Homeಮುಖಪುಟಫಾದರ್ ಸ್ಟಾನ್ ಸ್ವಾಮಿಯವರನ್ನು ಕೊಲ್ಲಲಾಗಿದೆ: ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪ

ಫಾದರ್ ಸ್ಟಾನ್ ಸ್ವಾಮಿಯವರನ್ನು ಕೊಲ್ಲಲಾಗಿದೆ: ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪ

- Advertisement -
- Advertisement -

ಬುಡಕಟ್ಟು ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿಯವರ ಸಾವಿನ ಕುರಿತು ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಶಿವಸೇನೆ ಸಂಸದ ಸಂಜಯ್ ರಾವತ್‌, ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿಯವರನ್ನು ಜೈಲಿನಲ್ಲಿ “ಕೊಲ್ಲಲಾಗಿದೆ” ಎಂದು ಆರೋಪಿಸಿದ್ದಾರೆ.

84 ವರ್ಷದ ವ್ಯಕ್ತಿಯೊಬ್ಬರು ನರೇಂದ್ರ ಮೋದಿ ಸರ್ಕಾರವನ್ನು ಉರುಳಿಸಬಲ್ಲರು ಎಂದರೆ,ದೇಶದ ಅಡಿಪಾಯ ಎಷ್ಟು ದುರ್ಬಲವಾಗಿದೆಯೆ..? ಎಂದು ಸಂಸದ ಪ್ರಶ್ನಿಸಿದ್ದಾರೆ. ಜೊತೆಗೆ ನರೇಂದ್ರ ಮೋದಿ ಸರ್ಕಾರವನ್ನು  ಹಿಟ್ಲರ್ ಮತ್ತು ಮುಸೊಲಿನಿ ಸರ್ಕಾರಗಳೊಂದಿಗೆ ಹೋಲಿಸಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಎಲ್ಗರ್ ಪರಿಷತ್ ಪ್ರಕರಣಕ್ಕೆ (ಭೀಮಾ ಕೋರೆಗಾಂವ್) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಫಾದರ್‌ ಸ್ಟಾನ್ ಸ್ವಾಮಿ ಅವರನ್ನು ಬಂಧಿಸಿತ್ತು. ‍ಜುಲೈ 5 ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ನ್ಯಾಯಾಂಗ ಬಂಧನದಲ್ಲಿಯೇ ಅವರು ನಿಧನರಾದರು. ಅವರ ನಿಧನಕ್ಕೆ ರಾಷ್ಟ್ರೀಯ-ಅಂತರರಾಷ್ಟರೀಯ ಮಟ್ಟದಲ್ಲಿ ಖಂಡನೆ ವ್ಯಕ್ತವಾಗಿದೆ.

ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

“ಇಂದಿರಾ ಗಾಂಧಿ ಜಾರ್ಜ್ ಫರ್ನಾಂಡಿಸ್‌ಗೆ ಹೆದರುತ್ತಿದ್ದರು. ಜಾರ್ಜ್ ಅವರಿಗೆ ಫಾದರ್ ಸ್ಟಾನ್ ಸ್ವಾಮಿಯಂತೆ ವಯಸ್ಸಾಗಿರಲಿಲ್ಲ. ಆದರೆ ಇಂದಿನ ಸರ್ಕಾರವು 84-85 ವರ್ಷ ವಯಸ್ಸಿನ ಫಾದರ್‌ ಸ್ಟಾನ್ ಸ್ವಾಮಿ ಮತ್ತು ವರವರ ರಾವ್ ಅವರಿಗೆ ಹೆದರಿದೆ. ಜೈಲಿನಲ್ಲಿಯೇ ಸ್ಟಾನ್ ಸ್ವಾಮಿ ಕೊಲ್ಲಲ್ಪಟ್ಟರು” ಎಂದು ಸಂಜಯ್ ರಾವತ್  ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಹೇಳಿದ್ದಾರೆ.

ಎಲ್ಗರ್ ಪರಿಷತ್‌ನಲ್ಲಿ ನಡೆದ ಭಾಷಣಗಳು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ಬೆಂಬಲಿಸಲಾಗುವುದಿಲ್ಲ. ಆದರೆ, ಆದಾದ ಬಳಿಕ ನಡೆದದ್ದನ್ನು ಸ್ವಾತಂತ್ರ್ಯವನ್ನು ಭೇದಿಸುವ ಪಿತೂರಿ ಎಂದು ಕರೆಯಬೇಕು ಎಂದು  ಹೇಳಿದ್ದಾರೆ.

“ಕಾಡುಗಳಲ್ಲಿ ಬುಡಕಟ್ಟು ಜನರಿಗೆ ತಮ್ಮ ಹಕ್ಕುಗಳು ಮತ್ತು ಸ್ವಾತಂತ್ರ್ಯದ ಬಗ್ಗೆ ಅರಿವು ಮೂಡಿಸುವುದು ದೇಶದ್ರೋಹವಾಗಬಹುದೇ..?” ಎಂದು ಪ್ರಶ್ನಿಸಿದ್ದಾರೆ.

“ಕಾಶ್ಮೀರಿ ಪ್ರತ್ಯೇಕತಾವಾದಿಗಳಿಗಿಂತ ಮಾವೋವಾದಿಗಳು ಮತ್ತು ನಕ್ಸಲರು ಹೆಚ್ಚು ಅಪಾಯಕಾರಿಯಾಗಿದ್ದರೂ ಜೈಲಿನಲ್ಲಿ 84 ವರ್ಷದ ಅಸಹಾಯಕ ಫಾದರ್ ಸ್ಟಾನ್ ಸ್ವಾಮಿಯವರ ಸಾವನ್ನು ಸಮರ್ಥಿಸಲಾಗುವುದಿಲ್ಲ. ಸರ್ಕಾರವನ್ನು ವಿರೋಧಿಸುವುದು ಮತ್ತು ದೇಶ ವಿರೋಧದ ನಡುವೆ ವ್ಯತ್ಯಾಸವಿದೆ. ಸರ್ಕಾರವನ್ನು ವಿರೋಧಿಸುವುದು ದೇಶದ ವಿರುದ್ಧದ ಪಿತೂರಿ ಎಂದು ಯಾರಾದರೂ ಭಾವಿಸಿದರೆ, ಅವರ ಮನಸ್ಸಿನಲ್ಲಿ ಸರ್ವಾಧಿಕಾರದ ಬೀಜಗಳನ್ನು ಬಿತ್ತಲಾಗುತ್ತಿದೆ ಎಂದು ಪರಿಗಣಿಸಬೇಕು” ಎಂದು ಸಂಜಯ್ ರಾವತ್ ಹೇಳಿದ್ದಾರೆ.

ಕ್ಯಾಥೋಲಿಕ್ ಪಾದ್ರಿಯಾಗಿದ್ದ ಸ್ಟ್ಯಾನ್ ಸ್ವಾಮಿ ಕೇರಳ ಮೂಲದವರಾಗಿದ್ದು 50 ವರ್ಷದಿಂದ ಮಾನವ ಹಕ್ಕು ಮತ್ತು ಬುಡಕಟ್ಟು ಹಕ್ಕುಗಳಿಗಾಗಿ ಹೋರಾಡುತ್ತಿದ್ದರು. ಅವರು ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ NIA ಕಳೆದ ವರ್ಷ ಬಂಧಿಸಿತ್ತು. ಬುಡಕಟ್ಟು ಜನರ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ಸ್ಟ್ಯಾನ್ ಸ್ವಾಮಿಯ ಮೇಲೆ ಭಯೋತ್ಪಾದನೆ ತಡೆ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಕಠಿಣ ವಿಭಾಗಗಳ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗಿತ್ತು.


ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ಶ್ರದ್ಧಾಂಜಲಿ; ವಿಚಾರಣಾಧೀನ ಕೈದಿಯಾಗಿ ಭಾರತರತ್ನವೊಂದರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...