Homeಮುಖಪುಟಉಗ್ರ ಸಂಘಟನೆಗಳಿಗೆ ಹಣಕಾಸು ನೆರವು: ಕಾಶ್ಮೀರದಲ್ಲಿ ಎನ್‌ಐಎ ದಾಳಿಯಲ್ಲಿ ಆರು ಜನರ ಬಂಧನ

ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು: ಕಾಶ್ಮೀರದಲ್ಲಿ ಎನ್‌ಐಎ ದಾಳಿಯಲ್ಲಿ ಆರು ಜನರ ಬಂಧನ

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ಉಗ್ರರ ಸಂಘಟನೆಗಳಿಗೆ ಹಣಕಾಸು ನೆರವು ನೀಡಿದ ಪ್ರಕರಣಗಳಿಗೆ ಸಂಬಂಧಿಸಿ ಶ್ರೀನಗರ, ಅನಂತ್‌ನಾಗ್ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ದಾಳಿಯಲ್ಲಿ ಆರು ಜನರನ್ನು ಬಂಧಿಸಿದ್ದಾರೆ.

ಶನಿವಾರವಷ್ಟೇ ಜಮ್ಮು ಮತ್ತು ಕಾಶ್ಮೀರ ಸರ್ಕಾರ 11 ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿತ್ತು. ವಜಾಗೊಳಿಸಿದ ನೌಕರರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲ್ಲಾಹುದ್ದೀನ್ ಅವರ ಇಬ್ಬರು ಪುತ್ರರಾದ ಸೈಯದ್ ಅಹ್ಮದ್ ಶಕೀಲ್ ಮತ್ತು ಶಾಹಿದ್ ಯೂಸುಫ್ ಸೇರಿದ್ದಾರೆ.

ಎನ್‌ಐಎ ದಕ್ಷಿಣ ಕಾಶ್ಮೀರದ ಪುಶ್ರೂ, ಸನ್‌ಸೂಮಾ ಮತ್ತು ಅಚಬಲ್ ಗ್ರಾಮಗಳಲ್ಲಿ ದಾಳಿ ನಡೆಸಿ ಐದು ಜನರನ್ನು ಬಂಧಿಸಿದೆ. ಶ್ರೀನಗರದಲ್ಲಿ ಧಾರ್ಮಿಕ ಸಂಸ್ಥೆ ದಾರುಲ್ ಉಲೂಮ್ ಕಚೇರಿಯ ಮೇಲೆ ದಾಳಿ ನಡೆಸಿ ಸಂಸ್ಥೆಯ ಮುಖ್ಯಸ್ಥ ನೂರ್ ದಿನ್ ಭಟ್ ಅವರನ್ನು ಬಂಧಿಸಲಾಗಿದೆ. ಜೊತೆಗೆ ಲ್ಯಾಪ್‌ಟಾಪ್, ಬ್ಯಾಂಕ್ ಸ್ಟೇಟ್‌ಮೆಂಟ್‌ಗಳು ಮತ್ತು ಇತರ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಸ್ಥೆಗೆ ಸೇರಿದ ದಲಾಲ್‌ ಮೊಹಲ್ಲಾ, ನವಾಬ್‌ ಬಜಾರ್ ಮತ್ತು ಓಲ್ಡ್‌ ಸಿಟಿಯಲ್ಲಿ ಇರುವ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳ ತಿಳಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಪ್ರತ್ಯೇಕತೆಯ ಕಿಡಿ ಹಚ್ಚಿದ ಬಿಜೆಪಿ: ಮುನ್ನೆಲೆಗೆ ಬಂದ ಪ್ರತ್ಯೇಕ ರಾಜ್ಯದ ಕೂಗು

ಈ ಹಿಂದೆ, ಶೆರಿ ಕಾಶ್ಮೀರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹಿರಿಯ ಪ್ರಯೋಗಾಲಯ ತಂತ್ರಜ್ಞ ಸೈಯದ್ ಶಕೀಲ್ ಅವರನ್ನು ಭಯೋತ್ಪಾದನೆಗೆ ಹಣಕಾಸು ನೆರವು ಆರೋಪದಲ್ಲಿ ಶ್ರೀನಗರದ ರಾಂಬಾಗ್ ಪ್ರದೇಶದ ನಿವಾಸದಿಂದ 2018 ರಲ್ಲಿ ಬಂಧಿಸಲಾಗಿತ್ತು. ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದ ಶಾಹಿದ್ ಯೂಸುಫ್ ಅವರನ್ನು 2017 ರಲ್ಲಿ ಇದೇ ಪ್ರಕರಣದಲ್ಲಿ ಬಂಧಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯಿಂದ ವಜಾಗೊಳಿಸಿರುವ ಇಬ್ಬರು ಕಾನ್‌ಸ್ಟೆಬಲ್‌ಗಳು ಪೊಲೀಸ್ ಇಲಾಖೆಯೊಳಗಿನಿಂದ ಉಗ್ರಗಾಳಿಗೆ ಬೆಂಬಲಿಸುತ್ತಿದ್ದರು ಮತ್ತು ಬೆಂಬಲದ ಜೊತೆಗೆ ಉಗ್ರರಿಗೆ ಮಾಹಿತಿಯನ್ನು ಒದಗಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಅನಂತನಾಗ್, ಬಾರಾಮುಲ್ಲಾ ಜಿಲ್ಲೆಗಳಲ್ಲಿಯೂ ವಿವಿಧೆಡೆ ದಾಳಿ ನಡೆದಿದ್ದು, ವ್ಯಾಪಾರಿಗಳಾದ ಉಮರ್‌ ಭಟ್, ತನ್ವೀರ್ ಭಟ್, ಜಾವೇದ್‌ ಭಟ್‌, ಔಷಧ ವ್ಯಾಪಾರಿ ಜೀಶನ್ ಮಲಿಕ್‌, ವೈದ್ಯಕೀಯ ಪ್ರಯೋಗಾಲಯದ ತಂತ್ರಜ್ಞ ಒವೈಸಿ ಭಟ್ ಎಂಬುವವರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: 2,500 ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡ ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...