Homeಕರ್ನಾಟಕಮೈಶುಗರ್ ಖಾಸಗೀಕರಣಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ: ಉಗ್ರ ಹೋರಾಟದ ಎಚ್ಚರಿಕೆ

ಮೈಶುಗರ್ ಖಾಸಗೀಕರಣಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ: ಉಗ್ರ ಹೋರಾಟದ ಎಚ್ಚರಿಕೆ

- Advertisement -
- Advertisement -

ಮೈಶುಗರ್‌ ಸಕ್ಕರೆ ಕಾರ್ಖಾನೆಯನ್ನು 40 ವರ್ಷ ಖಾಸಗಿ ಗುತ್ತಿಗೆಗೆ ನೀಡುವ ಸರಕಾರದ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರೋಧ  ವ್ಯಕ್ತಪಡಿಸಿದ್ದಾರೆ. ಮೈಶುಗರ್‌ ಖಾಸಗೀಕರಣಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಸರ್ಕಾರ ಮಂಡ್ಯದ ರೈತರ ಹಿತಾಸಕ್ತಿಗೆ ವಿರುದ್ಧವಾಗಿ ನಿರ್ಧಾರ ಕೈಗೊಂಡರೆ ಉಗ್ರ ಹೋರಾಟ ನಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಮಾಜಿ ಸಂಸದ ಜಿ ಮಾದೇಗೌಡ ಅವರ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದ ವೇಳೆ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಂಡ್ಯ ಜಿಲ್ಲೆ ರೈತರ ಸೇವೆಗೆಂದು ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು ಮಹಾರಾಜರು ಒಂದು ದೊಡ್ಡ ಆಸ್ತಿ ಮಾಡಿ ಹೋಗಿದ್ದು ಅದನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಖಾಸಗಿ ಸ್ವಾಮ್ಯಕ್ಕೆ ಒಪ್ಪಿಸದೇ ಸರಕಾರವೇ ಮುನ್ನಡೆಸುವ ಮೂಲಕ ಜಿಲ್ಲೆಯ ರೈತರ ಹಿತ ಕಾಪಾಡಬೇಕು,” ಎಂದಿದ್ದಾರೆ.

ಈಗಾಗಲೇ ಜಿಲ್ಲೆಯ ರೈತ ನಾಯಕರು ತಮ್ಮನ್ನೂ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೂಡಲೇ ಕಾರ್ಖಾನೆ ಆರಂಭಿಸುವಂತೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿ ಎಂದು ಮನವಿ ಮಾಡಿದ್ದಾರೆ. ಯಡಿಯೂರಪ್ಪ ಅವರ ಜೊತೆ ಈ ಕುರಿತು ಚರ್ಚಿಸುವುದಾಗಿ ಶಿವಕುಮಾರ್ ಇದೇ ಸಂದರ್ಭದಲ್ಲಿ ರೈತರಿಗೆ ಭರವಸೆ ನೀಡಿದ್ದಾರೆ.

ಇದನ್ನೂ ಓದಿ:  ಸಂಸದೆ ಸುಮಲತಾ ದಾಖಲೆ ನೀಡಿದರೆ ಅಕ್ರಮ ಗಣಿಗಾರಿಕೆಯ ತನಿಖೆ – ಮುರುಗೇಶ್ ನಿರಾಣಿ

ಕೆಆರ್‌ಎಸ್‌ ಅಣೆಕಟ್ಟೆ ಬಿರುಕು ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರು, ಬಿರುಕು ಬಿಟ್ಟಿದ್ದರೆ ಅದನ್ನು ಪರಿಶೀಲಿಸಲು 40 ಮಂದಿ ಎಂಜಿನಿಯರ್‌ಗಳಿದ್ದು, ಅವರನ್ನೇ ಕೇಳಿ ಮಾಹಿತಿ ಪಡೆಯಲಿ ಎಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವೆ ನಡೆಯುತ್ತಿರುವ ವಿವಾದಗಳಿಗೆ ಸ್ಪಂದಿಸಲು ನಿರಾಕರಿಸಿದ ಅವರು ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ ಅವುಗಳ ಕುರಿತು ಸರ್ಕಾರದ ಗಮನ ಸೆಳೆಯುವುದರ ಕಡೆ ಮಾತ್ರ ಗಮನಹರಿಸಿರುವುದಾಗಿ ಪ್ರತಿಕ್ರಿಯಿಸಿದ್ದಾರೆ.

ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳ ಚುನಾವಣೆಗಳಿಗೆ ಪಕ್ಷದ ಚಿಹ್ನೆಯಡಿ ಎಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲುವಿಗೆ ಕಾರ್ಯಯೋಜನೆ ರೂಪಿಸುವುದಾಗಿ ತಿಳಿಸಿದ ಕೆಪಿಸಿಸಿ ಅಧ್ಯಕ್ಷರು ಸ್ಥಳೀಯ ಮುಖಂಡರು, ಕಾರ್ಯಕರ್ತರೊಟ್ಟಿಗೆ ಚರ್ಚಿಸಿ ಗೆಲ್ಲುವ ಅಭ್ಯರ್ಥಿಗಳಿಗೆ ಹೆಚ್ಚಿನ ಒತ್ತು ನೀಡುವುದಾಗಿ ಹೇಳಿದ್ದಾರೆ.

ಈ ವೇಳೆ ಕೆಪಿಸಿಸಿ ಸದಸ್ಯ ಎಸ್‌. ಗುರುಚರಣ್‌, ಬ್ಲಾಕ್‌ ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಕದಲೂರು ರಾಮಕೃಷ್ಣ, ತಾ.ಪಂ. ಮಾಜಿ ಸದಸ್ಯ ಕೆ.ಆರ್‌. ಮಹೇಶ್‌, ಮುಖಂಡರಾದ ಸತೀಶ್‌, ಚಿದಂಬರ್‌, ಅಪ್ಪಾಜಿ, ಆಸೀಫ್‌, ಮುನ್ನಾವರ್‌, ಅಸ್ಲಾಂ, ವಿಜಿಕುಮಾರ್‌, ಮಹೇಶ್‌ ಇತರರಿದ್ದರು.

ಇದನ್ನೂ ಓದಿ: ಎಚ್.ಡಿ.ಕುಮಾರಸ್ವಾಮಿ V/s ಸುಮಲತಾ: ರಾಜಕೀಯ ಕದನಕ್ಕೆ ವಿರಾಮ ನೀಡಲು ಎಚ್‌ಡಿಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...