Homeಮುಖಪುಟರಾಜಕೀಯಕ್ಕೆ ಬರುವುದಿಲ್ಲ ಎಂದ ಸೂಪರ್ ಸ್ಟಾರ್ ರಜನಿಕಾಂತ್‌!: ಆರ್‌ಎಂಎಂ ವಿಸರ್ಜನೆ

ರಾಜಕೀಯಕ್ಕೆ ಬರುವುದಿಲ್ಲ ಎಂದ ಸೂಪರ್ ಸ್ಟಾರ್ ರಜನಿಕಾಂತ್‌!: ಆರ್‌ಎಂಎಂ ವಿಸರ್ಜನೆ

- Advertisement -
- Advertisement -

ತಮಿಳುನಾಡಿನಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ತಾವೇ ಹುಟ್ಟು ಹಾಕಿದ್ದ ರಜನಿಕಾಂತ್‌ ಮಕ್ಕಳ್ ಮಂಡ್ರಮ್ ರಾಜಕೀಯ ವೇದಿಕೆಯನ್ನು ವಿಸರ್ಜಿಸಿದ್ದು, ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ರಾಜಕೀಯ ಪ್ರವೇಶದ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.

ನಟ ರಜನಿಕಾಂತ್ ಅವರ ರಾಜಕೀಯ ಪ್ರವೇಶದ ಚರ್ಚೆ ಮೂರು ದಶಕಗಳಿಂದಲೂ ನಡೆಯುತ್ತಲೇ ಇತ್ತು.  2020 ರಲ್ಲಿ ರಜನಿಕಾಂತ್‌ ಮಕ್ಕಳ್ ಮಂಡ್ರಮ್ ಎಂಬ‌ ರಾಜಕೀಯ ವೇದಿಕೆಯನ್ನು ಹುಟ್ಟುಹಾಕಿದ್ದರು. ಆದರೆ, ತಮಿಳುನಾಡು ವಿಧಾನಸಭಾ ಚುನಾವಣೆಗೂ ಕೆಲವೇ ದಿನಗಳ ಮುನ್ನ. ರಾಜಕೀಯ ಪಕ್ಷವನ್ನು ಘೋಷಿಸುವುದಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದರು. ಈಗ ಪಕ್ಷವನ್ನು ವಿಸರ್ಜನೆ ಮಾಡುವ ಮೂಲಕ ಶಾಶ್ವತವಾಗಿ ರಜನಿಕಾಂತ್‌ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ.

ಏಳು ತಿಂಗಳ ಹಿಂದೆ ತಾವು ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ ಎಂದು ಅಧಿಕೃತವಾಗಿ ಹೇಳಿ, ಚುನಾವಣಾ ರಾಜಕೀಯ ಮಾಡದೇ ಜನರ ಸೇವೆ ಮಾಡುತ್ತೇನೆ ಎಂದು ರಜನಿಕಾಂತ್‌ ಹೇಳಿದ್ದರು. “ನನ್ನ ಆರೋಗ್ಯದಲ್ಲಾದ ಏರುಪೇರಿನಿಂದ ಮತ್ತು ಕೊರೊನಾ ಸೋಂಕಿನ ಕಾರಣದಿಂದ ಪಕ್ಷ ಸ್ಥಾಪನೆಯ ವಿಚಾರವನ್ನು ಕೈಬಿಟ್ಟಿದ್ದೇನೆ. ಇದು ನನ್ನ ಮೇಲೆ ಭರವಸೆಯಿಟ್ಟಿದ್ದ ಅಭಿಮಾನಿಗಳಿಗೆ ನಿರಾಸೆಯನ್ನುಂಟುಮಾಡುತ್ತದೆ ಎಂಬುದು ನನಗೆ ತಿಳಿದಿದೆ” ಎಂದಿದ್ದರು.

ಇದನ್ನೂ ಓದಿ: ಪ್ರಶಸ್ತಿ ಮತ್ತು ಪ್ರಭುತ್ವ; ಸೂಪರ್ ಸ್ಟಾರ್ ರಜನಿಕಾಂತ್‌ಗೆ ’ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ

ಈಗ ಅಧಿಕೃತವಾಗಿ ರಜನಿಕಾಂತ್ ಮಕ್ಕಳ್ ಮಂಡ್ರಮ್ ಪಕ್ಷವನ್ನು ವಿಸರ್ಜಿಸಿದ್ದಾರೆ. ಈ ಮೂಲಕ ಮುಂದೆಂದೂ ರಾಜಕೀಯ ಮಾಡಲಾರೆ ಎಂಬ ಸಂದೇಶ ರವಾನಿಸಿದ್ದಾರೆ. ರಾಷ್ಟ್ರೀಯ ಪಕ್ಷಗಳಿಂದ ಗಾವುದ ದೂರ ಇರುವ ಹಾಗೂ ಸಿನಿಮಾ ನಟರನ್ನು ಆರಾಧಿಸುವ ತಮಿಳುನಾಡಿನಲ್ಲಿ ರಜನಿಕಾಂತ್ ಹಾಲಿ ಡಿಎಂಕೆ ಮತ್ತು ಎಐಎಡಿಎಂಕೆಗೆ ಪರ್ಯಾಯವಾಗಿ ರಾಜಕೀಯ ಶಕ್ತಿಯಾಗಿ ಬೆಳೆಯುತ್ತಾರೆ ಎಂದು ಅಂದಾಜು ಮಾಡಲಾಗುತ್ತಿತ್ತು. ಆದರೆ ರಜನಿಕಾಂತ್ ಎಲ್ಲಾ ನಿರೀಕ್ಷೆ, ಲೆಕ್ಕಾಚಾರಗಳನ್ನು ರಜನಿಕಾಂತ್‌ ತಲೆಕೆಳಗೆ ಮಾಡಿದ್ದಾರೆ.

ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ಎಐಎಡಿಎಂಕೆ ಚುನಾವಣೆಯಲ್ಲಿ ಚುನಾವಣೆಯಲ್ಲಿ ಸೋತಿದ್ದು, ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ 10 ವರ್ಷಗಳ ನಂತರ ಅಧಿಕಾರ ವಹಿಸಿಕೊಂಡಿದೆ. ಮತ್ತೊಬ್ಬ  ಸೂಪರ್ ಸ್ಟಾರ್, ರಾಜಕಾರಣಿ, ಕಮಲ್ ಹಾಸನ್, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ, ಒಂದು ಸ್ಥಾನವನ್ನು ಗೆಲ್ಲದೆ ರಾಜಕೀಯದಲ್ಲಿ ಪರಿಣಾಮ ಬೀರಲು ವಿಫಲವಾಗಿದ್ದಾರೆ.


ಇದನ್ನೂ ಓದಿ: ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ: ಉಲ್ಟಾ ಹೊಡೆದ ರಜನಿಕಾಂತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...