Homeಮುಖಪುಟಜುಲೈ 19 ರಿಂದ ಮಾನ್ಸುನ್‌ ಅಧಿವೇಶನ; ಸಂಸತ್‌ ಬಳಿ ಪ್ರತಿಭಟನೆಗೆ ರೈತರು ಸಜ್ಜು!

ಜುಲೈ 19 ರಿಂದ ಮಾನ್ಸುನ್‌ ಅಧಿವೇಶನ; ಸಂಸತ್‌ ಬಳಿ ಪ್ರತಿಭಟನೆಗೆ ರೈತರು ಸಜ್ಜು!

- Advertisement -
- Advertisement -

ಮಾನ್ಸುನ್‌ ಅಧಿವೇಶನ ಜುಲೈ 19 ರಿಂದ ಪ್ರಾರಂಭವಾಗಲಿದ್ದು, ಅಧಿವೇಶನದಲ್ಲಿ ಕೊರೊನಾ ಸಂಬಂಧಿತ ಎಲ್ಲಾ ಪ್ರೋಟೋಕಾಲ್‌ಗಳನ್ನು ಅನುಸರಿಸಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೋಮವಾರ ತಿಳಿಸಿದ್ದಾರೆ.

ಕೊರೊನಾ ವೈರಸ್ ವಿರುದ್ಧ ಲಸಿಕೆ ನೀಡದವರು ಅಧಿವೇಶನದಲ್ಲಿ ಸಂಸತ್ತಿನ ಆವರಣಕ್ಕೆ ಪ್ರವೇಶಿಸುವ ಮೊದಲು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗುವಂತೆ ಕೋರಲಾಗುವುದು ಎಂದು ಅವರು ಹೇಳಿದ್ದಾರೆ.

ಸಂಸತ್ತಿನ ಮಾನ್ಸೂನ್ ಅಧಿವೇಶನ ಜುಲೈ 19 ರಿಂದ ಪ್ರಾರಂಭವಾಗಿ ಆಗಸ್ಟ್ 13 ರಂದು ಮುಕ್ತಾಯಗೊಳ್ಳಲಿದೆ.

ಸಂಸತ್ತಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಓಂ ಬಿರ್ಲಾ, 323 ಸಂಸದರು ಕೊರೊನಾ ವೈರಸ್ ವಿರುದ್ಧದ ಲಸಿಕೆಯನ್ನು ಸಂಪೂರ್ಣವಾಗಿ ಪಡೆದಿದ್ದು, 23 ಮಂದಿ ಕೆಲವು ವೈದ್ಯಕೀಯ ಕಾರಣಗಳಿಂದಾಗಿ ತಮ್ಮ ಲಸಿಕೆಯ ಮೊದಲ ಡೋಸ್‌ ಅನ್ನು ಕೂಡಾ ಪಡೆಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜ.26 ರ ಘಟನೆ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದರೆ, ವಿಶ್ವಸಂಸ್ಥೆ ಬಳಿ ಹೋಗುವುದಿಲ್ಲ-ರಾಕೇಶ್ ಟಿಕಾಯತ್

ಉಭಯ ಸದನಗಳು ಏಕಕಾಲದಲ್ಲಿ ನಡೆಯಲಿದ್ದು, ಬೆಳಿಗ್ಗೆ 11 ರಿಂದ ಅಧಿವೇಶನ ಆರಂಭವಾಗಲಿದೆ ಎಂದು ಓಂ ಬಿರ್ಲಾ ತಿಳಿಸಿದ್ದಾರೆ.

ಈ ಮಧ್ಯೆ, ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಲ್ಲಿ, 200 ಮಂದಿ ರೈತರು ಜುಲೈ 22 ರಿಂದ ಸಂಸತ್ ಭವನದ ಬಳಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ‌ಶನಿವಾರ ಹೇಳಿದ್ದರು.

“ಕೇಂದ್ರ ಸರ್ಕಾರ ವಿವಾದಿತ ಕೃಷಿ ಕಾನೂನುಗಳ ಕುರಿತು ಚರ್ಚೆ ನಡೆಸಲು ಬಯಸಿದರೆ, ನಾವು ಮಾತುಕತೆಗೆ ಸಿದ್ಧರಿದ್ದೇವೆ. ಆದರೆ, ಮಾತುಕತೆ ನಡೆಯದಿದ್ದರೆ, ರೈತರ ಪರವಾಗಿ ನಿರ್ಧಾರ ಬರದಿದ್ದರೆ, ಜುಲೈ 22 ರಿಂದ 200 ಮಂದಿ ರೈತರು ಸಂಸತ್ತಿನ ಬಳಿ ಪ್ರತಿಭಟನೆ ನಡೆಸುತ್ತಾರೆ” ಎಂದು ಟಿಕಾಯತ್ ಹೇಳಿದ್ದರು.

ಇದನ್ನೂ ಓದಿ: ರಾಜಕೀಯಕ್ಕೆ ಬರುವುದಿಲ್ಲ ಎಂದ ಸೂಪರ್ ಸ್ಟಾರ್ ರಜನಿಕಾಂತ್‌!: ಆರ್‌ಎಂಎಂ ವಿಸರ್ಜನೆ

“ಕೃಷಿ ಕಾನೂನುಗಳನ್ನು ಹಿಂಪಡೆಯದ ಸರ್ಕಾರ, ರೈತ ಪ್ರತಿಭಟನೆಯನ್ನು ಕೊನೆಗೊಳಿಸಲು ಹೇಳುತ್ತಿದ್ದಾರೆ. ರೈತರು 8 ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವುದು ಸರ್ಕಾರದ ಆದೇಶಗಳನ್ನು ಪಾಲಿಸಲು ಅಲ್ಲ. ಸರ್ಕಾರ ಮಾತನಾಡಲು ಬಯಸಿದರೆ, ರೈತರ ಜೊತೆಗೆ ಮಾತನಾಡಬಹುದು, ಆದರೆ ಯಾವುದೇ ಷರತ್ತು ವಿಧಿಸಬಾರದು” ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ವರ್ಷ ನವೆಂಬರ್‌ನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಸಂಘಟನೆಗಳ ಮುಖಂಡರು ಮತ್ತು ಸರ್ಕಾರದ ನಡುವೆ ಹತ್ತಕ್ಕೂ ಹೆಚ್ಚು ಸುತ್ತಿನ ಚರ್ಚೆಗಳು ನಡೆದಿವೆ, ಆದರೆ ಇಲ್ಲಿಯವರೆಗೂ ಸರ್ಕಾರದ ಯಾವುದೇ ಷರತ್ತುಗಳಿಗೂ ರೈತರು ಒಪ್ಪಿಲ್ಲ.

ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ, ಸಂಸತ್ತಿನ ಮೂರು ಅಧಿವೇಶನಗಳನ್ನು ಮೊಟಕುಗೊಳಿಸಲಾಗಿದ್ದು, ಕಳೆದ ವರ್ಷ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲಾಯಿತು. ಸಾಮಾನ್ಯವಾಗಿ ಜುಲೈನಲ್ಲಿ ಪ್ರಾರಂಭವಾಗುವ ಮಾನ್ಸೂನ್ ಅಧಿವೇಶನವು ಸಾಂಕ್ರಾಮಿಕದಿಂದಾಗಿ ಕಳೆದ ವರ್ಷ ಸೆಪ್ಟೆಂಬರ್‌‌ನಲ್ಲಿ ಪ್ರಾರಂಭವಾಗಿತ್ತು.

ಇದನ್ನೂ ಓದಿ: ಹಿಂದೂ ಹುಡುಗ ಹಿಂದೂ ಹುಡುಗಿಗೆ ಸುಳ್ಳು ಹೇಳುವುದು ಕೂಡಾ ‘ಜಿಹಾದ್’ – ಅಸ್ಸಾಂ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...