Homeಮುಖಪುಟಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ, 3 ದಿನಗಳ ಶೋಕಾಚರಣೆ

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ, 3 ದಿನಗಳ ಶೋಕಾಚರಣೆ

- Advertisement -
- Advertisement -

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ವೀರಭದ್ರ ಸಿಂಗ್ (87) ಗುರುವಾರ ಮುಂಜಾನೆ (ಜುಲೈ 8) ಶಿಮ್ಲಾದಲ್ಲಿ ನಿಧನರಾಗಿದ್ದಾರೆ. ಕಳೆದ ಜುಲೈ 5 ರಂದು ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಜೊತೆಗೆ ತೀವ್ರ ಅನಾರೋಗ್ಯದಿಂದ ಮಾಜಿ ಮುಖ್ಯಮಂತ್ರಿ ಬಳಲುತ್ತಿದ್ದರು.

ಹಿಮಾಚಲ ಪ್ರದೇಶದಲ್ಲಿ ಆರು ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದ ಅವರು,  ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜಿನಲ್ಲಿ (ಐಜಿಎಂಸಿ) ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಮುಂಜಾನೆ 3: 30 ರ ಸುಮಾರಿಗೆ ನಿಧನರಾದರು ಎಂದು ಐಜಿಎಂಸಿಯ ಹಿರಿಯ ವೈದ್ಯಕೀಯ ಅಧೀಕ್ಷಕ ಜನಕ್ ರಾಜ್ ಖಚಿತಪಡಿಸಿದ್ದಾರೆ.

87 ವರ್ಷದ ವೀರಭದ್ರ ಸಿಂಗ್ ಅವರಿಗೆ ಕಳೆದ ಮೂರು ತಿಂಗಳಲ್ಲಿ 2 ಬಾರಿ ಕೊರೊನಾ ವೈರಸ್ ಸೋಂಕು ತಗುಲಿತ್ತು. ಹಿನ್ನೆಲೆಯಲ್ಲಿ ಏಪ್ರಿಲ್ 13ರಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು. ನಂತರ ಅವರು ಚೇತರಿಸಿಕೊಂಡಿದ್ದರು. ಬಳಿಕ ಆರೋಗ್ಯ ಸ್ಥಿತಿ ಹದಗೆಟ್ಟು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ್ಯೂಮೋನಿಯಾ, ಮಧುವೇಹದಂತಹ ಅನಾರೋಗ್ಯಗಳಿಂದ ಬಳಲುತ್ತಿದ್ದರು.

ಇದನ್ನೂ ಓದಿ: ಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರಿಗೆ ಗೌರವ ಸೂಚಕವಾಗಿ ಮೂರು ದಿನಗಳ ಕಾಲ ಹಿಮಾಚಲ ಪ್ರದೇಶದಲ್ಲಿ ಶೋಕಾಚರಣೆಯನ್ನು ಆಚರಿಸಲು ಸರ್ಕಾರ ನಿರ್ಧರಿಸಿದೆ. ಜುಲೈ 8 ರಿಂದ 10ರ ವರೆಗೆ ಶೋಕಾಚರಣೆಯನ್ನು ಆಚರಿಸಲಾಗುವುದು.

“ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರು ಜುಲೈ 8 ರ ಬೆಳಿಗ್ಗೆ ನಿಧನರಾಗಿದ್ದಾರೆ. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಮೂರು ದಿನಗಳ ರಾಜ್ಯ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ. ಜುಲೈ 8 ರಿಂದ ಜುಲೈ 10 ರವರೆಗೆ ಈ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ” ಎಂದು ಸರ್ಕಾರ ಹೇಳಿದೆ.

ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಒಂಬತ್ತು ಬಾರಿ ಶಾಸಕರಾಗಿ, ಐದು ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. 1983 ರ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದರು.

ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.


ಇದನ್ನೂ ಓದಿ: ಭೀಮಾ ಕೋರೆಗಾಂವ್‌ ಪ್ರಕರಣ: ಸುರೇಂದ್ರ ಗಾಡ್ಲಿಂಗ್‌ ಕಂಪ್ಯೂಟರ್‌ಗೆ ಸುಳ್ಳು ಸಾಕ್ಷ್ಯಗಳನ್ನು ಸೇರಿಸಲಾಗಿದೆ-ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...