Homeಮುಖಪುಟದ್ವೇಷ ಭಾಷಣ ಆರೋಪ: ಜಾಮಿಯಾ ಶೂಟರ್ ಬಂಧನ

ದ್ವೇಷ ಭಾಷಣ ಆರೋಪ: ಜಾಮಿಯಾ ಶೂಟರ್ ಬಂಧನ

- Advertisement -
- Advertisement -

ಕಳೆದ ವರ್ಷ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಸಿಎಎ ವಿರುದ್ಧ ಪ್ರತಿಭಟಿಸುತ್ತಿದ್ದ ಜನರ ಮೇಲೆ ಗುಂಡು ಹಾರಿಸಿದ್ದ ಯುವಕನನ್ನು ಕಳೆದ ವಾರ ಪಟೌಡಿಯಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಗುರುಗಾಂವ್ ಪೊಲೀಸರು ಬಂಧಿಸಿದ್ದಾರೆ.

ಬಿಸಲಪುರದ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪಟೌಡಿ ಪೊಲೀಸ್ ಠಾಣೆಯಲ್ಲಿ ರಾಮ ಭಕ್ತ ಗೋಪಾಲ್ ವಿರುದ್ಧ ಸೆಕ್ಷನ್ 153ಎ ಹಾಗೂ 295ಎ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದು ಆತ ಎದುರಿಸುತ್ತಿರುವ ಎರಡನೇ ಕಸ್ಟಡಿ ವಿಚಾರಣೆಯಾಗಿದೆ. ಕಳೆದ ವರ್ಷ ಗುಂಡು ಹಾರಿಸಿದ ಆರೋಪದಲ್ಲಿ ಆತನನ್ನು ಬಂಧಿಸಿದಾಗ ಆತನಿನ್ನು 18 ವರ್ಷ ತುಂಬಿರದ ಬಾಲಕನಾಗಿದ್ದ. ಆದರೆ ಈಗ 19 ವರ್ಷದ ಆತನನ್ನು ಗೌತಮ್ ಬುದ್ದ ನಗರದಿಂದ ಗುರುಗಾಂವ್ ಪೊಲೀಸರು ಬಂಧಿಸಿದ್ದಾರೆ.

ಜುಲೈ 04 ರಂದು ಪಟೌಡಿಯಲ್ಲಿ ಲವ್ ಜಿಹಾದ್ ಸೇರಿದಂತೆ ಇತರ ವಿಷಯಗಳ ಕುರಿತು ಮಹಾಪಂಚಾಯತ್ ಏರ್ಪಡಿಸಲಾಗಿತ್ತು. ಅಲ್ಲಿ ಈತ ಭಾಗವಹಿಸಿ “ನಮ್ಮ ಸಹೋದರಿಯರನ್ನು ಅವರು ಅಪಹರಿಸುತ್ತಿರುವಾಗ, ನಾವೇಕೆ ಅವರ ಸಹೋದರಿಯರನ್ನು ಅಪಹರಿಸಬಾರದು? ಭಯೋತ್ಪಾದನ ಮನಸ್ಥಿತಿಯ ಜನರಿಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಸಿಎಎ ಬೆಂಬಲಿಸಿ ಜಾಮಿಯಾಗೆ ಹೋಗಿದ್ದ ನನಗೆ ಪಟೌಡಿ ಬಹುದೂರವಿಲ್ಲ” ಎಂದು ಭಾಷಣ ಮಾಡಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಈ ಮಹಾಪಂಚಾಯತ್ ಅನ್ನು ಹಿಂದೂ ಧರ್ಮ ರಕ್ಷಾ ಮಂಚ್ ಆಯೋಜಿಸಿತ್ತು. ವಿಶ್ವ ಹಿಂದೂ ಪರಿಷತ್, ಕರ್ಣಿಸೇನಾ ಮತ್ತು ಬಿಜೆಪಿಯ ಮುಖಂಡರು ಈ ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೂ ಮುಂಚೆ ಹಂಚಲಾದ ಕರಪತ್ರದಲ್ಲಿ ಇದು ಲವ್‌ ಜಿಹಾದ್, ಮಾರ್ಕೆಟ್ ಜಿಹಾದ್, ಲ್ಯಾಂಡ್ ಜಿಹಾದ್ ಮತ್ತು ಮತಾಂತರ ಜಿಹಾದ್ ವಿರುದ್ಧ ಎಂದು ಬರೆಯಲಾಗಿತ್ತು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

2020ರ ಜನವರಿ 30 ರಂದು ದೆಹಲಿಯ ಜಾಮಿಯಾ ಬಳಿ ಸಿಎಎ ವಿರೋಧಿ ಹೋರಾಟಗಾರರ ಮೇಲೆ ಕಪ್ಪು ಜಾಕೆಟ್ ಮತ್ತು ಬಿಳಿ ಪ್ಯಾಂಟ್ ಧರಿಸಿದ್ದ ಈತ “ಯೆ ಲೋ ಆಜಾದಿ (ತೆಗೆದುಕೊಳ್ಳಿ ನಿಮ್ಮ ಸ್ವಾತಂತ್ರ್ಯ) ಎಂದು ಕೂಗಿ ಗುಂಡು ಹಾರಿಸಿದ್ದ. ಈ ಕಾರಣಕ್ಕಾಗಿ ಆತನನ್ನು ಕೊಲೆ ಮತ್ತು ಅಕ್ರಮ ಶಶಸ್ತ್ರ ಕಾಯ್ದೆಯಡಿ ಬಂಧಿಸಲಾಗಿತ್ತು. ಆನಂತರ ಆತ ಮೈಂಡ್‌ ವಾಷ್‌ಗೊಳಗಾಗಿದ್ದ ಮತ್ತು ಪಶ್ಚಾತ್ತಾಪ ಪಟ್ಟಿದ್ದಾನೆ ಎಂದು ಆತನ ಕುಟುಂಬ ಹೇಳಿದಾಗ ಜಾಮೀನು ದೊರೆತಿತ್ತು.


ಇದನ್ನೂ ಓದಿ: ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...