Homeಮುಖಪುಟಭಾರತದಲ್ಲಿ ವಾಸಿಸುವ ಮತ್ತು ಕೆಲಸ ಮಾಡುವವರೆಲ್ಲರೂ ದೇಶದ ನಿಯಮ ಪಾಲಿಸಬೇಕು: ಐಟಿ ಸಚಿವ

ಭಾರತದಲ್ಲಿ ವಾಸಿಸುವ ಮತ್ತು ಕೆಲಸ ಮಾಡುವವರೆಲ್ಲರೂ ದೇಶದ ನಿಯಮ ಪಾಲಿಸಬೇಕು: ಐಟಿ ಸಚಿವ

- Advertisement -
- Advertisement -

ಭಾರತದಲ್ಲಿ ವಾಸಿಸುವ ಮತ್ತು ಕೆಲಸ ಮಾಡುವವರೆಲ್ಲರೂ ದೇಶದ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಹೇಳಿದ್ದಾರೆ. ಹೊಸ ಐಟಿ ನಿಯಮಗಳ ಬಗ್ಗೆ ಟ್ವಿಟರ್‌‌ ಜೊತೆ ನಡೆಯುತ್ತಿರುವ ಸಂಘರ್ಷದ ಬಗ್ಗೆ ಒಕ್ಕೂಟ ಸರ್ಕಾರದ ನಿಲುವನ್ನು ಅವರು ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಪಕ್ಷದ ಕಚೇರಿಯಲ್ಲಿ ಭೇಟಿಯಾದ ನಂತರ ಅಶ್ವಿನಿ ವೈಷ್ಣವ್ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಟ್ವಿಟರ್ ಐಟಿ ನಿಯಮಗಳಿಗೆ ಬದ್ಧವಾಗಿಲ್ಲ ಎಂಬ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಭಾರತದಲ್ಲಿ ವಾಸಿಸುವ ಮತ್ತು ಕೆಲಸ ಮಾಡುವವರು ದೇಶದ ನಿಯಮಗಳಿಗೆ ಬದ್ಧರಾಗಿರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ಒಡಿಶಾದ ಸಂಸದರಾಗಿರುವ ಅಶ್ವಿನಿ ಅವರು ಬುಧವಾರ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರಿಗೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಜೊತೆಗೆ ರೈಲ್ವೆಯ ಉಸ್ತುವಾರಿ ನೀಡಲಾಗಿದೆ.

ದೇಶದ ಹೊಸ ಐಟಿ ನಿಯಮಗಳನ್ನು ಪಾಲಿಸಲು ವಿಫಲವಾದ ಆರೋಪದ ಮೇಲೆ ಅಮೆರಿಕಾ ಮೂಲದ ಕಂಪನಿಯಾಗಿರುವ ಟ್ವಿಟರ್ ಒಕ್ಕೂಟ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದೆ.

ಮೇ 25 ರಂದು ಜಾರಿಗೆ ಬಂದ ಹೊಸ ಐಟಿ ನಿಯಮಗಳ ಪ್ರಕಾರ, 50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಎಲ್ಲಾ ಸಾಮಾಜಿಕ ಮಾಧ್ಯಮ ಕಂಪನಿಗಳು ಮುಖ್ಯ ಅನುಸರಣೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕಾಗುತ್ತದೆ. ಈ ಎಲ್ಲಾ ಅಧಿಕಾರಿಗಳು ಭಾರತೀಯರಾಗಿರಬೇಕು ಎಂಬ ನಿಯಮವಿದೆ.

ನಿಯಮಗಳನ್ನು ಧಿಕ್ಕರಿಸುತ್ತಿದೆ ಎಂದು ಒಕ್ಕೂಟ ಸರ್ಕಾರವು ಟ್ವಿಟರ್‌ ಮೇಲೆ ವಾಗ್ದಾಳಿ ನಡೆಸುತ್ತಿದೆ. ನಿಯಮಗಳನ್ನು ಅನುಸರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಟ್ವಿಟರ್‌‌ ಇಂಡಿಯಾ ಹೇಳುತ್ತಲೇ ಬಂದಿದೆ.

ಇದನ್ನೂ ಓದಿ: ಮುಂದುವರೆದ ಒಕ್ಕೂಟ ಸರ್ಕಾರ-ಟ್ವಿಟರ್‌‌‌ ಸಂಘರ್ಷ: ಮಧ್ಯಪ್ರದೇಶದಲ್ಲೂ ಕೇಸ್‍!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...