Homeಮುಖಪುಟಮೆಹುಲ್ ಚೋಕ್ಸಿಗೆ ಡೊಮಿನಿಕನ್‌ ಕೋರ್ಟ್ ಜಾಮೀನು: ಭಾರತಕ್ಕೆ ಹಿನ್ನಡೆ

ಮೆಹುಲ್ ಚೋಕ್ಸಿಗೆ ಡೊಮಿನಿಕನ್‌ ಕೋರ್ಟ್ ಜಾಮೀನು: ಭಾರತಕ್ಕೆ ಹಿನ್ನಡೆ

- Advertisement -
- Advertisement -

ಭಾರತದಲ್ಲಿ ಬಹುಕೋಟಿ ಬ್ಯಾಂಕಿಂಗ್ ಹಗರಣದಲ್ಲಿ ಭಾಗಿಯಾಗಿ ಆಂಟಿಗುವಾ ದೇಶಕ್ಕೆ ಪರಾರಿಯಾಗಿದ್ದ ಮೆಹುಲ್‌ ಚೋಕ್ಸಿಯವರಿಗೆ ಸೋಮವಾರ ಡೊಮಿನಿಕನ್ ನ್ಯಾಯಾಲಯ ಜಾಮೀನು ನೀಡಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ ವಂಚನೆ ಎಸಗಿ ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಗೆ ಸೋಮವಾರ ವೈದ್ಯಕೀಯ ಜಾಮೀನು ಮಂಜೂರು ಮಾಡಿದ್ದು ಚಿಕಿತ್ಸೆ ಕಾರಣಕ್ಕೆ ಆಂಟಿಗುವಾಗೆ ತೆರಳಲು ನ್ಯಾಯಾಲಯ ಅವಕಾಶ ನೀಡಿದೆ.

ಮೆಹುಲ್‌ ಚೋಕ್ಸಿ ಜಾಮೀನು ಪ್ರಕರಣದ ಬೆಳವಣಿಯಗೆಯನ್ನು ಖಚಿತಪಡಿಸಿರುವ ವಕೀಲ ವಿಜಯ್ ಅಗರ್ವಾಲ್, “ಡೊಮಿನಿಕಾ ನ್ಯಾಯಾಲಯಗಳು ಅಂತಿಮವಾಗಿ ಕಾನೂನು ಮತ್ತು ಆರೋಗ್ಯದ ಚಿಕಿತ್ಸೆಯ ಅಗತ್ಯತೆಗಳನ್ನು ಎತ್ತಿಹಿಡಿದಿವೆ” ಎಂದು ಹೇಳಿದ್ದಾರೆ.

ಆಂಟಿಗುವದ ಮಾಧ್ಯಮಗಳ ವರದಿ ಪ್ರಕಾರ, ಚೋಕ್ಸಿಯ ಜಾಮೀನು ಅರ್ಜಿಯ ವಿಚಾರಣೆ ಜುಲೈ 23 ರಂದು ನಡೆಯಬೇಕಿತ್ತು. ಆದರೆ ಜುಲೈ 12 ರಂದು ವೈದ್ಯಕೀಯ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು. ಚೋಕ್ಸಿ  ನರ ವಿಜ್ಞಾನ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ, ಅವರಿಗೆ ಆಂಟಿಗುವಾದಲ್ಲಿ ನರವಿಜ್ಞಾನ ತಜ್ಞರಿಂದ ಚಿಕಿತ್ಸೆ ಅಗತ್ಯವಿದೆ ಎಂದು ಅವರ ವಕೀಲರು ನ್ಯಾಯಾಲಯವನ್ನು ಕೋರಿದ್ದರು. ಸೋಮವಾರ ಚೋಕ್ಸಿ ಜಾಮೀನು ನೀಡಿದ ಡೊಮಿನಿಕಾದ ಈಸ್ಟರ್ನ್ ಕೆರಿಬಿಯನ್ ಹೈಕೋರ್ಟ್ 10,000  ಕೆರಿಬಿಯನ್ ಡಾಲರ್ ಬಾಂಡ್ ನೀಡುವಂತೆ ಆದೇಶಿಸಿದೆ ಮತ್ತು ಚಿಕಿತ್ಸೆಯ ನಂತರ ಡೊಮಿನಿಕಾಗೆ ಮರಳಲು ಹೇಳಿದೆ.  

2018ರಲ್ಲಿ ಚೋಕ್ಸಿ ಭಾರತ ತೊರೆದು ಆಂಟಿಗುವಾಗೆ ಪರಾರಿಯಾಗಿದ್ದರು. ಆಂಟಿಗುವ ದೇಶದಿಂದ ಚೋಕ್ಸಿ ಕಳೆದ ಮೇ ತಿಂಗಳಿನಲ್ಲಿ ನಿಗೂಢವಾಗಿ ಡೊಮಿನಿಕಾ ದೇಶದಲ್ಲಿ ಪತ್ತೆಯಾಗಿದ್ದರು. ಚೋಕ್ಸಿ ಅಪಹರಣವಾಗಿದೆ. ಬಾರ್ಬಾರಾ ಎಂಬ ಮಹೀಳೆ ಭಾರತದ ತನಿಖಾ ಸಂಸ್ಥೆಗಳ ಸಹಾಯದಿಂದ ಚೋಕ್ಸಿ ಅವರನ್ನು ಡೊಮಿನಿಕನ್‌ ರಿಪಬ್ಲಿಕ್‌ಗೆ ಅಪಹರಿಸಿ ಕರೆತಂದಿದ್ದಾರೆ ಎಂಬ ಸುದ್ದಿ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ಭಾರತ ಮತ್ತು ಡೊಮಿನಿಕಾ ದೇಶದ ಸಂಬಂಧ ಉತ್ತಮವಾಗಿರುವುದರಿಂದ ಮೆಹುಲ್‌ ಚೋಕ್ಸಿ ಬಂಧಿಸಿ ಭಾರತಕ್ಕೆ ಕರೆತರುವ ಪ್ರಯತ್ನಕ್ಕೆ ದೇಶದ ತನಿಖಾ ಏಜನ್ಸಿಗಳು ಮುಂದಾಗಿದ್ದವು. ಇದಕ್ಕೆ ಪೂರಕವಾಗಿ ಈಚೆಗಷ್ಟೆ ಉದ್ಯಮಿ ಮೆಹುಲ್ ಚೋಕ್ಸಿ ಅಕ್ರಮ ವಲಸಿಗ ಎಂದು ಡೊಮಿನಿಕಾ ಘೋಷಿಸಿತ್ತು.

ಡೊಮಿನಿಕನ್ ಸರ್ಕಾರ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವ ಭಯದಿಂದ ಚೋಕ್ಸಿ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಕಾನೂನು ಹೋರಾಟದಲ್ಲಿ ಅವರಿಗೆ ಜಾಮೀನು ದೊರೆತಿದೆ.

ಇಂದರಿಂದ ಚೋಕ್ಸಿ ಬಂಧಿಸಿ ದೇಶಕ್ಕೆ ಕರೆತರುವ ತನಿಖಾ ಸಂಸ್ಥೆಗಳ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು ಭಾರತ ಸರ್ಕಾರ ಮುಂದೆ ಯಾವ ಕ್ರಮ ಕೈಗೊಳ್ಳಲ್ಲಿದೆ ಎಂಬುದನ್ನು ಇನ್ನೂ ಸ್ಪಷ್ಟ ಪಡಿಸಿಲ್ಲ.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ ಹಗರಣಕ್ಕೆ ಸಂಬಂಧಿಸಿದಂತೆ ಜೂನ್ 10 ರಂದು ಕೇಂದ್ರೀಯ ತನಿಖಾ ದಳ ಮೆಹುಲ್ ಚೋಕ್ಸಿ ಮತ್ತು ಇತರೆ 21 ಜನರ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿದೆ. ಭಾರತದಿಂದ ಪರಾರಿಯಾಗಿರುವ ಮೆಹುಲ್ ಚೋಕ್ಸಿ, ಸಾಕ್ಷ್ಯ ನಾಶಪಡಿಸಿರುವ ಆರೋಪವನ್ನು ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

2017ರಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಗಳ ಸಹಾಯದಿಂದ ಚೋಕ್ಸಿ ಎಲ್‌ಒಯು, 58 ಎಫ್‌ಎಲ್‌ಸಿಗಳನ್ನು ಮೋಸದಿಂದ ಪಡೆದು, ಬ್ಯಾಂಕಿಗೆ 13,500 ಕೋಟಿ ರೂ ವಂಚನೆ ಎಸಗಿದ ನಂತರ ಅದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದಾಗಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಚೋಕ್ಸಿ ವಿರುದ್ಧ ಸಾಕ್ಷ್ಯನಾಶ, ವಂಚನೆ, ಪಿತೂರಿ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಭಾರತದಲ್ಲಿ ಗಂಭೀರ ಪ್ರಕರಣಗಳು ದಾಖಲಾಗಿವೆ.

ಭಾರತದ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,500 ಕೋಟಿ ರೂಪಾಯಿ ವಂಚನೆ ಆರೋಪ ಎದುರಿಸುತ್ತಿರುವ ಮೆಹುಲ್ ಚೋಕ್ಸಿ ಹಾಗೂ ಆತನ ಸೋದರಳಿಯ ನೀರವ್ ಮೋದಿ 2018ರ ಜನವರಿ ಮೊದಲ ವಾರದಲ್ಲಿ ದೇಶ ಬಿಟ್ಟು ಪರಾರಿಯಾಗಿದ್ದರು.

ಇದನ್ನೂ ಓದಿ:  ಡೊಮಿನಿಕಾದಿಂದ ಬರಿಗೈನಲ್ಲಿ ವಾಪಸ್; ಮೆಹುಲ್‌ ಚೋಕ್ಸಿ ಬಂಧಿಸಿ ಕರೆತರುವ ಭಾರತದ ಪ್ರಯತ್ನಕ್ಕೆ ನಿರಾಸೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...