Homeಅಂತರಾಷ್ಟ್ರೀಯಬ್ರೆಜಿಲ್‌: ಲಸಿಕೆ ಖರೀದಿ ಹಗರಣ - ಅಧ್ಯಕ್ಷ ಬೊಲ್ಸನಾರೊ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಬ್ರೆಜಿಲ್‌: ಲಸಿಕೆ ಖರೀದಿ ಹಗರಣ – ಅಧ್ಯಕ್ಷ ಬೊಲ್ಸನಾರೊ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

- Advertisement -
- Advertisement -

ಕೋವಿಡ್ ಲಸಿಕೆಗಳ ಖರೀದಿ ಅವ್ಯವಹಾರದಲ್ಲಿ ಬ್ರೆಜಿಲ್ ಅಧ್ಯಕ್ಷ ಜೈರ್ ಬೊಲ್ಸನಾರೊ ಪಾತ್ರ ಕುರಿತು ತನಿಖೆ ನಡೆಸುವಂತೆ ಬ್ರೆಜಿಲ್ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಕರ್ತವ್ಯ ಲೋಪದ ಕುರಿತು ವಿಶೇಷ ವಿಚಾರಣಾಧೀಕಾರಿಗಳ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕೆಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ರೋಸಾ ವೆಬ್ಬರ್ ಆದೇಶಿಸಿದ್ದಾರೆ.

ಅಧ್ಯಕ್ಷ ಬೊಲ್ಸನಾರೊ ಭಾರತ ಬಯೋಟೆಕ್‌ ಕಂಪನಿಯ ಜೊತೆ ಕೋವ್ಯಾಕ್ಸಿನ್ ಲಸಿಕೆ ಖರೀದಿಯ ಸಂಬಂಧ ಫೆಭ್ರುವರಿಯಲ್ಲಿ 316 ಮಿಲಿಯನ್ ಡಾಲರ್‌ ರೂಪಾಯಿ ಮೊತ್ತದ ಬೃಹತ್ ಒಪ್ಪಂದಕ್ಕೆ ಸಹಿ ಹಾಕಿದ್ದರು. ಈ ಒಪ್ಪಂದದ ಪ್ರಕಾರ ಭಾರತ್ ಬಯೋಟೆಕ್ ಕಂಪನಿ ಬ್ರೆಜಿಲ್‌ಗೆ 20 ಮಿಲಯನ್‌ ವ್ಯಾಕ್ಸಿನ್ ಡೋಸ್‌ಗಳನ್ನು ಪೂರೈಕೆ ಮಾಡಬೇಕಿತ್ತು. ವ್ಯಾಕ್ಸಿನ್ ಖರೀದಿಯಲ್ಲಿ ವ್ಯಾಪಕ ಹಗರಣ ನಡೆದಿದೆ ಮತ್ತು ಹೆಚ್ಚಿನ ಬೆಲೆಗೆ ವ್ಯಾಕ್ಸಿನ್ ಖರೀದಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಕಾರಣ ಬ್ರೆಜಿಲ್ ಸರ್ಕಾರ ಒಪ್ಪಂದವನ್ನು ರದ್ದು ಮಾಡಿತ್ತು.

ಬೊಲ್ಸನಾರೊ ಸರ್ಕಾರದ ಕೋವಿಡ್‌ ನಿರ್ವಹಣೆಯ ತನಿಖೆ ನಡೆಸುತ್ತಿರುವ ಸಂಸದೀಯ ಸಮಿತಿ ವ್ಯಾಕ್ಸಿನ್‌ ಖರೀದಿಯಲ್ಲಿ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆದಿರುವ ಕುರಿತು ಸಂಶಯ ವ್ಯಕ್ತಪಡಿಸಿದ ಪರಿಣಾಮ ಬ್ರೆಜಿಲ್ ಸರ್ಕಾರ ವ್ಯಾಕ್ಸೀನ್‌ ಖರೀದಿಯನ್ನೇ ಕೈಬಿಟ್ಟಿದೆ.

ಬ್ರೆಜಿಲ್‌ನ ಫೆಡರಲ್ ತನಿಖಾಧಿಕಾರಿಗಳು ಮತ್ತು ಕಂಟ್ರೋಲರ್‌ ಜನರಲ್‌ ಕಚೇರಿಯು ವ್ಯಾಕ್ಸಿನ್ ಖರೀದಿಯಲ್ಲಿನ ಅವ್ಯವಹಾರದ ಕುರಿತು ಪ್ರತ್ಯೇಕ ತನಿಖೆ ನಡೆಸುತ್ತಿದೆ. ಬ್ರೆಜಿಲ್ ಸರ್ಕಾರದ ಮುಖ್ಯ ಸಚೇತಕರಾದ ರಿಕಾರ್ಡೋ ಬರೋಸ್‌ ಅವ್ಯವಹಾರದಲ್ಲಿ ಶಾಮೀಲಾಗಿದ್ದಾರೆ ಎಂಬ ಶಂಕೆ ತನಿಖೆಯಲ್ಲಿ ವ್ಯಕ್ತವಾಗಿದೆ.

ಅಧ್ಯಕ್ಷ ಬೊಲ್ಸನಾರೊ ಮತ್ತು ರಿಕಾರ್ಡೋ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ಬೊಲ್ಸೆನಾರೋ ವಿರುದ್ಧದ ತನಿಖೆ ಸುಪ್ರೀಂ ಕೋರ್ಟ್‌ ಉಸ್ತುವಾರಿಯಲ್ಲಿ ನಡೆಯಲಿದೆ. 90 ದಿನಗಳಲ್ಲಿ ಸಾಕ್ಷ ಸಂಗ್ರಹಿಸಿ ಕೋರ್ಟ್‌ಗೆ ಸಲ್ಲಿಸುವಂತೆ ಜಸ್ಟಿಸ್ ರೋಸಾ ವೆಬ್ಬರ್ ಆದೇಶಿಸಿದ್ದಾರೆ.


ಇದನ್ನೂ ಓದಿ: ಬ್ರೆಜಿಲ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷ ಜೈರ್‌ ಬೊಲ್ಸೊನಾರೋ ರಾಜೀನಾಮೆಗೆ ಪಟ್ಟು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...