Homeಅಂತರಾಷ್ಟ್ರೀಯಹೈಟಿ ದೇಶದ ಅಧ್ಯಕ್ಷ ಜೊವೆನೆಲ್ ಮೊಯೆಸ್‌ ಬರ್ಬರ ಹತ್ಯೆ

ಹೈಟಿ ದೇಶದ ಅಧ್ಯಕ್ಷ ಜೊವೆನೆಲ್ ಮೊಯೆಸ್‌ ಬರ್ಬರ ಹತ್ಯೆ

- Advertisement -
- Advertisement -

ಹೈಟಿ ದೇಶದ ಅಧ್ಯಕ್ಷ ಜೊವೆನೆಲ್ ಮೊಯೆಸ್‌ ಅವರನ್ನು ದುಷ್ಕರ್ಮಿಗಳು ಇಂದು ಗುಂಡಿಕ್ಕಿ ಸಾಯಿಸಿದ್ದಾರೆ. ರಾಜಧಾನಿ ಪೋರ್ಟ್ ಎವ್‌ ಪ್ರಿನ್ಸ್‌ ನಗರದ  ಅಧ್ಯಕ್ಷರ ಖಾಸಗಿ ನಿವಾಸದಲ್ಲಿ ಅಲ್ಲಿಯ ಕಾಲಮಾನ ಮಂಗಳವಾರ ಮಧ್ಯರಾತ್ರಿ 1 ಗಂಟೆ ಹೊತ್ತಿಗೆ ಹತ್ಯೆ ನಡೆದಿದೆ.  ಅಧ್ಯಕ್ಷ ಮೋಯೆಸ್‌ ಹತ್ಯೆಯಯನ್ನು ಹೈಟಿ ಸರ್ಕಾರ ಅಧಿಕೃತವಾಗಿ ಘೋಷಿಸಿದ್ದು ರಾಷ್ಟ್ರಾಧ್ಯಕ್ಷರ ಸಾವಿನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡಬಾರದೆಂದು  ನಿಯೋಜಿತ ಪ್ರಧಾನಿ ಮನವಿ ಮಾಡಿದ್ದಾರೆ. ಮೊಯೆಸ್‌ ಪತ್ನಿ ಮತ್ತು ದೇಶದ  ಪ್ರಥಮ ಮಹಿಳೆ ಮಾರ್ಟಿನ್ ಮೊಯೆಸ್‌ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಖಾಸಗಿ ಕಮಾಂಡೋಗಳ ಗುಂಪೊಂದು ಕೆರಿಬಿಯ್ ದೇಶದ ಅಧ್ಯಕ್ಷರ ನಿವಾಸಕ್ಕೆ ನುಗ್ಗಿ ಗುಂಡಿನ ದಾಳಿ ನಡೆಸಿ ಅಧ್ಯಕ್ಷರ ಹತ್ಯೆಗೈದಿದೆ ಎಂದು ಪತ್ರಕರ್ತ ಮೈಕೆಲ್ ಡೀಬರ್ಟ್ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ. ‘ ಹಂತಕರಲ್ಲಿ ಕೆಲವರು ಸ್ಪ್ಯಾನಿಷ್ ಭಾಷೆಯಲ್ಲಿ ಮಾತನಾಡುತ್ತಿದ್ದರು’ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.

ರಾಷ್ಟ್ರಾಧ್ಯಕ್ಷರ ಹತ್ಯೆ ಖಂಡಿಸಿ ಹೈಟಿ ಪ್ರಧಾನಿ ಡಾ. ಕ್ಲೌಡ್ ಜೋಸೆಫ್ ಹೇಳಿಕೆ ನೀಡಿದ್ದು ಸಾರ್ವಜನಿಕರಲ್ಲಿ ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ. ದೇಶದ ಭದ್ರತಾ ಪರಿಸ್ಥಿತಿಗೆ ಯಾವುದೇ ಆತಂಕವಿಲ್ಲ. ಹೈಟಿ ರಾಷ್ಟ್ರೀಯ ಪೊಲೀಸ್ ಮತ್ತು ಹೈಟಿ ಸಶಸ್ತ್ರ ಪಡೆಗಳು ಪರಿಸ್ಥಿತಿಯನ್ನು ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ.. ಹಂತಕರ ಪತ್ತೆಗೆ ತೀವ್ರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪ್ರಧಾನಿ ಪ್ರಕಟಣೆ ಹೊರಡಿಸಿದ್ದಾರೆ.

ಈ ವರ್ಷ ಫೆಬ್ರುವರಿಯಲ್ಲಿ ಜೊವೆನೆಲ್ ಮೊಯೆಸ್‌ ಅವರ ಹತ್ಯೆಗೆ ಪ್ರಯತ್ನ ನಡೆದಿತ್ತು. ಪ್ರತಿಪಕ್ಷ ನಾಯಕರ ಬೆಂಬಲವಿರುವ ಓರ್ವ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸೇರಿದಂತೆ, ಕೆಲವರು ತನ್ನನ್ನು ಕೊಲ್ಲಲು ಮತ್ತು ಸರ್ಕಾರ ಉರುಳಿಸಲು ಯತ್ನಿಸಿದ್ದರು ಎಂದು ಜೊವೆನೆಲ್ ಮೋಯೆಸ್‌ ಆರೋಪಿಸಿದ್ದರು. ಈ ಸಂಬಂಧ ಓರ್ವ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸೇರಿದಂತೆ ಹತ್ಯೆಗ ಯತ್ನಿಸಿದ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಫೆಬ್ರುವರಿಯಲ್ಲಿ ಬಂಧಿತ ಸುಪ್ರೀಂಕೋರ್ಟ್ ನ್ಯಾಯಾಧೀಶ ಯವಿಕೆಲ್ ಡಬ್ರೆಜಿಲ್, ಮೊಯೆಸ್​ ಅವರನ್ನು ಕೆಳಗಿಳಿಸಿ ತಾತ್ಕಾಲಿಕ ಅಧ್ಯಕ್ಷರಾಗಲು ಸಿದ್ದತೆ ಮಾಡಿಕೊಂಡಿದ್ದರು ಎಂದು ಹೇಳಲಾಗಿದೆ.

ಇದನ್ನೂ ಓದಿ: ಸ್ಟ್ಯಾನ್‌ ಸ್ವಾಮಿ ಸಾಂಸ್ಥಿಕ ಕೊಲೆ : ತನಿಖೆಗೆ ಆಗ್ರಹಿಸಿ ಜೈಲಿನೊಳಗೆ ಉಪವಾಸ ಸತ್ಯಾಗ್ರಹ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಮಧ್ಯಂತರ ಚುನಾವಣೆ : ಮೇಲ್ಮನೆ ಸೆನೆಟ್‌ನಲ್ಲಿ ಡೆಮಾಕ್ರಟಿಕ್ ಪಕ್ಷಕ್ಕೆ ಬಹುಮತ, ಕೆಳಮನೆಯಲ್ಲೂ ಮುನ್ನಡೆ

ಅಮೆರಿಕದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ 2026ರ ಮಧ್ಯಂತರ ಚುನಾವಣೆಗಳ (US Midterm Elections) ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಪ್ರಸ್ತುತ ಮತ ಎಣಿಕೆ ಕಾರ್ಯ ಚುರುಕಿನಿಂದ ಸಾಗಿದೆ. ಹಾಲಿ ರಿಪಬ್ಲಿಕನ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

RSS ಕುರಿತು ಪೋಸ್ಟ್ ಹಾಕಿದ್ದಕ್ಕೆ ಎಕ್ಸ್‌ ಖಾತೆ ಬ್ಲಾಕ್ ಮಾಡಲು ಸೂಚಿಸಿದ ದೆಹಲಿ ಪೊಲೀಸರು : ಕೋರ್ಟ್ ಮೆಟ್ಟಿಲೇರುವುದಾಗಿ ಎಚ್ಚರಿಸಿದ ಐಎಫ್‌ಎಫ್‌

ತನ್ನ ಖಾತೆ ಮತ್ತು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ತೆಗೆದು ಹಾಕುವಂತೆ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್‌ಗೆ ಕೋರಿದ್ದಾರೆ ಎಂದು ಇಂಟರ್‌ನೆಟ್ ಫ್ರೀಡಂ ಫೌಂಡೇಶನ್ (ಐಎಫ್‌ಎಫ್‌) ಮಂಗಳವಾರ (ನ.3) ತಿಳಿಸಿದೆ. ಐಎಫ್‌ಎಫ್‌ ಭಾರತದಲ್ಲಿ...

ರಾಜ್ಯದ 226 ತಾಲೂಕುಗಳಲ್ಲಿ 57.93 ಲಕ್ಷ ಹೆಕ್ಟೇರ್ ಬೆಳೆ ಹಾನಿ; ಕೇಂದ್ರದ ಸಣ್ಣ ನೆರವು ಸಾಕಾಗಲ್ಲ; ಪ್ರಧಾನಿ ಮೋದಿಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಪತ್ರ!

ಕರ್ನಾಟಕದ 226 ತಾಲೂಕುಗಳಲ್ಲಿ ಬರದ ಭೀಕರತೆಯಿಂದ ತತ್ತರಿಸಿರುವ ಲಕ್ಷಾಂತರ ರೈತರನ್ನು ರಕ್ಷಿಸಲು ತಕ್ಷಣವೇ ಬೃಹತ್ ಮಟ್ಟದ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಆಗ್ರಹಿಸಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಪ್ರಧಾನಮಂತ್ರಿ ನರೇಂದ್ರ...

‘ಭಾರತ ಒಂದು ಜಾತ್ಯತೀತ ದೇಶ’: ದಿಯಾ ಮಿರ್ಜಾ ವಿಡಿಯೋ ಕುರಿತ ಬಿಜೆಪಿ ನಾಯಕರ ಟೀಕೆಗೆ ಬಾಂಬೆ ಹೈಕೋರ್ಟ್ ಆಕ್ಷೇಪ : ವಿಡಿಯೋ ಮರುಸ್ಥಾಪಿಸಲು ಬಿಎಂಸಿಗೆ ಆದೇಶ

ಸಾರ್ವಜನಿಕ ರಸ್ತೆಗಳಲ್ಲಿ ಪಟಾಕಿ ಸಿಡಿಸದಂತೆ ದೀಪಾವಳಿ ಹಬ್ಬದ ಮುನ್ನ ನಾಗರಿಕರಲ್ಲಿ ನಟಿ ದಿಯಾ ಮಿರ್ಜಾ ಮನವಿ ಮಾಡಿಕೊಂಡಿದ್ದ ವಿಡಿಯೋ ವಿರುದ್ಧ ಕೆಲವು ರಾಜಕಾರಣಿಗಳು ಮಾಡಿದ ಟೀಕೆಗಳನ್ನು ಬಾಂಬೆ ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ನ್ಯಾಯಮೂರ್ತಿ ಗಿರೀಶ್...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣ: ‘ಕುಮಾರಸ್ವಾಮಿ ಸಮ್ಮುಖದಲ್ಲೇ ವಿಡಿಯೋ ಅಪ್‌ಲೋಡ್’; ವರದಿಯ ಶೇ.10ರಷ್ಟನ್ನೇ ಬಹಿರಂಗಪಡಿಸಿದ್ದೇವೆ ಎಂದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣ ಇದೀಗ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತಿರುವು ನೀಡಿದೆ. ಸ್ಟಿಂಗ್ ಕಾರ್ಯಾಚರಣೆಗೆ ಬಳಸಲಾಗಿದೆ ಎನ್ನಲಾದ ಮೊಬೈಲ್ ಫೋನ್‌ಗಳನ್ನು ಕೇಂದ್ರ ಸಚಿವ...

ಕರ್ನಾಟಕ ಎಸ್‌ಐಆರ್‌ನ ಹಲವು ಅವಾಂತರಗಳು ಬಯಲು : ಸಂಪೂರ್ಣ ಮೌನ ಪಾಲಿಸಿದ ಚುನಾವಣಾ ಆಯೋಗ

ತೀವ್ರ ವಿರೋಧದ ನಡುವೆಯೂ ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸಿದ ಚುನಾವಣಾ ಆಯೋಗ, 2026ರ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿ ಕೈತೊಳೆದುಕೊಂಡಿದೆ. ರಾಜ್ಯದ ಮುಖ್ಯ ಚುನಾವಣಾ ಆಯುಕ್ತ...

ವಕ್ಫ್ ತಿದ್ದುಪಡಿ ಕಾಯ್ದೆ 2025: ಸೀಮಿತ 5 ಅರ್ಜಿಗಳ ನಿಯಮ ತೆರವು; ಹೊಸ ರಿಟ್ ಅರ್ಜಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ!

ಕೇವಲ ಮಧ್ಯಂತರ ಅರ್ಜಿದಾರರಾಗಿ ವಾದ ಮಂಡಿಸಲು ಸಾಧ್ಯವಿಲ್ಲ ಎಂದ ಪೀಠ: 2027ರ ಜನವರಿಯಲ್ಲಿ ಅಂತಿಮ ವಿಸ್ತೃತ ವಿಚಾರಣೆ! ಕೇಂದ್ರ ಸರ್ಕಾರದ ವಿವಾದಾತ್ಮಕ ‘ವಕ್ಫ್ (ತಿದ್ದುಪಡಿ) ಕಾಯ್ದೆ 2025’ ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ನಡೆಯುತ್ತಿರುವ...

ಸ್ಥಳೀಯ ಸಂಸ್ಥೆ ಚುನಾವಣೆಗೆ ಯಾವುದೇ ಕಾರಣಕ್ಕೂ ‘SIR’ ಪಟ್ಟಿಯನ್ನು ಬಳಸಬೇಡಿ! ರಾಜ್ಯ ಸರ್ಕಾರಕ್ಕೆ ಹೋರಾಟಗಾರರ ಎಚ್ಚರಿಕೆ!

ಯುಪಿ, ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರಗಳೇ ಬದಿಗೊತ್ತಿದ ‘SIR’ ಪಟ್ಟಿಯನ್ನು ಕರ್ನಾಟಕ ಸರ್ಕಾರವೂ ಕೈಬಿಡಬೇಕು! ಕೇಂದ್ರ ಚುನಾವಣಾ ಆಯೋಗವು ‘ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅಂತಿಮ ಪಟ್ಟಿ ಪ್ರಕಟಿಸಿದ ನಂತರವೂ ಲಕ್ಷಾಂತರ...

ಬಿಡದಿ ಟೌನ್‌ಶಿಪ್ : 2 ಗ್ರಾಮಗಳ 1,895 ಎಕರೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ

ರಾಮನಗರ ತಾಲೂಕಿನ ಬಿಡದಿ ಹೋಬಳಿಯಲ್ಲಿರುವ ಕಂಚುಗಾರನಹಳ್ಳಿ ಮತ್ತು ಬೈರಮಂಗಲ ಗ್ರಾಮಗಳಲ್ಲಿ, ಪ್ರಸ್ತಾವಿತ 'ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್' (GBIT) ಯೋಜನೆಗಾಗಿ 1,895 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರ ಹೊರಡಿಸಿದೆ...

ಪಂಜಾಬ್ : ಮೂವರು ಎಎಪಿ ಶಾಸಕರು ಬಿಜೆಪಿ ಸೇರ್ಪಡೆ; ವಿಧಾನಸಭೆ ಚುನಾವಣೆಗೆ ಮುನ್ನ ಮಹತ್ವದ ಬೆಳವಣಿಗೆ

ಪಂಜಾಬ್ ವಿಧಾನಸಭಾ ಚುನಾವಣೆಗೆ (2027) ಮುನ್ನ ಆಮ್ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದ್ದು, ಸೋಮವಾರ (ನ.2) ಮೂವರು ಶಾಸಕರಾದ ಹರ್ಮೀತ್ ಸಿಂಗ್ ಪಠಾನ್‌ಮಜ್ರಾ, ಚೇತನ್ ಸಿಂಗ್ ಜೌರಾಮಜ್ರಾ ಮತ್ತು...