Homeಅಂತರಾಷ್ಟ್ರೀಯಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯಿಂದ ಹೆಚ್ಚಾದ, ಕೊರೊನಾ ಪ್ರಕರಣಗಳು!

ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯಿಂದ ಹೆಚ್ಚಾದ, ಕೊರೊನಾ ಪ್ರಕರಣಗಳು!

- Advertisement -
- Advertisement -

ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯ ಪ್ರಾಬಲ್ಯ ಹೆಚ್ಚಾಗುತ್ತಿದ್ದು, ಕೊರೊನಾ ಪ್ರಕರಣಗಳು ವೇಗವಾಗಿ ಏರುತ್ತಿವೆ ಎಂದು ಡೇಟಾ ಖಚಿತ ಪಡಿಸಿದೆ. ವ್ಯಾಕ್ಸಿನೇಷನ್ ಪ್ರಕ್ರಿಯೆಗಳು ಕೂಡ ಅಮೆರಿಕಾದಲ್ಲಿ ಸ್ಥಗಿತಗೊಂಡಿವೆ ಎಂದು ವರದಿ ತಿಳಿಸಿದೆ.

ಕಳೆದ ಏಳು ದಿನಗಳ ಸರಾಸರಿ ತೆಗೆದುಕೊಂಡರೇ, ಹೊಸ ಪ್ರಕರಣಗಳ ಏರಿಕೆ ಜುಲೈ 6 ರ ವೇಳೆಗೆ 13,859 ಆಗಿದ್ದು, ಎರಡು ವಾರಗಳ ಹಿಂದಿನ ಪ್ರಕರಣಗಳಿಗೆ ಹೋಲಿಸಿದರೆ 21 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು (CDC) ತಿಳಿಸಿವೆ.

ಈ ಪ್ರಕರಣಗಳಲ್ಲಿ ಜುಲೈ 4 ರ ವಾರಾಂತ್ಯದ ರಜಾದಿನಗಳನ್ನು ಸೇರಿಸಿಲ್ಲ. ಅದನ್ನು ಸೇರಿಸಿದರೇ, ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದು. ಡೆಲ್ಟಾ ರೂಪಾಂತರಿ ಪ್ರಕರಣಗಳು ಹೆಚ್ಚಾಗಿದ್ದು, ಇದರಿಂದಾಗಿಯೇ ಸುಮಾರು 52 ಪ್ರತಿಶತದಷ್ಟು ಪ್ರಕರಣಗಳು ಹೆಚ್ಚಾಗಿವೆ ಎಂದು ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ತಿಳಿಸಿವೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾವುಗಳಿಗೆ ಕಾರಣವಾಗುತ್ತೆ ಎನ್ನಲು ಮಾಹಿತಿಯಿಲ್ಲ: ಡಾ. ರಂದೀಪ್ ಗುಲೇರಿಯಾ

ವಿಶ್ವದ ಎಲ್ಲಾ ದೇಶಗಳಿಗಿಂತ ಹೆಚ್ಚಿನ ಲಸಿಕೆಗಳ ಲಭ್ಯತೆ ಇದ್ದರೂ ಕೂಡ ಅಮೆರಿಕ, ಲಸಿಕಾ ಅಭಿಯಾನವನ್ನು  ಏಪ್ರಿಲ್‌ನಿಂದಲೇ ಸ್ಥಗಿತಗೊಳಿಸಿತ್ತು. ಶೇಕಡಾ 70 ರಷ್ಟು ವಯಸ್ಕರಿಗೆ ಭಾಗಶಃ ಲಸಿಕೆ ಹಾಕುವ ಗುರಿಯನ್ನು ಕೂಡ ಅಮೆರಿಕಾದಲ್ಲಿ ತಲುಪಲಾಗಿಲ್ಲ. ಇಲ್ಲಿಯವರೆಗೆ ಶೇಕಡಾ 67 ರಷ್ಟು ವಯಸ್ಕರಿಗೆ ಲಸಿಕೆ ಹಾಕಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದು, ಮಿಸೌರಿಯ (Missouri) ಸ್ಪ್ರಿಂಗ್‌ಫೀಲ್ಡ್‌ ಆಸ್ಪತ್ರೆಯಲ್ಲಿ ಈ ವಾರಾಂತ್ಯದಲ್ಲಿ ಆಸ್ಪತ್ರೆಗೆ ದಾಖಲಾದ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ವೆಂಟಿಲೇಟರ್‌ಗಳ ಕೊರತೆ ಉಂಟಾಗಿದೆ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

“ಅಮೆರಿಕಾದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಎರಡು ವಿಭಿನ್ನ ಸ್ವರೂಪಗಳಿವೆ. ಇದರಲ್ಲಿ ಒಂದು ಹೆಚ್ಚು ಲಸಿಕೆ ಪಡೆಯದ ಜನರಿರುವ ಸ್ಥಳಗಳಲ್ಲಿ ವೈರಸ್ ಹೆಚ್ಚಾಗಿದೆ. ಇನ್ನೊಂದು, ದೇಶದ ಇತರ ಭಾಗಗಳಲ್ಲಿ ಉಸಿರಾಟದ ಸಮಸ್ಯೆಯಾಗಿ ಮಾರ್ಪಟ್ಟಿದೆ” ಎಂದು ಜಾನ್ಸ್ ಹಾಪ್ಕಿನ್ಸ್ ಕೇಂದ್ರದ ಅಮೆಶ್ ಅಡಾಲ್ಜಾ ತಿಳಿಸಿದ್ದಾರೆ.

ದೇಶದಲ್ಲಿಯೂ ಡೆಲ್ಟಾ ವೈರಸ್ ಪ್ರಕರಣಗಳು ಕಂಡುಬಂದಿದ್ದು, ಡೆಲ್ಟಾ ಪ್ಲಸ್ ರೂಪಾಂತರಿ ಹೆಚ್ಚು ಸಾಂಕ್ರಾಮಿಕ ಮತ್ತು ಹೆಚ್ಚಿನ ಸಾವುಗಳಿಗೆ ಕಾರಣವಾಗುತ್ತದೆ ಎನ್ನಲು, ಡೆಲ್ಟಾ ಪ್ಲಸ್ ವೈರಸ್‌ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ ಎಂದು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.


ಇದನ್ನೂ ಓದಿ: ಡೆಲ್ಟಾ ಪ್ಲಸ್‌ ರೂಪಾಂತರಿಯು ಮೂರನೇ ಅಲೆಗೆ ಕಾರಣವಾಗಬಹುದು: ಟಾಸ್ಕ್ ಫೋರ್ಸ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...