Homeಮುಖಪುಟಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆ; ಭಾರತದ ಭದ್ರತಾ ಪಡೆಗಳ ತೀವ್ರ ನಿಗಾ

ಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆ; ಭಾರತದ ಭದ್ರತಾ ಪಡೆಗಳ ತೀವ್ರ ನಿಗಾ

- Advertisement -
- Advertisement -

ಶನಿವಾರ ಮಧ್ಯರಾತ್ರಿಯಲ್ಲಿ ಜಮ್ಮು ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿಯ ನಂತರ ಜಮ್ಮುವಿನಲ್ಲಿ ಸತತವಾಗಿ ಡ್ರೊಣ್‌ಗಳು ಪತ್ತೆಯಾಗುತ್ತಿವೆ. ಅನಧಿಕೃತವಾಗಿ ಹಾರಾಡುತ್ತಿರುವ ಡ್ರೊಣ್‌ಗಳು ಭದ್ರತಾಪಡೆಗಳ ನೆಲೆಗಳ ಸಮೀಪವೇ ಕಾಣಿಸಿಕೊಳ್ಳುತ್ತಿವೆ. ನಿನ್ನ ರಾತ್ರಿ ಜಮ್ಮು ಹೊರವಲಯದಲ್ಲಿ ಮತ್ತೆ ಮೂರು ಡ್ರೋಣ್‌ಗಳು ಪತ್ತೆಯಾಗಿವೆ ಎಂದು ಭದ್ರತಾಪಡೆಗಳು ತಿಳಿಸಿವೆ.

ನಿನ್ನೆ ರಾತ್ರಿ 9:23 ಗಂಟೆಗೆ ಜಮ್ಮುವಿನ ಮಿರಾನ್ ಸಾಹೇಬ್ ಪ್ರದೇಶದಲ್ಲಿ ಡ್ರೋಣ್‌ ಒಂದು ಪತ್ತೆಯಾಗಿದ್ದರೆ ಇಂದು ಬೆಳಗಿನ ಜಾವ 4:40 ಗಂಟೆಗೆ  ಕಾಲುಚುಕ್ ಮತ್ತು ಕುಂಜ್ವಾನಿ ಪ್ರದೇಶದಲ್ಲಿ ಮತ್ತೆರಡು ಡ್ರೋಣ್‌ಗಳು ಪತ್ತೆಯಾಗಿವೆ.

ಜಮ್ಮು ವಿಮಾನ ನಿಲ್ಧಾಣದ ಮೇಲಿನ ದಾಳಿ ನಂತರ ಪ್ರತಿನಿತ್ಯ ಡ್ರೋಣ್‌ಗಳು ಕಾಣಿಸಿಕೊಳ್ಳುತ್ತಿದ್ದು ಭಾರತದ ಭದ್ರತಾ ವ್ಯವಸ್ಥೆಗೆ ತೀವ್ರ ಆತಂಕವನ್ನು ತಂದೊಡ್ಡಿವೆ.  ಮಂಗಳವಾರ ಮುಂಜಾನೆ ರತ್ನುಚಕ್, ಕಾಲುಚಕ್ ಮತ್ತು ಕುಂಜ್ವಾನಿ ಪ್ರದೇಶಗಳಲ್ಲಿ ಡ್ರೋಣ್ ಹಾರಾಟ ಕಂಡು ಬಂದಿದ್ದರೆ  ಸೋಮವಾರ ಕೂಡ ಜಮ್ಮುವಿನ ಕಾಲುಚಕ್ ಸೇನಾ ನೆಲೆಯ ಸಮೀಪ ಡ್ರೊಣ್‌ಗಳು ಹಾರಾಟ ನಡೆಸಿದ್ದವು.

ಜಮ್ಮು ಕಾಶ್ಮೀರ ಪೊಲೀಸ್‌ ಇಲಾಖೆ ಮತ್ತು ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಲಷ್ಕರೆ ತೋಯ್ಬಾ ಕಮ್ಯಾಂಡರ್ ಎಂದು ಗುರುತಿಸಲಾದ ಶಂಕಿತ ಉಗ್ರ ನದೀಮ್ ಅಬ್ರಾರ್ ಎಂಬುವವನ್ನು  ಸೋಮವಾರ ಬಂಧಿಸಿ ವಿಚಾರಣೆ ನಡೆಸುತ್ತಿದ್ದು ಮಂಗಳವಾರ ಪೊಲೀಸರು ಮತ್ತು ಉಗ್ರರ ನಡುವಿನ ದಾಳಿಯಲ್ಲಿ ನದೀಮ್ ಅಬ್ರಾರ್ ಮೃತಪಟ್ಟಿದ್ದಾನೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಗಡಿಯಾಚೆಗಿನ ಶಕ್ತಿಗಳು ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಲು ಡ್ರೋಣ್‌ಗಳನ್ನು ಬಳಸಿಕೊಳ್ಳುತ್ತಿವೆ. ಜಗತ್ತಿನ ಭದ್ರತಾ ವ್ಯವಸ್ಥೆಗೆ ಹೊದಸ ಮಾದರಿಯ ಡ್ರೋಣ್ ದಾಳಿಗಳು ಅತ್ಯಂತ ಅಪಾಯಕಾರಿ ಆಗಿದೆ ಎಂದು ಪರೋಕ್ಷವಾಗಿ ಪಾಕಿಸ್ತಾನದ ಮೇಲೆ ಭಾರತ ಆರೋಪಿಸಿದೆ.

ರಾಷ್ಟ್ರೀಯ ತನಿಖಾ ದಳ (NIA) ಜಮ್ಮು ವಿಮಾನ ನಿಲ್ಧಾಣದ ಮೇಲಿನ ಡ್ರೋಣ್‌ ದಾಳಿಯ ಕುರಿತಾಗಿ ತನಿಖೆ ನಡೆಸುತ್ತಿದ್ದು ಶನಿವಾರದ ಭಯೋತ್ಪಾದಕ ದಾಳಿಯ ಹಿಂದೆ ಲಷ್ಕರ್‌-ಎ-ತೈಬಾ ಸಂಘಟನೆಯ ಕೈವಾಡವನ್ನು ಶಂಕಿಸಲಾಗಿದೆ ಎಂದು ಭದ್ರತಾಪಡೆಯ ಮೂಲಗಳು ತಿಳಿಸಿವೆ. ಜಮ್ಮು ಕಾಶ್ಮೀರದ ಡಿಸಿಪಿ ದಿಲ್ಬಾಗ್‌ ಸಿಂಗ್  ಕೂಡ ಜಮ್ಮು ಡ್ರೋಣ್ ದಾಳಿಯ ಹಿಂದೆ ಲಷ್ಕರ್‌ ಕೈವಾಡವಿರುವ ಕುರಿತು ಸಾಕಷ್ಟು ಸಾಕ್ಷ್ಯಗಳು ಲಭ್ಯವಾಗಿವೆ ಎಂದಿದ್ದಾರೆ.

ಕಳೆದವಾರ ಭಾರತ ಪಾಕಿಸ್ತಾನದೊಂದಿಗೆ ವಿದೇಶಾಂಗ ಸಂಬಂಧವನ್ನು ಸುಧಾರಿಸಿಕೊಳ್ಳಲು ಬಯಸುತ್ತದೆ ಎಂದು ಭಾರತದ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಅರಿಂದಾಮ್ ಬಗ್ಚಿ ಹೇಳಿದ್ದರು .ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಪಾಕಿಸ್ತಾನದ ಐಎಸ್‌ಐ ಮುಖ್ಯಸ್ಥ ಜನರಲ್ ಫೈಜ್ ಹಮೀದ್ ನಡುವೆ ಕಳೆದ ಡಿಸೆಂಬರ್‌ನಲ್ಲಿ ಯುಎಇಯಲ್ಲಿ , ಕಾಶ್ಮೀರ ಗಡಿಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಕುರಿತಾದ ಮಾತುಕತೆ ಕೂಡ ನಡೆದಿದೆ. ಇವೆಲ್ಲ ಬೆಳವಣಿಗೆಗಳ ಫಲವಾಗಿ ಕಳೆದ ಫೆಬ್ರವರಿ 25 ರಂದು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿಗಳು ಕದನ ವಿರಾಮವನ್ನು ಘೋಷಿಸಿವೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧ ಸುಧಾರಿಸುವ ಲಕ್ಷಣಗಳು ಕಾಣತೊಡಗಿರುವಾಗ ಮತ್ತೆ ಜಮ್ಮ ಗಡಿಯಲ್ಲಿ  ಉಂಟಾಗಿರುವ ಉದ್ವಿಘ್ನ ಪರಿಸ್ಥಿತಿ ವಿದೇಶಾಂಗ ನೀತಿಯ ಮೇಲೆ ತೀವ್ರ ಪರಿಣಾಮವನ್ನುಂಟುಮಾಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜೂನ್‌ 24 ರಂದು ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದ ರಾಜಕೀಯ ನಾಯಕರನ್ನು ಭೇಟಿಯಾಗಿ ಚರ್ಚೆಯನ್ನು ನಡೆಸಿದ್ದರು. ಇದಾದ ಎರಡು ದಿನದಲ್ಲಿ ಕಾಶ್ಮೀರದಲ್ಲಿ ಮತ್ತೆ ಆತಂಕದ ವಾತಾವರಣ ನಿರ್ಮಾಣವಾಗಿದೆ. ಭಾರತದ ಭದ್ರತಾ ವ್ಯವಸ್ಥೆಗೆ ಹೊಸ ಹೊಸ ಆತಂಕಗಳು ಎದುರಾಗುತ್ತಿವೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಆರೋಪಿಗಳ ವಿರುದ್ಧ KOCCA ಕಾಯ್ದೆ ಕೈಬಿಡದಂತೆ ಸುಪ್ರೀಂ ತಡೆಯಾಜ್ಞೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...