Homeಮುಖಪುಟಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ನವಜೋತ್ ಸಿಂಗ್ ಸಿಧು

- Advertisement -
- Advertisement -

ಪಂಜಾಬ್‌ ಕಾಂಗ್ರೆಸ್‌ನಲ್ಲಿ ಒಡಕು ಮೂಡಿದ್ದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಅವರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಕಾಂಗ್ರೆಸ್‌ ಹೈಕಮಾಂಡ್ 2 ಬಾರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ದೆಹಲಿಗೆ ಕರೆಸಿಕೊಂಡು ಭಿನ್ನಮತ ಶಮನಕ್ಕೆ ಪ್ರಯತ್ನ ನಡೆಸಿದೆ. ಹೈಕಮಾಂಡ್ ಪ್ರಯತ್ನ ಯಶಸ್ವಿಯಾಗುವ ಸೂಚನೆಗಳು ಸದ್ಯಕ್ಕೆ ಕಾಣುತ್ತಿಲ್ಲ.

ಇಂದು ಪಂಜಾಬ್‌ ಕಾಂಗ್ರೆಸ್ ಮುಖಂಡ ಮತ್ತು ಶಾಸಕ ನವಜೋತ್ ಸಿಂಗ್ ಸಿಧು ಅವರು AICC ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಭೇಟಿಯಾಗಿ ಚರ್ಚೆಯನ್ನು ನಡೆಸಿದ್ದಾರೆ. ಪ್ರಿಯಾಂಕಾ ಗಾಂಧಿಯವರ ನಡುವಿನ ತಮ್ಮ ಭೇಟಿಯನ್ನು ಸಿಧು ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದು ಪಂಜಾಬ್ ಚುನಾವಣಾ ತಯಾರಿಯ ಕುರಿತು ದೀರ್ಘವಾದ ಚರ್ಚೆ ನಡೆದಿದೆ ಎಂದಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ನವಜೋತ್ ಸಿಂಗ್ ಸಿಧು ನಿನ್ನೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಗೆ ಅವಕಾಶ ಕೇಳಿದ್ದು ರಾಹುಲ್‌ ಭೇಟಿಯನ್ನು ನಿರಾಕರಿಸಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ. ನವಜೋತ್‌ ಸಿಂಗ್ ಮತ್ತು ರಾಹುಲ್ ಭೇಟಿಯ ಕುರಿತು ಮಾಧ್ಯಮಗಳು ಪ್ರಶ್ನಿಸಿದಾಗ ಆ ರೀತಿಯ ಯಾವ ಸಭೆ ಕೂಡ ನಡೆಯುತ್ತಿಲ್ಲ. ಸಿಧು ಭೇಟಿಯ ವಿಷಯ ತಮಗೆ ತಿಳಿದಿಲ್ಲ ಎಂದು ರಾಹುಲ್ ವದಂತಿಯನ್ನು ತಳ್ಳಿ ಹಾಕಿದ್ದರು.

ನವಜೋತ್ ಸಿಂಗ್ ಸಿಧು ಅವರು ಉಪಮುಖ್ಯ ಮಂತ್ರಿ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದು ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್ ಸಿಂಗ್‌ ಸಿಧು ಬೇಡಿಕೆಗೆ ಒಪ್ಪಿಲ್ಲ. ಹೀಗಾಗಿ ಕ್ಯಾಪ್ಟನ್ ಮತ್ತು ಸಿಧು ನಡುವೆ ಆಂತರಿಕ ಕಚ್ಚಾಟ ಆರಂಭವಾಗಿದೆ ಎಂದು ಪಂಜಾಬ್ ಕಾಂಗ್ರೆಸ್‌ನ ನಾಯಕರೊಬ್ಬರು ತಿಳಿಸಿದ್ದಾರೆ. ನವಜೋತ್ ಸಿಂಗ್ ಸಿಧು ಜೂನ್‌ ಆರಂಭದಿಂದಲೂ ಕಾಂಗ್ರೆಸ್‌ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿಯವರ ಭೇಟಿಗೆ ಅವಕಾಶ ಕೇಳುತ್ತಿದ್ದು ಸಿಧು ಅವರಿಗೆ ಸೋನಿಯಾ ಅವರನ್ನು ಭೇಟಿಯಾಗುವ ಅವಕಾಶ ಇದುವರೆಗೆ ಸಿಕ್ಕಿಲ್ಲ.

ಇದನ್ನೂ ಓದಿ: ಕಾಸರಗೋಡು ಗಡಿ ಗ್ರಾಮಗಳ ಹೆಸರು ಬದಲಿಸುವಿಕೆ: ಸತ್ಯ ಮತ್ತು ಅರೆಸತ್ಯಗಳು

2022 ರ ಆರಂಭದಲ್ಲಿ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ವಿರೋಧ ಪಕ್ಷಗಳಾದ ಶಿರೋಮಣಿ ಅಕಾಲಿದಳ, ಆಮ್‌ ಆದ್ಮಿ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ದಿನ ನಿತ್ಯದ ವಿದ್ಯಮಾನವಾಗಿದೆ. ಪಂಜಾಬ್ ಕಾಂಗ್ರೆಸ್‌ನ ಭಿನ್ನಾಭಿಪ್ರಾಯಗಳು ದೆಹಲಿಯ ನಾಯಕರಿಗೆ ನಿದ್ದೆಗೆಡಿಸಿದ್ದು ಸಮಸ್ಯೆಯನ್ನು ಬಗೆಹರಿಸುವ ಎಲ್ಲ ಪ್ರಯತ್ನಗಳು ವಿಫಲವಾಗುತ್ತಲೇ ಇದೆ.

ಈ ನಡುವೆ ನವಜೋತ್‌ ಸಿಂಗ್ ಸಿಧು ಆಮ್‌ ಆದ್ಮಿ ಪಕ್ಷವನ್ನು ಸೇರುತ್ತಾರೆ ಎಂಬ ವದಂತಿಗಳು ಹರಿದಾಡುತ್ತಿದ್ದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜೊತೆ ಈ ಸಂಬಂಧ ಚರ್ಚೆ ನಡೆಸಿದ್ದಾರೆ ಎಂದು ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಈ ಹಿಂದೆ ಆರೋಪಿಸಿದ್ದರು.

ಇದನ್ನೂ ಓದಿ: ಪಿಕೆ ಟಾಕೀಸ್; ಮುಂದುವರೆದ ದೇಶದ ಸಾಮಾಜಿಕ, ಆರ್ಥಿಕ, ಧಾರ್ಮಿಕ ಸಂಕೋಲೆಗಳಲ್ಲಿ ಸಿಕ್ಕಿಕೊಂಡವರ ಕಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...