Homeಮುಖಪುಟಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

ಯುಪಿ ಚುನಾವಣಾ ಹಿಂಸಾಚಾರ: ಐಎಎಸ್‌ ಅಧಿಕಾರಿಯಿಂದ ಪತ್ರಕರ್ತನ ಮೇಲೆ ಹಲ್ಲೆ

- Advertisement -
- Advertisement -

‍ಹಿಂಸಾತ್ಮಕ ಘಟನೆಗಳ ನಡುವೆ ಉತ್ತರ ಪ್ರದೇಶದ ಬ್ಲಾಕ್ ಪ್ರಮುಖರ ಚುನಾವಣೆ ನಡೆದು ಫಲಿತಾಂಶವೂ ಬಂದಿದೆ. ಚುನಾವಣೆಯ ಸಂದರ್ಭದಲ್ಲಿ ಉನ್ನಾವೊ ಜಿಲ್ಲೆಯ ಒಂದು ಘಟನೆ ದೇಶದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿದೆ. ಇಲ್ಲಿಯ ಚೀಫ್ ಡೆವಲಪ್‌ಮೆಂಟ್‌ ಅಧಿಕಾರಿ ದಿವ್ಯಾಂಶು ಪಟೇಲ್ ವಿವಾದಕ್ಕೆ ಕಾರಣರಾಗಿದ್ದರೆ. ಚುನಾವಣೆ ಸಮಯದಲ್ಲಿ ಅವರು ಪತ್ರಕರ್ತರನ್ನು ಥಳಿಸಿದ್ದಾರೆ ಎಂದು ಆರೋಪ ಕೇಳಿಬಂದಿದ್ದು ಆ ಸಂಬಂಧ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

IAS ಅಧಿಕಾರಿ ದಿವ್ಯಾಂಶು ಪಟೇಲ್ ಅವರ ಅಮಾನತ್ತಿಗೆ ಅನೇಕ ಹಿರಿಯ ರಾಜಕಾರಣಿಗಳು ಒತ್ತಾಯಿಸಿದ್ದಾರೆ. ಮತ್ತು ಸಿಡಿಒ ಬಂಧನಕ್ಕೆ ಒತ್ತಾಯಿಸಿ ಸೋಶಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಟ್ರೆಂಡಿಂಗ್ ನಡೆಯುತ್ತಿದೆ.

ಉತ್ತರ ಪ್ರದೇಶದಲ್ಲಿ ನಡೆದ ಬ್ಲಾಕ್‌ ಪ್ರಮುಖ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸುತ್ತಿದ್ದಂತೆ ವ್ಯಾಪಕ ಹಿಂಸಾಚಾರ ನಡೆದಿತ್ತು. ಚುನಾವಣೆ ಫಲಿತಾಂಶ ಘೊಷಣೆ ನಡೆದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ವಿರೋಧ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಟಿ.ವಿ. ವಾಹಿನಿಯ ಪತ್ರಕರ್ತ ಕೃಷ್ಣ ತಿವಾರಿಯವರ ಮೇಲೆ ಬಿಜೆಪಿ ಕಾರ್ಯಕರ್ತರು ಮತ್ತು ಸಿಡಿಒ ದಿವ್ಯಾಂಶು ಪಟೇಲ್‌ ಹಿಗ್ಗಾ ಮುಗ್ಗಾ ಥಳಿಸುತ್ತಿರುವ ವಿಡಿಯೋ ಫೇಸ್‌ಬುಕ್‌ ಮತ್ತು ಟ್ವಿಟ್ಟರ್‌ನಲ್ಲಿ ಹರಿದಾಡುತ್ತಿದೆ. ಪತ್ರಕರ್ತರ ಮೇಲಿನ ಹಲ್ಲೆಯ ದೃಶ್ಯ ಬೆಳಕಿಗೆ ಬರುತ್ತಿದಂತೆ  ಘಟನೆಯನ್ನು ಖಂಡಿಸಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಬ್ರಜೇಶ್‌ ಮಿಶ್ರಾ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜನಸಂಖ್ಯಾ ನಿಯಂತ್ರಣ ಮಸೂದೆ ಕರಡು ಪ್ರಕಟ

ಕಾಂಗ್ರೆಸ್‌ ನಾಯಕ ಕ್ಯಾಪ್ಟನ್‌ ಅಜಯ್‌ ಸಿಂಗ್‌ ಪತ್ರಕರ್ತರ ಮೇಲೆ ದೌರ್ಜನ್ಯವೆಸಗಿದ ಸಿಡಿಒ ದಿವ್ಯಾಂಶು ಪಟೇಲ್‌ ಅವರ ಅಮಾನತ್ತಿಗೆ ಆಗ್ರಹಿಸಿದ್ದಾರೆ. ಪತ್ರಿಕೋದ್ಯಮ ಸಂವಿಧಾನದ 4 ನೇ ಅಂಗ. IAS ಅಧಿಕಾರಿಯೊಬ್ಬರು ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವುದು ಸಂವಿಧಾನದ ಮೇಲೆಯೆ ಹಲ್ಲೆ ನಡೆಸಿದಂತೆ. ಜನರ ಅಭಿಪ್ರಾಯಗಳನ್ನು ವರದಿ ಮಾಡುತ್ತಿದ್ದ ಪತ್ರಕರ್ತ ಕೃಷ್ಣ ತಿವಾರಿಯವರಿಗೆ ಥಳಿಸಿದ ದಿವ್ಯಾಂಶು ಪಟೇಲ್ ಮತ್ತು ಬಿಜೆಪಿ ಕಾರ್ಯಕರ್ತರ ಬಂಧನವಾಗಬೇಕೆಂದು ಅವರು ಟ್ವೀಟ್‌ ಮಾಡಿದ್ದಾರೆ.

ಅತ್ಯಾಚಾರ, ದೌರ್ಜನ್ಯ, ಅಧಿಕಾರದ ಮದ, ಪೊಲೀಸ್ ದಬ್ಬಾಳಿಕೆ ಇದು ಉತ್ತರ ಪ್ರದೇಶ ಸರ್ಕಾರದ ಮುಖ್ಯ ಪ್ರಾಯೋಜಿತ ಕಾರ್ಯಕ್ರಮಗಳು. ಇನ್ನು ಮೌನ ವಹಿಸಿ ಕೂತರೆ ದೇಶದಲ್ಲಿ ಶಾಂತಿ ಮತ್ತು ನೆಮ್ಮದಿ ಮರೀಚಿಕೆಗಳಷ್ಟೆ ಎಂದು ಪತ್ರಕರ್ತನ ಮೇಲಿನ ಹಲ್ಲೆ ಕುರಿತು ಕಾಂಗ್ರೆಸ್‌ ವಕ್ತಾರೆ ಡಾ. ಅರ್ಚನಾ ಶರ್ಮಾ ಪ್ರತಿಕ್ರಿಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಿಡಿಒ ದಿವ್ಯಾಂಶು ಪಟೇಲ್‌ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದಂತೆ ಉತ್ತರ ಪ್ರದೇಶ ಸರ್ಕಾರ ಮತ್ತು ಜಿಲ್ಲಾಡಳಿತ ಘಟನೆಯ ವರದಿಯನ್ನು ಕೇಳಿದೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: 2015-19ರ ನಡುವೆ ದ್ವಿಗುಣಗೊಂಡ ಮಹಿಳೆಯರ ಮೇಲಿನ ದೌರ್ಜನ್ಯ!

ಪತ್ರಕರ್ತರ ಮೇಲಿನ ಹಲ್ಲೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾದಂತಿದೆ. ನಾವು ಪ್ರಜಾಪ್ರಭುತ್ವ ದೇಶದಲ್ಲಿ ಇದ್ದೇವೆಯೇ ಅಥವಾ ಪೊಲೀಸ್‌ ರಾಜ್ಯದಲ್ಲಿರುವುದೋ ಎಂದು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಅನೇಕರು ಆಕ್ರೋಶ ಹೊರಹಾಕಿದ್ದಾರೆ.  ಚುನಾವಣೆಯಲ್ಲಿ ವ್ಯಾಪಕ ಹಿಂಸಾಚಾರ ನಡೆದಿದ್ದು ಪೊಲೀಸರ ಎದುರಿನಲ್ಲಿಯೇ ಘರ್ಷಣೆ ಮತ್ತು ಗುಂಡಿನ ದಾಳಿಗಳು ಸಹ ನಡೆದಿವೆ ಎಂದು ರಾಷ್ಟ್ರೀಯ ವಾಹಿನಿಯೊಂದು ವರದಿ ಮಾಡಿದೆ.

ಬ್ಲಾಕ್‌ ಪ್ರಮುಖ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸಿಂಗ್‌ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ್ದರು.

ಗ್ರಾಮ ಪಂಚಾಯತಿ, ಬ್ಲಾಕ್‌ ಪಂಚಾಯತಿಯಂತಹ ಸ್ಥಳೀಯ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಅಭಿನಂದಿಸುವ ಪ್ರಧಾನಿ ಮೋದಿಯವರು ಪತ್ರಕರ್ತರ ಮೇಲೆ  ಹಲ್ಲೆ ನಡೆದಾಗ ಯಾಕೆ ತುಟಿ ಬಿಚ್ಚುವುದಿಲ್ಲ ? ತಮ್ಮ ಕಾರ್ಯಕರ್ತರಲ್ಲಿ ಶಾಂತಿ ಸ್ಥಾಪನೆಗೆ ಕರೆ ನೀಡುವುದಿಲ್ಲ ? ಈಶಾನ್ಯ ದೆಹಲಿಯ ಗಲಭೆ ಸಂದರ್ಭದಿಂದ ಹಿಡಿದು ನಿನ್ನೆಯ ಪೊಲೀಸ್‌ ದೌರ್ಜನ್ಯದವರೆಗೆ ಪ್ರಧಾನಿಯವರ ದಿವ್ಯ ಮೌನ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ ಎಂದು ದೇಶದ ಅನೇಕ ರಾಜಕೀಯ ನಾಯಕರು, ನ್ಯಾಯವಾದಿಗಳು ಮತ್ತು ಹರಿಯ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಪ್ರಾಯೋಜಿತ ಹಿಂಸಾಚಾರ ಮತ್ತು ಭಿನ್ನಮತವನ್ನು ಪೊಲೀಸ್‌ ಬಲದಿಂದ ದಮನಿಸುವ ಬಿಜೆಪಿ ತಂತದ್ರದ ವಿರುದ್ಧ ಜನರು ಧ್ವನಿ ಎತ್ತಬೇಕು ಎಂದು ಕಾಂಗ್ರೆಸ್‌, ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ನಾಯಕರು ಕರೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ನಡುವೆಯೂ ನಿಲ್ಲದ ಗೋ ರಕ್ಷಕರ ಗೂಂಡಾ ವರ್ತನೆ : ಉತ್ತರ ಪ್ರದೇಶದಲ್ಲಿ ಮುಸ್ಲೀಂ ಯುವಕನ ಮೇಲೆ ಮನಸೋ…

-ರಾಜೇಶ್ ಹೆಬ್ಬಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...