Homeಕರೋನಾ ತಲ್ಲಣಮಹಾರಾಷ್ಟ್ರ, ಕೇರಳದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿನ ಸಂಖ್ಯೆ-ಉತ್ತರ ಪ್ರದೇಶದಲ್ಲಿ ಕಪ್ಪಾ ರೂಪಾಂತರಿ ಪತ್ತೆ

ಮಹಾರಾಷ್ಟ್ರ, ಕೇರಳದಲ್ಲಿ ಹೆಚ್ಚುತ್ತಲೇ ಇದೆ ಸೋಂಕಿನ ಸಂಖ್ಯೆ-ಉತ್ತರ ಪ್ರದೇಶದಲ್ಲಿ ಕಪ್ಪಾ ರೂಪಾಂತರಿ ಪತ್ತೆ

- Advertisement -
- Advertisement -

ದೇಶದಲ್ಲಿ ಕೋವಿಡ್‌ ಎರಡನೇ ಅಲೆ ಮುಕ್ತಾಯವಾಯಿತು ಎಂದು ಅನ್ನುತ್ತಿರುವಾಗಲೇ ಮತ್ತೊಮ್ಮೆ ಕೊರೋನಾ ಭೀತಿ ಆರಂಭವಾಗಿದೆ. ಇದಕ್ಕೆ ಕಾರಣ ಕೆಲವು ರಾಜ್ಯಗಳಲ್ಲಿ ಕಳೆದೊಂದು ವಾರದಿಂದ ಹೆಚ್ಚುತ್ತಿರುವ ಕೊರೋನಾ ಸೊಂಕಿನ ಸಂಖ್ಯೆ. ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಜುಲೈ ಮೊದಲವಾರದಿಂದ ಆರಂಭವಾದ ಸೋಂಕಿತರ ಸಂಖ್ಯೆಯಲ್ಲಿನ ಹೆಚ್ಚಳ ಎರಡನೇ ವಾರದ ಹೊತ್ತಿಗೆ ಗಣನೀಯ ಸಂಖ್ಯೆಯನ್ನು ತಲುಪಿದೆ. ನಿರ್ಭಂದಗಳನ್ನು ತೆರವುಗೊಳಿಸಿದ ಪರಿಣಾಮವಾಗಿ ಪ್ರವಾಸಿ ತಾಣಗಳು ತುಂಬಿ ತುಳುಕಾಡುತ್ತಿವೆ. ಇದರ ನಡುವೆ ಹೊಸ ಅಪಾಯಕಾರಿ ಕಪ್ಪಾ ರೂಪಾಂತರಿ ವೈರಸ್‌ ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.

ದೇಶದ ಕೋವಿಡ್ -19 ಪರಿಸ್ಥಿತಿಯ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್, ದೇಶದಲ್ಲಿ  ವೈರಸ್ ಇನ್ನೂ ಹರಡುತ್ತಿದೆ. ಕೋವಿಡ್ ಮಾನದಂಡಗಳ ಉಲ್ಲಂಘನೆ ಕಳವಳಕಾರಿಯಾಗಿದೆ.ದೇಶದ ಒಟ್ಟು ಕೋವಿಡ್ -19 ಪ್ರಕರಣಗಳಲ್ಲಿ  50% ಕ್ಕು ಹೆಚ್ಚು ಪ್ರಕರಣಗಳು ಮಹಾರಾಷ್ಟ್ರ ಮತ್ತು ಕೇರಳದಿಂದ ಬಂದಿವೆ. ಕೇರಳದ 14 ಮತ್ತು ಮಹಾರಾಷ್ಟ್ರದ 15 ಜಿಲ್ಲೆಗಳ ಪರಿಸ್ಥಿತಿ ಕಳವಳಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ವೈರಸ್‌ನ 13,772 ಪ್ರಕರಣಗಳು ಪತ್ತೆಯಾಗಿವೆ. ಮಹಾರಾಷ್ಟ್ರದಲ್ಲಿ 9,083 ಜನರು ಸೋಂಕಿಗೆ ತುತ್ತಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯೆ 43,504 ಇದೆ. 3,211 ಪ್ರಕರಣಗಳೊಂದಿಗೆ ತಮಿಳುನಾಡು, ಆಂಧ್ರಪ್ರದೇಶ 2,982 ಗಳು ನಂತರ ಸ್ಥಾನದಲ್ಲಿ ಇವೆ. ಅಸ್ಸಾಂನಲ್ಲಿ 2,644 ಹೊಸ ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ: ಮಕ್ಕಳಿಗೂ ಬಂತು ಕೋವಿಡ್ ಲಸಿಕೆ : ಸೆಪ್ಟೆಂಬರ್‌ನಲ್ಲಿ ಝೈಡಸ್‌ ಕ್ಯಾಡಿಲಾ ವ್ಯಾಕ್ಸಿನ್‌-ಎನ್‌.ಕೆ. ಅರೋರಾ

ಕರ್ನಾಟಕದಲ್ಲಿ  2,530 ಹೊಸ ಪ್ರಕರಣಗಳು ದಾಖಲಾಗಿದ್ದು 62 ಜನರು ಕೋವಿಡ್‌ ಕಾರಣದಿಂದ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಮಾತ್ರ ಕೋವಿಡ್ ಸಾವಿನ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು ಒಂದೇ ದಿನ 439 ಜನರು ಸೋಂಕಿಗೆ ಮೃತಪಟ್ಟಿದ್ದಾರೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್‌ ಪಾಸಿಟಿವಿಟಿ ದರ 10% ಕ್ಕಿಂತಲೂ ಹೆಚ್ಚಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ನಿರ್ಬಂಧಗಳನ್ನು ಸಡಿಲಿಸಿದ ಕಾರಣಕ್ಕೆ  ಜನರ ಓಡಾಟವೂ ಹೆಚ್ಚಿದ್ದು ಮುಂಬೈ. ದೆಹಲಿ ಸೇರಿದಂತೆ ದೇಶದ ನಗರಗಳ ಸಾರ್ವಜನಿಕ ಸ್ಥಳಗಳಲ್ಲಿ ಜನ ಸಂದಣಿ ಉಂಟಾಗುತ್ತಿರುವುದು ಕೂಡ ಸೋಂಕು ಹೆಚ್ಚುಳಕ್ಕೆ ಒಂದು ಕಾರಣ. ಕೋವಿಡ್ ಮೂರನೆ ಅಲೆ ದೇಶದಲ್ಲಿ ಆರಂಭವಾಗಿರುವ ಸೂಚನೆ ಇದಾಗಿರಬಹುದು. ಕೇಂದ್ರ ಆರೋಗ್ಯ ಇಲಾಖೆಯಾಗಲಿ ಅಥವಾ ತಜ್ಞರಾಗಲಿ ಮೂರನೇ ಅಲೆ ಆರಂಭವಾಗಿರುವ ಕುರಿತು ಇದುವರೆಗೆ ಅಧಿಕೃತವಾದ ಮಾಹಿತಿ ನೀಡಿಲ್ಲ.

ಪಂಜಾಬ್‌ನಲ್ಲಿ ಕ್ಯಾಪ್ಟನ್‌ ಅಮರಿಂರ್‌ ಸಿಂಗ್ ಸರ್ಕಾರ ವಾರಾಂತ್ಯದ ಕರ್ಪ್ಯು ಮತ್ತು ರಾತ್ರಿ ಕರ್ಪ್ಯುಗಳನ್ನು ತೆಗೆದಿದೆ.

ಇದನ್ನೂ ಓದಿ: ಅಮೆರಿಕಾದಲ್ಲಿ ಡೆಲ್ಟಾ ರೂಪಾಂತರಿಯಿಂದ ಹೆಚ್ಚಾದ, ಕೊರೊನಾ ಪ್ರಕರಣಗಳು!

ಉತ್ತರ ಪ್ರದೇಶದಲ್ಲಿ ಹೊಸ ರೂಪಾಂತರಿ ಕಪ್ಪಾ ವೈರಸ್‌ ತಳಿಯ 2 ಪ್ರಕರಣಗಳು ಪತ್ತೆ

ವ್ಯಾಪಕವಾಗಿ ಹರಡಬಲ್ಲ ಕೊವಿಡ್-19ನ ಕಪ್ಪಾ ತಳಿ ರೂಪಾಂತರ ಸೋಂಕುಗಳು ಉತ್ತರ ಪ್ರದೇಶದಲ್ಲಿ ಪತ್ತೆಯಾಗಿದೆ.ಕಪ್ಪಾ ತಳಿಯ ಎರಡು ಪ್ರಕರಣಗಳು ಇಲ್ಲಿ ಪತ್ತೆಯಾಗಿರುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಅಧಿಕೃತ ಹೇಳಿಕೆಯ ಪ್ರಕಾರ ಲಖನೌದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನಲ್ಲನ ಮಾದರಿಗಳನ್ನು ಪರೀಕ್ಷೆಗೊಳಪಡಿಸಿದಾಗ ಈ ತಳಿ ಪತ್ತೆಯಾಗಿದೆ. ಶುಕ್ರವಾರ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಈ ಬಗ್ಗೆ  ಮಾಹಿತಿ ನೀಡಿದೆ.

ಕಾಪ್ಪಾ ರೂಪಂತರಿ ಕುರಿತಾಗಿ ಮಾಹಿತಿ ನೀಡಿದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಮಿತ್ ಮೋಹನ್ ಪ್ರಸಾದ್ ಅವರು, ‘ಜೀನೋಮ್ ಸೀಕ್ವೆನ್ಸಿಂಗ್ ಎನ್ನುವುದು ಪ್ರಯೋಗಾಲಯ ಪ್ರಕ್ರಿಯೆಯಾಗಿದ್ದು, ಇದು ರೂಪಾಂತರಗಳನ್ನು ನಿರೂಪಿಸಲು ಮತ್ತು ರೋಗ ಪತ್ತೆಹಚ್ಚಲಿರುವ ವಿಧಾನವಾಗಿದೆ. ಪ್ರಸ್ತುತ, ಉತ್ತರ ಪ್ರದೇಶ  ರಾಜ್ಯದಲ್ಲಿ ದೈನಂದಿನ ಕೋವಿಡ್‌ ಪಾಸಿಟಿವಿಟಿ ದರವು ಶೇಕಡಾ 0.04ರಷ್ಟಿದೆ.ಈ ಹಿಂದೆಯೇ ಈ ಕಪ್ಪಾ ರೂಪಾಂತರಿ ತಳಿಯ  ಪ್ರಕರಣಗಳು ರಾಜ್ಯದಲ್ಲಿ ಕಂಡುಬಂದಿವೆ ಎಂದು ಹೇಳಿದ್ದಾರೆ.

ಈ ಕಪ್ಪಾರೂಪಾಂತರಿ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ. ಇದು ಕೊರೊನಾ ವೈರಸ್ನ ಒಂದು ರೂಪಾಂತರವಾಗಿದೆ ಮತ್ತು ಅದರ ಚಿಕಿತ್ಸೆಯು ಸಾಧ್ಯವಿದೆ. ಎಚ್ಚರಿಕೆಯ ಕ್ರಮವಾಗಿ, ಪೀಡಿತ ಜಿಲ್ಲೆಗಳ ಹೆಸರುಗಳು ಅಥವಾ ಅದರ ಮೂಲದ ಸ್ಥಳಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪ್ರಸಾದ್ ಹೇಳಿದರು.

 ಸೋಂಕಿನ ಎರಡನೆಯ ಅಲೆಯ ನಡುವೆಯೇ ಡೆಲ್ಟಾ, ಆಲ್ಫಾ ಮತ್ತು ಕಪ್ಪಾದಂತಹ ರೂಪಾಂತರಗಳು ಹೆಚ್ಚು ಹರಡುತ್ತವೆ ಎಂದು ಹೇಳಲಾಗುತ್ತಿರುವುದರಿಂದ ರಾಜ್ಯಗಳಿಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಈಗಾಗಲೇ ಎಚ್ಚರಿಸಿದೆ.

ಇದನ್ನೂ ಓದಿ: ಕೊರೊನಾ ಸೋಂಕಿತರಾಗಿ, ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾರೆ ಕರ್ನಾಟಕದ ಮಾನವ ಕಂಪ್ಯೂಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...