Homeಕರ್ನಾಟಕಧಾರ್ಮಿಕ ಸ್ಥಳಗಳಿಂದಾಗುತ್ತಿರುವ ಶಬ್ಧ ಮಾಲಿನ್ಯ ತಡೆಗೆ ಕ್ರಮಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ

ಧಾರ್ಮಿಕ ಸ್ಥಳಗಳಿಂದಾಗುತ್ತಿರುವ ಶಬ್ಧ ಮಾಲಿನ್ಯ ತಡೆಗೆ ಕ್ರಮಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ಧಾರ್ಮಿಕ ಸ್ಥಳಗಳಿಂದ ಉಂಟಾಗುತ್ತಿರುವ ಶಬ್ಧ ಮಾಲಿನ್ಯ ತಡೆಗೆ ಕ್ರಮಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್‌ ನಿನ್ನೆ ಪೊಲೀಸ್‌ ಇಲಾಖೆಗೆ ಕಠಿಣ ನಿರ್ದೇಶನಗಳನ್ನು ನೀಡಿದೆ. ಪದೇ ಪದೇ ಹೇಳಿದ್ದನೇ ಹೇಳುವಷ್ಟು ನ್ಯಾಯಾಲಯಕ್ಕೆ ವ್ಯವಧಾನವಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಪೊಲೀಸ್‌ ಇಲಾಖೆ ತ್ವರಿತವಾಗಿ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ.

ಈ ಹಿಂದೆ ಧಾರ್ಮಿಕ ಸ್ಥಳ ಮತ್ತು ಸಮಾರಂಭಗಳಲ್ಲಿ ಧ್ವನಿ ವರ್ಧಕ ಮತ್ತು ಡಿಜೆ ಸಂಗೀತಗಳು ಬಳಕೆಯಾಗುವ ಕುರಿತು ಸಾಕಷ್ಟು ಜನರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ದಾಖಲಿಸಿದ್ದರು. ಹೈಕೋರ್ಟ್‌ ಆನೇಕ ಬಾರಿ ಈ ಸಂಬಂಧ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರೂ ಪೊಲೀಸ್‌ ಇಲಾಖೆ ಮಾತ್ರ ಇದುವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ನಿನ್ನೆ ಬೆಂಗಳೂರು ನಗರ ಕಮಿಷನರ್ ಕಮಲ್ ಪಂತ್‌, “ಇದುವರೆಗೆ ಶಬ್ಧ ಮಾಲಿನ್ಯಕ್ಕೆ ಸಂಬಂಧಪಟ್ಟ ಹಾಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (KSPCB) 11 ದೂರುಗಳು ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಪೊಲೀಸ್‌ ಇಲಾಖೆ ಠಾಣಾ ಮಟ್ಟದಲ್ಲಿ ಈ ಕುರಿತು ಕ್ರಮ ಕೈಗೊಳ್ಳುತ್ತಿದ್ದು ಪರಿಸರ ಸಂರಕ್ಷಣೆ ಕಾಯ್ದೆ ಮತ್ತು ಶಬ್ಧ ಮಾಲಿನ್ಯ ನಿಯಂತ್ರಣ ನಿಯಮಗಳು 2000 ಅಡಿಯಲ್ಲಿ ತನಿಖೆಯನ್ನು ಕೂಡ ನಡೆಸುತ್ತಿದೆ” ಎಂದು ಹೈಕೋರ್ಟ್‌ನಲ್ಲಿ ಅಫಿಡೆವಿಟ್‌ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬದುಕುವ ಹಕ್ಕಿಗೆ ತೊಂದರೆಯಾದಾಗ ಧಾರ್ಮಿಕ ಹಕ್ಕನ್ನು ಹಿಂದಕ್ಕೆ ತಳ್ಳಬಹುದು: ಮದ್ರಾಸ್ ಹೈಕೋರ್ಟ್‌

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಪೊಲೀಸ್‌ ಸಿಬ್ಬಂದಿಗಳಿಗೆ ಶಬ್ಧ ಹೊರಸೂಸುವಿಕೆ ಪ್ರಮಾಣವನ್ನು ಅಳೆಯುವ ತರಬೇತಿಯನ್ನು ನೀಡುತ್ತಿದ್ದು, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಶಬ್ಧ ಮಾಲಿನ್ಯದ ಪ್ರಮಾಣ ಅಳೆಯುವ ಉಪಕರಣಗಳನ್ನು ಪೊಲೀಸ್‌ ಇಲಾಖೆ ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿದೆ ಎಂದು ಅಫಿಡೆವಿಟ್‌ನಲ್ಲಿ ಹೇಳಲಾಗಿದೆ.

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್‌ ಪಂತ್‌ ಸಲ್ಲಿಸಿದ ಅಫಿಡೆವಿಟ್‌ ನಿಂದ ಸಮಾಧಾನಗೊಳ್ಳದ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ಹೈಕೋರ್ಟ್‌ ವಿಭಾಗೀಯ ಪೀಠ ಹೆಚ್ಚುವರಿ ಅಫಿಡೆವಿಟ್‌ ಸಲ್ಲಿಸುವಂತೆ ಪೊಲೀಸ್‌ ಇಲಾಖೆಗೆ ನಿರ್ದೇಶನವನ್ನು ನೀಡಿತು. ಎಸಿಪಿಗಳಿಗೆ ಮಾಲಿನ್ಯ ನಿಯಂತ್ರಣ ಕಾಯ್ದೆಯ 19 ನೇ ಸೆಕ್ಷನ್‌ ಅಡಿ ಧಾರ್ಮಿಕ ಸ್ಥಳಗಳ ಮೇಲೆ ಕ್ರಮ ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂಬುದನ್ನು ನ್ಯಾಯಾಲಯದ ಮುಂದೆ ಸ್ಪಷ್ಟ ಪಡಿಸಿ ಎಂದು ಆದೇಶಿಸಿ ಪ್ರಕರಣದ ವಿಚಾರಣೆಯನ್ನು ಮುಂದೂಡಿತು.

ಗಿರೀಶ್ ಭಾರದ್ವಾಜ್ ಎಂಬುವವರು ಧಾರ್ಮಿಕ ಸ್ಥಳಗಳಲ್ಲಿ ಲೌಡ್‌ ಸ್ಪೀಕರ್ ಮುಂತಾದ ಉಪಕರಣಗಳನ್ನು ಅನುಮತಿ ನೀಡಿದ ಪ್ರಮಾಣಕ್ಕಿಂತಲೂ ಹೆಚ್ಚು ಬಳಸಲಾಗುತ್ತಿದೆ. ನಿಯಮಿತ ಪ್ರಮಾಣದಲ್ಲಿ ಮಾತ್ರ ಧ್ವನಿ ವರ್ಧಕಗಳ ಬಳಕೆಗೆ ಅವಕಾಶ ನೀಡಲಾಗಿದ್ದು ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದ್ದರೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದಿಂದ ಅನುಮತಿಯನ್ನು ಪಡೆಯದೇ ಅಕ್ರಮವಾಗಿ ಕೆಲವು ಧಾರ್ಮಿಕ ಸ್ಥಳಗಳು ಧ್ವನಿ ವರ್ಧಕಗಳನ್ನು ಬಳಸುತ್ತಿವೆ. ಇದರಿಂದಾಗಿ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್‌ನಲ್ಲಿ ಸಾವರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.


ಇದನ್ನೂ ಓದಿ: ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...