Homeಮುಖಪುಟಚಿರಾಗ್ ಪಾಸ್ವಾನ್‌ಗೆ ಸಿಗದ ನಾಯಕ ಸ್ಥಾನ : ಸ್ಪೀಕರ್‌ ನಿರ್ಣಯಕ್ಕೆ ತಡೆ ನೀಡಲು ನಿರಾಕರಿಸಿದ ದೆಹಲಿ...

ಚಿರಾಗ್ ಪಾಸ್ವಾನ್‌ಗೆ ಸಿಗದ ನಾಯಕ ಸ್ಥಾನ : ಸ್ಪೀಕರ್‌ ನಿರ್ಣಯಕ್ಕೆ ತಡೆ ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ದಿವಂಗತ ರಾಮ್‌ ವಿಲಾಸ್‌ ಪಾಸ್ವಾನ್ ಅವರ ಎಲ್‌ಜೆಪಿ ಪಕ್ಷದಲ್ಲಿನ ನಾಯಕತ್ವದ ಕಿತ್ತಾಟ ಸದ್ಯಕ್ಕೆ ಕೊನೆಯಾಗುವಂತೆ ಕಾಣುತ್ತಿಲ್ಲ. ಕೇಂದ್ರ ಸಚಿವ ಪಶುಪತಿ ಪಾರಸ್‌ ಮತ್ತು ರಾಮ್‌ ವಿಲಾಸ್‌ ಪಾಸ್ವಾನ್ ಪುತ್ರ ಚಿರಾಗ್‌ ಪಾಸ್ವಾನ್ ನಡುವಿನ ಕಚ್ಚಾಟ ಈಗ ನ್ಯಾಯಾಲಯದ ಅಂಗಳಕ್ಕೆ ಕಾಲಿಟ್ಟಿದೆ. ದೆಹಲಿ ಹೈಕೋರ್ಟ್‌ನಲ್ಲಿ ಚಿರಾಗ್‌ ಪಾಸ್ವಾನ್‌ ಅವರಿಗೆ ಹಿನ್ನಡೆಯಾಗಿದ್ದು ಪಶುಪತಿ ಪಾರಸ್‌ ಅವರನ್ನು ಎಲ್‌ಜೆಪಿ ನಾಯಕ ಎಂಬ ಸ್ಪೀಕರ್‌ ತೀರ್ಮಾನವನ್ನು ಕೋರ್ಟ್‌ ಎತ್ತಿಹಿಡಿದಿದೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪಶುಪತಿ ಪಾರಸ್‌ ಅವರನ್ನು ಎಲ್‌ಜೆಪಿ ನಾಯಕ ಎಂದು ಮಾನ್ಯ ಮಾಡಿದ್ದನ್ನು ಪ್ರಶ್ನಿಸಿ ರಾಮ್‌  ಚಿರಾಗ್‌ ಪಾಸ್ವಾನ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಚಿರಾಗ್‌ ಪಾಸ್ವಾನ್ ಅವರ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌ ಸ್ಪೀಕರ್ ಓಂ ಬಿರ್ಲಾ ತೀರ್ಮಾನಕ್ಕೆ ತಡೆ ನೀಡಲು ನಿರಾಕರಿಸಿದೆ. ಆ ಮೂಲಕ ಎಲ್‌ಜೆಪಿ ಮುಖ್ಯಸ್ಥ ಪಟ್ಟಕ್ಕೆ ಏರುವ ಚಿರಾಗ್ ಪಾಸ್ವಾನ್ ಕನಸು ಭಗ್ನಗೊಂಡಿದೆ.

ಇದನ್ನೂ ಓದಿ: ನಿತೀಶ್‌ ಕುಮಾರ್‌ರವರ JDU ಯಾವಾಗ ಬೇಕಾದರೂ ಇಬ್ಭಾಗವಾಗಬಹುದು: ಚಿರಾಗ್ ಪಾಸ್ವಾನ್

ಪಶುಪತಿ ಪಾರಸ್‌ ಅವರು ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಮಂತ್ರಿಯಾಗಿ ನೇಮಕಗೊಂಡಿದ್ದಾರೆ. ಹೈಕೋರ್ಟ್ ಆದೇಶ ಮತ್ತು ಕೇಂದ್ರ ಮಂತ್ರಿ ಮಂಡಲದ ಪುನರ್ರಚನೆಯ ನಂತರ ಚಿರಾಗ್ ಪಾಸ್ವಾನ್‌ ಅವರಿಗೆ ತೀವ್ರ ಹಿನ್ನಡೆಯಾಗಿದ್ದು ಸಚಿವ ಪಶುಪತಿ ಪಾರಸ್‌ ಕೈ ಮೇಲಾಗಿದೆ.

ಇತ್ತೀಚೆಗಷ್ಟೆ ಪಶುಪತಿ ಪಾರಸ್‌ ಇತರ ನಾಲ್ಕು ಎಂಪಿಗಳೊಂದಿಗೆ ಚಿರಾಗ್ ಪಾಸ್ವಾನ್‌ ವಿರುದ್ಧ ಬಂಡಾಯವೆದ್ದಿದರು ಮತ್ತು ಅವರನ್ನು ಪಕ್ಷದಿಂದ ಉಚ್ಛಾಟನೆಗೊಳಿಸಿದ್ದರು.

ಸ್ಪೀಕರ್‌ ಓಂ ಬಿರ್ಲಾ ಪಶುಪತಿ ಪಾರಸ್‌ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕ ಎಂದು ಗುರಿತಿಸಿರುವುದನ್ನು ಪ್ರಶ್ನಿಸಿ ಎಲ್‌ಜೆಪಿ ಇಂದು ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದೆ. ಪಾರಸ್‌ ಅವರನ್ನು ಕೇಂದ್ರ ಮಂತ್ರಿಮಂಡಳಕ್ಕೆ ಸೇರಿಸಿಕೊಂಡಿದ್ದನ್ನು ಪಕ್ಷ ಖಂಡಿಸುತ್ತದೆ ಎಂದು ಚಿರಾಗ್ ಪಾಸ್ವಾನ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಮೌನದಿಂದ ನೋವಾಗುತ್ತಿದೆ: ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...