Homeಕರ್ನಾಟಕಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

ಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

- Advertisement -
- Advertisement -

ಕನ್ನಡದ ನಟಿ ಹರಿಪ್ರಿಯಾಗೆ ಹಾಲಿವುಡ್ ಪ್ರಶಸ್ತಿ ದೊರೆತಿದೆ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಕನ್ನಡದ ಪ್ರಾಚೀನ ಕೃತಿಯಾದ ‘ಯಶೋಧರ ಚರಿತೆ’ಯ ಪ್ರಸಂಗ ಆಧರಿಸಿ ಸಿದ್ಧವಾಗಿರುವ ‘ಅಮೃತಮತಿ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ.

ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್‌ ಮೂಲಕ ನಿರ್ಮಾಣಗೊಂಡು ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರ ಈಗಾಗಲೇ ಹತ್ತಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಪ್ರದರ್ಶನ ಕಂಡಿದೆ. ‘ಹಾಲಿವುಡ್ ಇಂಟರ್‌ನ್ಯಾಷನಲ್ ಗೋಲ್ಡನ್ ಏಜ್ ಚಿತ್ರೋತ್ಸವ’ದಲ್ಲಿ ಪ್ರದರ್ಶನ ಕಂಡಿದ್ದು, ನಟಿ ಹರಿಪ್ರಿಯಾಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಲಭಿಸಿದೆ.

ನಟಿ ಹರಿಪ್ರಿಯಾ ಈ ಹಿಂದೆ ನೋಯ್ಡಾದ ನಾಲ್ಕನೇ ಭಾರತೀಯ ವಿಶ್ವ ಸಿನಿಮೋತ್ಸವದಲ್ಲಿಯೂ ಅಮೃತಮತಿ ಚಿತ್ರದಲ್ಲಿನ ನಟನೆಗಾಗಿ ‘ಶ್ರೇಷ್ಠ ನಟಿ’ ಪ್ರಶಸ್ತಿಗೆ ಭಾಜನರಾಗಿದ್ದರು. ಒಟ್ಟು ಮೂರು ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅವರು ಶ್ರೇಷ್ಠ ನಟಿ ಪ್ರಶಸ್ತಿ ಪಡೆದಿದ್ದಾರೆ.

ಅಟ್ಲಾಂಟ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ವಿದೇಶಿ ಭಾಷೆಯ ಚಿತ್ರ’ ಪ್ರಶಸ್ತಿ ಅಮೃತಮತಿ ಸಿನಿಮಾಕ್ಕೆ ಲಭಿಸಿತ್ತು. ಲಾಸ್ ಏಂಜಲೀಸ್ ಸನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಶ್ರೇಷ್ಠ ಚಿತ್ರ’ ಮತ್ತು ‘ಶ್ರೇಷ್ಠ ಚಿತ್ರಕತೆ’ ಪ್ರಶಸ್ತಿ ಲಭಿಸಿತ್ತು. ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ವಿಶೇಷ ಚಿತ್ರ ಮನ್ನಣೆಗೆ ಚಿತ್ರ ಪಾತ್ರವಾಗಿತ್ತು.

ಇದನ್ನೂ ಓದಿ: ಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

ಕನ್ನಡದ ಕವಿ ಜನ್ನ ರಚಿಸಿರುವ ‘ಯಶೋಧರಚರಿತೆ’ ಕಾವ್ಯವನ್ನು ಆಧರಿಸಿ ಅಮೃತಮತಿ ಸಿನಿಮಾ ತಯಾರಾಗಿದೆ. ಬರಗೂರು ರಾಮಚಂದ್ರಪ್ಪ ಅವರು ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶಿಸಿದ್ದಾರೆ. ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಸಂಕಲನಕಾರರಾಗಿ ಸುರೇಶ ಅರಸು, ಛಾಯಾಗ್ರಾಹಕರಾಗಿ ನಾಗರಾಜ ಆದವಾನಿ, ಸಂಗೀತ ನಿರ್ದೇಶಕರಾಗಿ ಶಮಿತಾ ಮಲ್ನಾಡ್ ಕಾರ್ಯ ನಿರ್ವಹಿಸಿದ್ದಾರೆ.

ಅಮೃತಮತಿ ಚಿತ್ರದಲ್ಲಿ ಹರಿಪ್ರಿಯಾ ಮತ್ತು ಕಿಶೋರ್‌

ಪರಪುರುಷನ ಜೊತೆಗಿನ ಸಂಬಂಧ ಮತ್ತು ಮಹಿಳಾ ಮನಸ್ಸಿನ ತಲ್ಲಣಗಳ ಸುತ್ತ ಹೆಣೆದಿರುವ ಚಿತ್ರ ಇದು. ಯಶೋಧರನ ಪಾತ್ರದಲ್ಲಿ ನಟ ಕಿಶೋರ್ ಅಭಿನಯಿಸಿದ್ದಾರೆ. ಸುಂದರರಾಜ್, ಪ್ರಮೀಳಾ ಜೋಷಾಯ್ ತಿಲಕ್, ಸುಪ್ರಿಯಾರಾವ್, ವತ್ಸಲಾಮೋಹನ್, ಅಂಬರೀಷ್​ ಸಾರಂಗಿ ಮೊದಲಾದ ಕಲಾವಿದರ ಸಾಥ್ ಅಮೃತಮತಿಗಿದೆ.

ಸ್ಯಾಂಡಲ್‌ವುಡ್‌ನ ಬ್ಯುಸಿ ನಟಿಯರ ಸಾಲಿನಲ್ಲಿ ಹರಿಪ್ರಿಯಾ ಕೂಡ ಇದ್ದು, ಅವರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಸತೀಶ್​ ನೀನಾಸಂ ನಟನೆಯ ಪೆಟ್ರೋಮ್ಯಾಕ್ಸ್, ಬೆಲ್​ ಬಾಟಂ-2 ಸೇರಿ ಕನಿಷ್ಠ 8 ಪ್ರಾಜೆಕ್ಟ್​ಗಳಲ್ಲಿ ಹರಿಪ್ರಿಯಾ ಬ್ಯುಸಿಯಾಗಿದ್ದಾರೆ.


ಇದನ್ನೂ ಓದಿ: ಕನ್ನಡದ ಯಶಸ್ವಿ ಚಿತ್ರ ’ಯು ಟರ್ನ್’ ಹಿಂದಿಗೆ ಕೊಂಡೊಯ್ದ ಏಕ್ತಾ ಕಪೂರ್‌, ನಾಯಕಿಯಾಗಿ ಅಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...