Homeಕರ್ನಾಟಕಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ

ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ

- Advertisement -
- Advertisement -

ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ರಾಜ್ಯದಲ್ಲಿರುವ 630 ಸಿಂಗಲ್ ಸ್ಕ್ರೀನ್ (ಏಕ ಪರದೆ) ಚಿತ್ರಮಂದಿರಗಳಿಗೆ 2021–22ನೇ ಸಾಲಿನ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ವಾರ್ತಾ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಕೊರೊನಾ ಲಾಕ್‌ಡೌನ್‌ನಿಂದಾಗಿ ಕಳೆದ ವರ್ಷದಿಂದಲೂ ಚಿತ್ರಮಂದಿರಗಳು ಬಹುತೇಕ ಬಂದ್ ಆಗಿದ್ದವು. ರಾಜ್ಯದಲ್ಲಿ 14 ತಿಂಗಳಿನಿಂದ ಬಹುತೇಕ ಚಿತ್ರಮಂದಿರಗಳ ಬಾಗಿಲು ತೆರೆದಿಲ್ಲ. ಆದರೆ ಆಸ್ತಿ ತೆರಿಗೆ, ವಿದ್ಯುತ್ ಶುಲ್ಕ ಇನ್ನಿತರೆ ಶುಲ್ಕಗಳನ್ನು ಪಾವತಿಸಲೇ ಬೇಕಿತ್ತು. ವರ್ಷದಿಂದಲೂ ಸಂಕಷ್ಟದಲ್ಲಿರುವ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ, ವಿದ್ಯುತ್ ಶುಲ್ಕ ಪಾವತಿ ರದ್ದು ಮಾಡಬೇಕು ಎಂದು ರ್ನಾಟಕ ಚಿತ್ರ ಪ್ರದರ್ಶಕರ ಸಂಘ, ಏಕ ಪರದೆ (ಸಿಂಗಲ್ ಸ್ಕ್ರೀನ್) ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತ್ತು.

ಚಿತ್ರ ಪ್ರದರ್ಶಕರ ಸಂಘದ ಬೇಡಿಕೆಯನ್ನು ಆಧರಿಸಿ ಏಕ ಪರದೆಯ ಚಿತ್ರಮಂದಿರಗಳ ಪ್ರಸಕ್ತ ವರ್ಷದ ಆಸ್ತಿ ತೆರಿಗೆಯನ್ನು ಮನ್ನಾ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ 9 ಕೋಟಿ ಹೊರೆಯಾಗಲಿದೆ ಎಂದು ವಾರ್ತಾ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: ಅಮೃತಮತಿ: ನಟಿ ಹರಿಪ್ರಿಯಾಗೆ ಒಲಿದು ಬಂತು ಹಾಲಿವುಡ್ ಪ್ರಶಸ್ತಿ

 

 

ಕೊರೊನಾ ಮಹಾಮಾರಿಯಿಂದ ರಾಜ್ಯದಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಏಕಪರದೆ ಚಿತ್ರಮಂದಿರ ನೌಕರರು ಮತ್ತು ಮಾಲೀಕರ ಹಿತದೃಷ್ಟಿಯಿಂದಾಗಿ ಈ ಕ್ರಮ ಕೈಗೊಂಡಿರುವುದಾಗಿ ಸರ್ಕಾರವು ಜುಲೈ 07 ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ರಾಜ್ಯದಲ್ಲಿ 630 ಏಕಪರದೆ (ಸಿಂಗಲ್ ಸ್ಕ್ರೀನ್) ಚಿತ್ರಮಂದಿರಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲ ಏಕಪರದೆ ಚಿತ್ರಮಂದಿರಗಳಿಗೂ 2021-22 ನೇ ಸಾಲಿನ ಆಸ್ತಿ ತೆರಿಗೆಯಿಂದ ವಿನಾಯಿತಿ ದೊರೆತಿದೆ. ಆದರೆ ಮಲ್ಟಿಫ್ಲೆಕ್ಸ್‌ಗಳಿಗೆ ಯಾವುದೇ ವಿನಾಯಿತಿಯನ್ನು ಸರ್ಕಾರ ನೀಡಿಲ್ಲ.

ಕಳೆದ ವರ್ಷದ ಅಂತ್ಯದಲ್ಲಿ ಪೂರ್ಣ ಸೀಟು ಸಾಮರ್ಥ್ಯದೊಂದಿಗೆ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಸಿಕ್ಕ ಕೆಲವೇ ದಿನಗಳಲ್ಲಿ ಕೊರೊನಾ ಎರಡನೇ ಅಲೆ ಪ್ರರಂಭವಾಗಿ ಚಿತ್ರಮಂದಿರಗಳನ್ನು ಮತ್ತೆ ಬಂದ್ ಮಾಡಲಾಯಿತು. ಅನ್‌ಲಾಕ್‌ 3.0 ನಲ್ಲೂ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ನೀಡಿಲ್ಲ. ಮುಂದಿನ ವಾರ ಜಾರಿಯಾಗಲಿರುವ ಅನ್‌ಲಾಕ್‌ 4.0 ದಲ್ಲಿ ಚಿತ್ರಮಂದಿರಗಳು ತೆರೆಯಲು ಅನುಮತಿ ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಕೊರೊನಾ ಎರಡನೇ ಅಲೆಯಲ್ಲಿ ಪರಿಹಾರ ಪ್ಯಾಕೇಜ್ ಘೋಷಿಸುವ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಿತ್ರರಂಗದ 22,000 ಕಾರ್ಮಿಕರಿಗೆ 3,000 ಸಹಾಯಧನ ಘೋಷಿಸಿದ್ದರು.


ಇದನ್ನೂ ಓದಿ: ಸಿನಿಮಾಟೋಗ್ರಾಫ್ ಆಕ್ಟ್‌ಗೆ ಸ್ಟಾಲಿನ್ ವಿರೋಧ: ನಿರ್ಧಾರ ಹಿಂಪಡೆಯುವಂತೆ ಒಕ್ಕೂಟ ಸಚಿವರಿಗೆ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...