ರೈತ ಹೋರಾಟದ ಸ್ಥಳಗಳಲ್ಲಿ ಒಂದಾದ ಘಾಜಿಪುರ ಗಡಿಯಲ್ಲಿ ಬುಧವಾರ ರೈತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷಉಂಟಾಗಿದೆ. ಇಂದು ಬೆಳಗ್ಗೆ ಉತ್ತರ ಪ್ರದೇಶ ಗೇಟ್ ಬಳಿಯ ರೈತರ ಪ್ರತಿಭಟನಾ ಸ್ಥಳದ ಬಳಿ ಬಿಜೆಪಿ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ದಾಂಧಲೆ ನಡೆಸಿದ್ದಾರೆಂದು ಭಾರತೀಯ ಕಿಸಾನ್ ಯೂನಿಯನ್ ಆರೋಪಿಸಿದೆ.
ಉತ್ತರ ಪ್ರದೇಶದ ನೂತನ ಸಚಿವರಾಗಿ ಆಯ್ಕೆಯಾಗಿರುವ ಅಮಿತ್ ವಾಲ್ಮಿಕಿ ಅವರನ್ನು ಸ್ವಾಗತಿಸಿಸುವ ನೆಪದಲ್ಲಿ ದೆಹಲಿ – ಮೀರತ್ ಎಕ್ಸ್‌ಪ್ರೆಸ್ ವೇನಲ್ಲಿರುವ ಪ್ರತಿಭಟನಾ ಸ್ಥಳದ ಬಳಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು, ಡೋಲು ಬಾರಿಸುತ್ತ ರೈತ ವಿರೋಧಿ ಘೋಷಣೆಗಳನ್ನು ಕೂಗುವ ಮೂಲಕ ರೈತರನ್ನು ಪ್ರಚೋಧಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಹಳ್ಳಿಗಳ ಕನ್ನಡ ಹೆಸರು ಮಲಯಾಳೀಕರಣ: ವಿವಾದದ ಬಗ್ಗೆ ಕೇರಳ ಸಿಎಂ ಪ್ರತಿಕ್ರಿಯೆ ಹೀಗಿದೆ!
ಬಳಿಕ ಪ್ರತಿಭಟನಾ ಸ್ಥಳದಲ್ಲಿ ದಾಂಧಲೆ ಶುರುವಿಟ್ಟುಕೊಂಡ ಬಿಜೆಪಿಗರು ಹೋರಾಟದ ವೇದಿಕೆಯನ್ನು ಆಕ್ರಮಿಸಿಕೊಳ್ಳಲು ಯತ್ನಿಸಿದರು. ಈ ವೇಳೆ ಗಲಭೆಕೋರರನ್ನು ತಡೆಯಲು ಮುಂದಾದ ನಮ್ಮ ಮೇಲೆ ಬಿಜೆಪಿಗರು ಹಲ್ಲೆ ನಡೆಸಿದರು ಎಂದು ರೈತ ಹೋರಾಟಗಾರರು ಆರೋಪಿಸಿದ್ದಾರೆ.
ಘಟನೆಯಲ್ಲಿ ಹೋರಾಟ ನಿರತ ರೈತರಿಗೆ ಗಾಯಗಳಾಗಿದ್ದು, ಕೆಲ ವಾಹನಗಳು ಜಖಂಗೊಂಡಿವೆ. ಇದೇ ವೇಳೆ ಬಿಜೆಪಿಯ ಕಾರ್ಯಕರ್ತನೊಬ್ಬ ರೈತರ ಮೇಲೆ ಕತ್ತಿ ಎತ್ತಿಕೊಂಡು ಹಲ್ಲೆಗೆ ಮುಂದಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದನ್ನೂ ಓದಿ: ಲಕ್ಷದ್ವೀಪ ಆಡಳಿತಾಧಿಕಾರಿಗೆ ಮತ್ತೊಮ್ಮೆ ಹಿನ್ನಡೆ; ಮನೆ ಧ್ವಂಸ ಪ್ರಕ್ರಿಯೆಗೆ ಹೈಕೋರ್ಟ್ ತಡೆ


