Homeಮುಖಪುಟಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

- Advertisement -
- Advertisement -

ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾಂಕ್ರಾಮಿಕ ಮತ್ತು ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಎನ್ನಲು, ಡೆಲ್ಟಾ ಪ್ಲಸ್ ವೈರಸ್‌ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಎಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

ಜನರು ಕೊರೊನಾ ಮಾರ್ಗಸೂಚಿಗಳನ್ನು ಸೂಕ್ತವಾಗಿ ಅನುಸರಿಸಿದರೆ ಮತ್ತು ಕೊರೊನಾ ವ್ಯಾಕ್ಸಿನೇಷನ್ ತೆಗೆದುಕೊಂಡರೆ, ಮುಂಬರುವ ಯಾವುದೇ ರೂಪಾಂತರಿ ವೈರಸ್‌ಗಳ ವಿರುದ್ಧ ಹೋರಾಡಬಹುದು ಮತ್ತು ಸುರಕ್ಷಿತವಾಗಿರಬಹುದು ಎಂದು ಡಾ.ರಂದೀಪ್ ಗುಲೇರಿಯಾ ಸಲಹೆ ನೀಡಿದ್ದಾರೆ.

“ಡೆಲ್ಟಾ ಪ್ಲಸ್ ರೂಪಾಂತರಿಯು ಹೆಚ್ಚು ಸಾಂಕ್ರಾಮಿಕ, ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಮತ್ತು  ರೋಗನಿರೋಧಕ ಶಕ್ತಿಯನ್ನು ಮೀರಿ ಸೋಂಕಿತರನ್ನಾಗಿಸುತ್ತದೆ ಎಂದು ಸೂಚಿಸಲು ಹೆಚ್ಚಿನ ಡೇಟಾ ಇಲ್ಲ. ಆದರೆ ನಾವು ಕೊರೊಬಾ ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸಿದರೆ ಮತ್ತು ಲಸಿಕೆ ತೆಗೆದುಕೊಂಡರೆ, ಯಾವುದೇ ರೂಪಾಂತರಿ ವೈರಸ್‌ಗಳಿಂದ ವಿರುದ್ಧ ಸುರಕ್ಷಿತವಾಗಿರುತ್ತೇವೆ” ಎಂದು ಡಾ ಗುಲೇರಿಯಾ ಹೇಳಿದ್ದಾರೆ ಎಂದು ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್‌ ರೂಪಾಂತರಿಯು ಮೂರನೇ ಅಲೆಗೆ ಕಾರಣವಾಗಬಹುದು: ಟಾಸ್ಕ್ ಫೋರ್ಸ್ ಎಚ್ಚರಿಕೆ

ಕೊರೊನಾ ಸಾಂಕ್ರಾಮಿಕದ ಸಮಯದಲ್ಲಿ ಪ್ರಾಣ ಕಳೆದುಕೊಂಡ ಆರೋಗ್ಯ ಕಾರ್ಯಕರ್ತರನ್ನು ವೈದ್ಯರ ದಿನದಂದು ಏಮ್ಸ್ ನಿರ್ದೇಶಕರ ರಂದೀಪ್ ಗುಲೇರಿಯಾ ನೆನಪಿಸಿಕೊಂಡಿದ್ದಾರೆ.

“ಕಳೆದ ಒಂದು ವರ್ಷದಿಂದ ವೈದ್ಯರು ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡುತ್ತಿದ್ದಾರೆ. ಅವರ ಕೆಲಸವನ್ನು ನಾವು ಪ್ರಶಂಸಿಸಬೇಕು. ಈ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದವರನ್ನು ಸಹ ನಾವು ನೆನಪಿಸಿಕೊಳ್ಳಬೇಕು. ಅವರನ್ನು ನೆನಪಿಸಿಕೊಳ್ಳುವಾಗ, ಇಂತಹ ಪ್ರಕರಣಗಳು ಮತ್ತಷ್ಟು ಹೆಚ್ಚಾಗದಂತಹ ಪರಿಸ್ಥಿತಿಯನ್ನು ಸೃಷ್ಟಿಸಬೇಕು” ಎಂದಿದ್ದಾರೆ.

“ನಾವು ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ವೈದ್ಯರು ಮತ್ತು ಆಸ್ಪತ್ರೆಗಳ ಮೇಲೆ ಕಡಿಮೆ ಒತ್ತಡ ಉಂಟಾಗುವಂತೆ ಎಲ್ಲರು ಲಸಿಕೆ ಹಾಕಿಸಿಕೊಳ್ಳಬೇಕು “ಎಂದು ಹೇಳಿದ್ದಾರೆ.

ಇದರ ಜೊತೆಗೆ ವೈದ್ಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿಷಯವನ್ನು ಪ್ರಸ್ತಾಪಿಸಿ, ಇದು ವೈದ್ಯಕೀಯ ಸಮುದಾಯಕ್ಕೆ ನಿರಾಶಾದಾಯಕವಾಗಿದೆ ಎಂದು ಡಾ. ಗುಲೇರಿಯಾ ಹೇಳಿದ್ದಾರೆ.

“ವೈದ್ಯರು ಮಾಡುತ್ತಿರುವ ಕೆಲಸವನ್ನು ನಾವು ಮೆಚ್ಚಬೇಕು ಮತ್ತು ಗೌರವಿಸಬೇಕು ಮತ್ತು ವೈದ್ಯರ ಮೇಲಿನ ದೌರ್ಜನ್ಯವನ್ನು ಖಂಡಿಸಬೇಕು. ಇದು ವೈದ್ಯಕೀಯ ಸಮುದಾಯಕ್ಕೆ ಧೈರ್ಯಗೆಡಿಸುವ ಒಂದು ಕೃತ್ಯವಾಗಿದೆ” ಎಂದು ಏಮ್ಸ್ ನಿರ್ದೇಶಕರು ಆತಂಕ ವ್ಯಕ್ತಪಡಿಸಿದ್ದಾರೆ.

ಹೈದರಾಬಾದ್‌ನ ಯಶೋಧಾ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಘ್ನೇಶ್ ನಾಯ್ಡು, ’ಒಂದು ರೂಪಾಂತರಿ ತಳಿ ಇನ್ನೂ ಬೇರೆ ಬೇರೆ ರೀತಿಯಲ್ಲಿ ಹೊಸ ರೂಪಾಂತರ ಪಡೆದುಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ವೈರಸ್‌ನ ಮೂಲಸ್ವರೂಪವೇ ಬದಲಾಗಿ ಹೊಸ ಸ್ವರೂಪದಲ್ಲಿ ಕಾಣಿಸಿಕೊಳ್ಳುತ್ತಿರುವುದು ಲಸಿಕೆ ಮತ್ತು ಚಿಕಿತ್ಸಾ ವಿಧಾನಗಳ ಪರಿಣಾಮವನ್ನು ಕುಂಠಿತಗೊಳಿಸುತ್ತಿವೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್ ಜೊತೆಗೆ ಇತರ 4 ಅಪಾಯಕಾರಿ ರೂಪಾಂತರಿಗಳಿವೆ: ತಜ್ಞರ ಎಚ್ಚರಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಪ್ರಕರಣ: ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸಿಎಂಗೆ ರಾಹುಲ್ ಗಾಂಧಿ ಪತ್ರ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...