂಡರಿ ಶಿಕ್ಷಕರ ಅರ್ಹತಾ ಪರೀಕ್ಷೆಯಾಗಿದೆ. ಕೆಲವು ಎಸ್‌ಟಿಇಟಿ ಅಭ್ಯರ್ಥಿಗಳ ಪ್ರಕಾರ, ಪರೀಕ್ಷೆಯ ನಂತರ ಉದ್ಯೋಗದ ನೀಡುವ ಭರವಸೆ ನೀಡಿದ್ದರೂ, ಅವರಿಗೆ ಶಿಕ್ಷಣ ಸಚಿವರಿಂದ ನೇಮಕಾತಿ ಪತ್ರ ಇನ್ನೂ ಬಂದಿಲ್ಲ. ಇದಲ್ಲದೆ, ಪರಿಕ್ಷೆಗಳಲ್ಲಿ ಹಗರಣ ನಡೆದಿದೆ ಎಂದು ಕೆಲವರು ಆರೋಪಿಸಿದ್ದಾರೆ. ಇನ್ನೂ ಕೆಲವರು, ಯಾವುದೇ ವಿವರಣೆಯಿಲ್ಲದೆ ತಮ್ಮ ಹೆಸರುಗಳನ್ನು ಆಯ್ಕೆಯ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೋರಾಟ ನಿರತ ರೈತರಿಂದ ದೆಹಲಿಯಲ್ಲಿ ‘ಕಿಸಾನ್ ಮೆಟ್ರೋ’ ಆರಂಭ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...