Homeಮುಖಪುಟ14 ಬ್ಯಾಂಕುಗಳಿಗೆ 14.5 ಕೋಟಿ ದಂಡ ವಿಧಿಸಿದ ಆರ್‌ಬಿಐ!

14 ಬ್ಯಾಂಕುಗಳಿಗೆ 14.5 ಕೋಟಿ ದಂಡ ವಿಧಿಸಿದ ಆರ್‌ಬಿಐ!

- Advertisement -
- Advertisement -

ಸರ್ಕಾರಿ ಹಾಗೂ ಖಾಸಗಿ ವಲಯದ ಸುಮಾರು 14 ಬ್ಯಾಂಕುಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ಭಾರಿ ಮೊತ್ತದ ದಂಡ ವಿಧಿಸಿದೆ. ಈ ಬ್ಯಾಂಕುಗಳು ಆರ್‌‌ಬಿಐ ನೀಡಿದಂತಹ ನಿಮಯಗಳನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ದಂಡಗಳನ್ನು ವಿಧಿಸಲಾಗಿದೆ.

ಆರ್‌ಬಿಐ ನೀಡಿದಂತಹ ಒಂದಕ್ಕಿಂತ ಹೆಚ್ಚಿನ ನಿಯಮಾವಳಿಗಳನ್ನು ಈ ಬ್ಯಾಂಕುಗಳು ಉಲ್ಲಂಘಿಸಿದ್ದು, ಹಾಗಾಗಿ ಸುಮಾರು 0.5 ಕೋಟಿ ರೂಪಾಯಿಯಿಂದ 2 ಕೋಟಿವರೆಗೆ ದಂಡವನ್ನು ಹಾಕಲಾಗಿದೆ. ಇತ್ತೀಚೆಗೆ ಆರ್‌ಬಿಐ ಕಂಪನಿಗಳ ಅಕೌಂಟ್‌ಗಳನ್ನು ಪರಿಶೀಲಿಸಿದಾಗ ಬ್ಯಾಂಕುಗಳು ಬ್ಯಾಂಕಿನ ನಿಯಂತ್ರಣ ಕಾಯ್ದೆ 1949 ರ ನಿಬಂಧನೆಗಳನ್ನು ಮತ್ತು ನಿಯಮಾವಳಿಗಳನ್ನು ಗಾಳಿಗೆ ತೂರಿ ಅವುಗಳನ್ನು ಉಲ್ಲಂಘಿಸಿದ್ದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ರಿಲಯನ್ಸ್‌ ಫೈನಾನ್ಸ್‌ಗಳಿಂದ ಬ್ಯಾಂಕಿಂಗ್ ಫ್ರಾಡ್- ಕರ್ನಾಟಕ ಬ್ಯಾಂಕ್‌ಗೆ ವಂಚನೆ

ಆರ್‌ಬಿಐ ಈ ಎಲ್ಲಾ ಬ್ಯಾಂಕುಗಳಿಗೆ ದಂಡ ವಿಧಿಸಿ ನೋಟಿಸ್‌ಗಳನ್ನು ಕಳುಹಿಸಿದ್ದಾರೆ. ದಂಡ ವಿಧಿಸಲಾಗಿರುವಂತಹ ಬ್ಯಾಂಕುಗಳಿಂದ ಬರುವಂತಹ ಪ್ರತ್ಯುತ್ತರಗಳನ್ನೂ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಆರ್‌ಬಿಐ ಹೇಳಿದ್ದು, ಜೊತೆಗೆ 14 ಬ್ಯಾಂಕುಗಳ ಮೇಲೆ ದಂಡವನ್ನು ವಿಧಿಸುವ ಅಗತ್ಯವಿದೆ ಎಂದು ಅದು ತಿಳಿಸಿದೆ.

ಬ್ಯಾಂಕ್ ಆಫ್ ಬರೋಡಾ ಮೇಲೆ 2 ಕೋಟಿ ರೂಪಾಯಿ ದಂಡವನ್ನು ವಿಧಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೇಲೆ ಅತೀ ಕಡಿಮೆ (0.5 ಕೋಟಿ) ರೂಪಾಯಿ ದಂಡವನ್ನು ವಿಧಿಸಿದೆ. ಇನ್ನುಳಿದಂತಹ 12 ಬ್ಯಾಂಕುಗಳ ಮೇಲೆ ಸಮನಾಗಿ 1 ಕೋಟಿ ರೂಪಾಯಿ ದಂಡವನ್ನು ಆರ್‌ಬಿಐ ವಿಧಿಸಿದೆ.

ಇದನ್ನೂ ಓದಿ: ದುಡ್ಡು ಕಟ್ಟಲಾಗದಿದ್ದರೆ ಸತ್ತೋಗಿ; ಕೊರೊನಾ ಸಮಯದಲ್ಲೂ ರಕ್ತ ಹೀರುತ್ತಿರುವ ಫೈನಾನ್ಸ್‌ಗಳು

ಬ್ಯಾಂಕೇತರ ಹಣಕಾಸು ಕಂಪನಿಗಳಿಗೆ ಸಾಲವನ್ನು ನೀಡುವುದರಲ್ಲಿ ಆರ್‌ಬಿಐ ತಿಳಿಸಿದ ನಿಯಮಗಳನ್ನು ಪಾಲಿಸದಿರುವುದರಿಂದ ಮತ್ತು ಇನ್ನಿತರೆ ಕಾರಣಗಳಲ್ಲಿ ಬ್ಯಾಂಕುಗಳು ನಿಯಮಗಳನ್ನು ಪಾಲಿಸದೆ ಇರುವುದರಿಂದ ಈ ಬ್ಯಾಂಕುಗಳ ಮೇಲೆ ಭಾರಿ ಮೊತ್ತದ ದಂಡವನ್ನು ವಿಧಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.

ಬಂಧನ್ ಬ್ಯಾಂಕ್ ಲಿಮಿಟೆಡ್, ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಕ್ರೆಡಿಟ್ ಸುಸೇ ಏಜಿ, ಇಂಡಿಯನ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್ ಲಿಮಿಟೆಡ್, ಕರ್ನಾಟಕ ಬ್ಯಾಂಕ್ ಲಿಮಿಟೆಡ್, ಕರೂರ್ ವೈಶ್ಯ ಬ್ಯಾಂಕ್ ಲಿಮಿಟೆಡ್, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್, ಸೌತ್ ಇಂಡಿಯನ್ ಬ್ಯಾಂಕ್ ಲಿಮಿಟೆಡ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ದ ಜಮ್ಮು ಆಂಡ್ ಕಾಶ್ಮೀರ್ ಬ್ಯಾಂಕ್ ಲಿಮಿಟೆಡ್ ಮತ್ತು ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ಈ ಪಟ್ಟಿಯಲ್ಲಿ ಸೇರಿದೆ.

ಇದನ್ನೂ ಓದಿ: ಕೊರೊನಾ ಕಾಲದಲ್ಲಿಯೂ ಬಡ್ಡಿಗೆ ಬಡ್ಡಿ ಸೇರಿಸಿ ಹಣ ವಸೂಲಿ: ಮುತ್ತೂಟ್ ಫೈನಾನ್ಸ್‌ನಿಂದ ಗ್ರಾಹಕರಿಗೆ ಕಿರುಕುಳ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....