Homeಮುಖಪುಟಇಂದು ಸಂಜೆ ಕೆಂದ್ರ ಸಚಿವ ಸಂಪುಟ ವಿಸ್ತರಣೆ ಖಚಿತ

ಇಂದು ಸಂಜೆ ಕೆಂದ್ರ ಸಚಿವ ಸಂಪುಟ ವಿಸ್ತರಣೆ ಖಚಿತ

- Advertisement -
- Advertisement -

ಇಂದು ಸಂಜೆ 6 ಗಂಟೆಗೆ ಕೇಂದ್ರ ಸಚಿವ ಸಂಪುಟದ ವಿಸ್ತರಣೆ ನಡೆಯುವುದು ಬಹುತೇಕ ಖಚಿತಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಹಿರಿಯ ಸಚಿವರೊಂದಿಗೆ ಬೆಳಗ್ಗೆ ನಿಗದಿ ಪಡಿಸಿದ್ದ ಸಭೆ ರದ್ದಾಗಿದ್ದು ಸಂಜೆ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ನೂತನ ಸಚಿವರ ಹೆಸರು ಘೋಷಣೆಯಾಗಲಿದೆ. ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಈ ಸಂಬಂಧ ಯಾವುದೇ ಅಧಿಕೃತ ಪ್ರಕಟಣೆ ಹೊರಬರದಿದ್ದರೂ ಕಾರ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ಈ ಸಂಬಂಧ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ್ ರಾಣೆ, ಭಿವಾಂಡಿ ಲೋಕಸಭಾ ಸಂಸದ ಕಪಿಲ್ ಪಾಟೀಲ್, ಬಿಜೆಪಿಯ ಉತ್ತರ ಪ್ರದೇಶದ ಮಿತ್ರ ಅನುಪ್ರಿಯಾ ಪಟೇಲ್,  ಜ್ಯೋತಿರಾದಿತ್ಯ ಸಿಂಧಿಯಾ, ಉತ್ತರಾಖಂಡ್‌ ಸಂಸದ ಅಜಯ್ ಭಟ್ ಪ್ರಧಾನಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕ್ಯಾಬಿನೆಟ್ ವಿಸ್ತರಣೆಗೂ ಮುನ್ನ ನರೇಂದ್ರ ಮೋದಿಯವರ ಅಧಿಕೃತ ನಿವಾಸಕ್ಕೆ ಆಗಮಿಸಿ ಚರ್ಚಿಸಿದ್ದಾರೆ.

ಸರ್ಬಾನಂದ ಸೋನೊವಾಲ್, ಭೂಪೇಂದರ್ ಯಾದವ್, ಅನುರಾಗ್ ಠಾಕೂರ್, ಮೀನಾಕ್ಷಿ ಲೆಖಿ, ಶೋಭಾ ಕರಂದ್ಲಾಜೆ, ಸುನೀತಾ ದುಗ್ಗ, ಪ್ರೀತಮ್ ಮುಂಡೆ, ಜಿ ಕಿಶನ್ ರೆಡ್ಡಿ, ಆರ್‌ಸಿಪಿ ಸಿಂಗ್ ಮತ್ತು ಸಂತನು ಠಾಕೂರ್ ಸಹ ನಂಬರ್‌ 7, ಲೋಕ ಕಲ್ಯಾಣ್ ಮಾರ್ಗದ ಪ್ರಧಾನ ಮಂತ್ರಿಗಳ ಅಧಿಕೃತ ನಿವಾಸಕ್ಕೆ ಇಂದು ಭೇಟಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರಲಿರುವ 13 ನೂತನ ಸಚಿವರು ದೆಹಲಿಗೆ ಆಗಮಿಸಿದ್ದು ಪ್ರಧಾನಿಗಳ ಕರೆಗಾಗಿ ಕಾಯುತ್ತಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ. ಈ ಸಾರಿ ಆದಷ್ಟು ಯುವ ಸಂಸದರಿಗೆ ಮತ್ತು ಹೊಸ ಮುಖಗಳಿಗೆ ಸಚಿವ ಸ್ಥಾನವನ್ನು ನೀಡಲಾಗುತ್ತಿದ್ದು ವರುಣ್ ಗಾಂಧಿ, ಜ್ಯೋತಿರಾದಿತ್ಯ ಸಿಂಧಿಯಾ, ಅನುಪ್ರೀಯ ಪಟೇಲ್ ಮುಂತಾದ ಯುವ ಸಂಸದರು  ಮೋದಿ ಸಂಪಟುವನ್ನು ಸೇರುವುದು ಖಚಿತವಾಗಿದೆ.

ದೇಶದಲ್ಲಿ ಸಹಕಾರ ಚಳುವಳಿಯನ್ನು ಬಲಗೊಳಿಸಲು ಹೊಸದಾಗಿ ಸಹಕಾರಿ ಇಲಾಖೆಯನ್ನು ಆರಂಭಿಸಿ ಕೇಂದ್ರ ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ. ಸಾಹಕಾರಿ ಕ್ಷೇತ್ರಕ್ಕೆ ಸಂಬಂಧಿಸಿದ ಕಾನೂನು, ಆಡಳಿತ ಮತ್ತು ನೀತಿ ನಿರುಪಣೆಗೆ ಸಂಬಂಧಿಸಿದ ಕೆಲಸವನ್ನು ಹೊಸ ಇಲಾಖೆ ನೋಡಿಕೊಳ್ಳಲಿದೆ.

ಇದನ್ನೂ ಓದಿ: ಕೇಂದ್ರ ಸಂಪುಟ ಪುನರ್ರಚನೆ: ಯಾರಿಗೆ ಒಲಿಯಲಿದೆ ಸಚಿವ ಸ್ಥಾನ?

 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...

ಎಂಎಲ್‌ಸಿ ಚುನಾವಣೆ ಸೋಲಿನ ಹಿಂದಿರುವ ರಾಜಕೀಯ – ಸಂಘಟನಾತ್ಮಕ ಕಾರಣಗಳ ಕುರಿತು ಪರಾಮರ್ಶಿಸುತ್ತೇವೆ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆದ ವಿಧಾನ ಪರಿಷತ್ ಚುನಾವಣೆಯ ಸೋಲಿನ ಹಿಂದಿರುವ ರಾಜಕೀಯ ಹಾಗೂ ಸಂಘಟನಾತ್ಮಕ ಕಾರಣಗಳ ಕುರಿತು ಸಮಗ್ರ ಪರಾಮರ್ಶೆ ನಡೆಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್...

ಸ್ಪೇನ್‌ನಲ್ಲಿ ಅತಿ ವೇಗದ ರೈಲುಗಳ ನಡುವೆ ಡಿಕ್ಕಿ; ಕನಿಷ್ಠ 46 ಮಂದಿ ಸಾವು

ಸ್ಪೇನ್‌ನ ಟೊಲೆಡೊ ಪ್ರಾಂತ್ಯದಲ್ಲಿ ಬುಧವಾರ ಬೆಳಿಗ್ಗೆ ಎರಡು ಅತಿ ವೇಗದ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 46 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಪೇನ್‌ನ ಎಬಿಸಿ (ಎಬಿಸಿ) ಸುದ್ದಿ ಸಂಸ್ಥೆ ವರದಿ ಮಾಡಿದೆ....

ಇಸ್ರೇಲ್ ಚುನಾವಣೆಯಲ್ಲಿ ಸಿಗದ ಬಹುಮತ; ಆದರೂ ಗೆಲುವಿನ ಹಕ್ಕು ಮಂಡಿಸಿದ ನೆತನ್ಯಾಹು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅರಬ್ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಜೆರುಸಲೇಮ್‌ನಲ್ಲಿರುವ ಲಿಕುಡ್ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಹೂದಿ ಮತ್ತು ಝಿಯೋನಿಸ್ಟ್...

ದೆಹಲಿ: 2020ರ ಮುಸ್ಲಿಂ ವಿರೋಧಿ ಹಿಂಸಾಚಾರದಲ್ಲಿ 22 ವರ್ಷದ ಯುವಕನ ಹತ್ಯೆ: ಐವರು ಹಿಂದುತ್ವವಾದಿಗಳಿಗೆ ಏಳು ವರ್ಷ ಜೈಲು ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

2020ರ ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹಿಂಸಾಚಾರದ ಸಂದರ್ಭದಲ್ಲಿ 22 ವರ್ಷದ ಮುಸ್ಲಿಂ ಯುವಕ ಮೋನಿಷ್  ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಐವರು ಹಿಂದುತ್ವವಾದಿ ಪುರುಷರಿಗೆ ವಿಧಿಸಲಾಗಿದ್ದ ಏಳು ವರ್ಷಗಳ...

ಅರ್ನಬ್ ಚಂಡಮಾರುತ: ಆಂಧ್ರಪ್ರದೇಶದಲ್ಲಿ ಮೂವರ ಸಾವು; ಹಲವು ಮನೆಗಳಿಗೆ ಹಾನಿ

ಅರ್ನಬ್ ಚಂಡಮಾರುತವು ಆಂಧ್ರಪ್ರದೇಶದಲ್ಲಿ ಭಾರೀ ಹಾನಿಯನ್ನುಂಟುಮಾಡಿದೆ. ಚಂಡಮಾರುತದಿಂದಾಗಿ ಮೂವರು ಮೃತಪಟ್ಟಿದ್ದು, 31 ಮನೆಗಳು ಹಾನಿಗೀಡಾಗಿವೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್‌)ಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಸ್ತುತ ಚಂಡಮಾರುತವು ಪುದುಚೇರಿಯ ಯಾನಂ ಸಮೀಪದ...

ಉತ್ತರ ಪ್ರದೇಶದ ವಿಧಾನ ಪರಿಷತ್ತಿನ ಫಲಿತಾಂಶ: ವಾರಣಾಸಿಯ ಎರಡೂ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷಕ್ಕೆ ಭರ್ಜರಿ ಗೆಲುವು

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ (ಎಸ್‌ಪಿ) ಗಮನಾರ್ಹ ಸಾಧನೆ ಮಾಡಿದೆ. ವಾರಣಾಸಿ ಶಿಕ್ಷಕರ...

ಎಂಎಲ್‌ಸಿ ಚುನಾವಣೆ ಫಲಿತಾಂಶ: ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟಕ್ಕೆ ಜಯ; ಕಾಂಗ್ರೆಸ್‌ಗೆ ಭಾರೀ ಹಿನ್ನಡೆ

ಕರ್ನಾಟಕ ವಿಧಾನ ಪರಿಷತ್ತಿನ ಇತ್ತೀಚಿನ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದರೆ, ಅದರ...

ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ ಪ್ರಕರಣ; ಡ್ರೋನ್ ತಂತ್ರಜ್ಞಾನದ ನೆರವಿನಿಂದ 13 ಮಂದಿ ಸೆರೆ

ತಮಿಳುನಾಡಿನ ಥೇಣಿ ಜಿಲ್ಲಾ ಜೈಲಿನಿಂದ 17 ಕೈದಿಗಳು ಪರಾರಿಯಾದ ಒಂದು ದಿನದೊಳಗೆ, ಮಂಗಳವಾರ ಸಂಜೆಯ ವೇಳೆಗೆ ತಮಿಳುನಾಡು ಪೊಲೀಸರು ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಂಡು ಅವರ ಪೈಕಿ 13 ಮಂದಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ವಲಯದ...