Homeಕರೋನಾ ತಲ್ಲಣಕೊರೊನಾ 3ನೇ ಅಲೆ: ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ಐಎಂಎ ಎಚ್ಚರಿಕೆ

ಕೊರೊನಾ 3ನೇ ಅಲೆ: ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ಐಎಂಎ ಎಚ್ಚರಿಕೆ

- Advertisement -
- Advertisement -

ಕೊರೊನಾ 3ನೇ ಅಲೆ ಸನಿಹದಲ್ಲಿದೆ, ಒಕ್ಕೂಟ ಹಾಗೂ ರಾಜ್ಯ ಸರ್ಕಾರಗಳು ಮುನ್ನೆಚ್ಚರಿಕೆಯನ್ನು ಮರೆಯಬಾರದು. ಕೊರೊನಾ ಎರಡನೇ ಅಲೆ ಕಡಿಮೆಯಾಗಿದೆ ಎನ್ನುವ ಸಂತಸದಲ್ಲಿ ಮೂರನೇ ಅಲೆಯನ್ನು ಆಹ್ವಾನಿಸಬಾರದು ಎಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಎಚ್ಚರಿಕೆ ನೀಡಿದೆ.

ದೇಶದ ವಿವಿಧ ಭಾಗಗಳಲ್ಲಿ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಕೊರೊನಾ ನಿಯಮಗಳನ್ನು ನಿರ್ಲಕ್ಷಿಸುತ್ತಿರುವುದರ ಬಗ್ಗೆ ಐಎಂಎ ಎಚ್ಚರಿಕೆ ನೀಡಿದೆ.

“ವಿಶ್ವದಲ್ಲಿ ಈಗಾಗಲೇ ಕೊರೊನಾ 3ನೇ ಅಲೆ ಬಂದಿರುವ ಪುರಾವೆಗಳು ಮತ್ತು ಸಾಂಕ್ರಾಮಿಕ ರೋಗಗಳ ಇತಿಹಾಸ ಗಮನಿಸಿದರೆ, ಮೂರನೇ ಅಲೆಯನ್ನು ಎದುರಿಸುವುದು ಅನಿವಾರ್ಯವಾಗಿದೆ. ಇಷ್ಟೇ ಅಲ್ಲದೆ ಮೂರನೇ ಅಲೆ ಸನಿಹದಲ್ಲಿದೆ” ಎಂದು ತಿಳಿಸಿದೆ.

“ಆತಂಕದ ಸಂಗತಿಯೆಂದರೆ, ದೇಶದ ಅನೇಕ ಭಾಗಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರು ಎರಡನೇ ಅಲೆಯನ್ನು ಗೆದ್ದ ಸಂತಸದಲ್ಲಿದ್ದಾರೆ. ಸಾಮೂಹಿಕವಾಗಿ ಕೊರೊನಾ ನಿಯಮಾವಳಿಗಳನ್ನು ನಿರ್ಲಕ್ಷಿಸಿ ಸಾರ್ವಜನಿಕ ಕೆಲಸಗಳಲ್ಲಿ, ಸಭೆಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಐಎಂಎ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಸಮಯದಲ್ಲಿ ಮಹಿಳೆಯರ ಸ್ಥಿತಿ; ಬಾಣಲೆಯಿಂದ ಬೆಂಕಿಗೆ…

“ಪ್ರವಾಸೋದ್ಯಮ, ತೀರ್ಥಯಾತ್ರೆ ಪ್ರಯಾಣ, ಧಾರ್ಮಿಕ ಉತ್ಸವಗಳು ಎಲ್ಲವೂ ಬೇಕಾಗುತ್ತದೆ. ಆದರೆ ಇನ್ನೂ ಕೆಲವು ದಿನ ಇವುಗಳಿಂದ ದೂರ ಇರುವುದು ಒಳ್ಳೆಯದು. ಇವುಗಳಿಗೆ ಅವಕಾಶ ನೀಡುವುದು, ಲಸಿಕೆ ಪಡೆಯದೆ ಜನರು ಈ ಸಾಮೂಹಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಕೋವಿಡ್ 3ನೇ ಅಲೆಗೆ ಆಹ್ವಾನ ನೀಡಿದಂತೆ.  ಇವುಗಳು ಕೊರೊನಾ ಸೂಪರ್ ಸ್ಪ್ರೆಡರ್‌ಗಳಾಗುತ್ತವೆ” ಎಂದು ವೈದ್ಯಕೀಯ ಸಂಘ ತಿಳಿಸಿದೆ.

ಕೋವಿಡ್ ಸೋಂಕಿತ ರೋಗಿಯ ಚಿಕಿತ್ಸೆಗೆ ಖರ್ಚು ಮಾಡುವ ಹಣದಿಂದ ಉಂಟಾಗುವ ಆರ್ಥಿಕ ಪರಿಸ್ಥಿತಿಗಿಂತ ಇಂತಹ ಸಾಮೂಹಿಕ ಕಾರ್ಯಕ್ರಮಗಳನ್ನು ತಪ್ಪಿಸುವುದರಿಂದ ಉಂಟಾಗುವ ಆರ್ಥಿಕ ನಷ್ಟ ಉತ್ತಮವಾಗಿರುತ್ತದೆ ಎಂದು ಹೇಳಿದೆ.

ಸಾರ್ವತ್ರಿಕ  ಲಸಿಕಾ ಅಭಿಯಾನವನ್ನು ನಡೆಸಿ, ಎಲ್ಲರಿಗೂ ಲಸಿಕೆ ತಲುಪಿದೆ ಎನ್ನುವುದನ್ನು ಖಾತ್ರಿ ಪಡಿಸಿಕೊಳ್ಳುವುದು ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ 3ನೇ ಅಲೆಯ ಪ್ರಭಾವವನ್ನು ತಗ್ಗಿಸಬಹುದು. ಈ ಹಂತದಲ್ಲಿ ಇನ್ನು ಮೂರು-ನಾಲ್ಕು ತಿಂಗಳು ನಾವು ಯಾವುದೇ ರಿಸ್ಕ್ ತೆಗೆದುಕೊಳ್ಳಬಾರದು ಎಂದು ಐಎಂಎ ಎಚ್ಚರಿಸಿದೆ.


ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘನೆ: ಒಂದು ವಾರದಲ್ಲೆ 1.77 ಲಕ್ಷ ದಂಡ ವಸೂಲಿ ಮಾಡಿದ ‘ನಮ್ಮ ಮೆಟ್ರೋ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Please give an explanation why, how and what base this 3rd way spreads. Just forecasting without proper explanation is most suspicious. Then only it is to believe people.

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...