Homeಮುಖಪುಟವಿದ್ಯುತ್ ದೀಪ ಅಳವಡಿಸಲು ಕೋರಿದ ಗ್ರಾಮಸ್ಥ: ಬಿಜೆಪಿಗೆ ಮತ ನೀಡಿದ್ದೆ ಎಂದು ಪ್ರಮಾಣ ಮಾಡಲು ಹೇಳಿದ...

ವಿದ್ಯುತ್ ದೀಪ ಅಳವಡಿಸಲು ಕೋರಿದ ಗ್ರಾಮಸ್ಥ: ಬಿಜೆಪಿಗೆ ಮತ ನೀಡಿದ್ದೆ ಎಂದು ಪ್ರಮಾಣ ಮಾಡಲು ಹೇಳಿದ ಶಾಸಕ!

- Advertisement -
- Advertisement -

ತಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಕೇಳಿದ ಹಳ್ಳಿಯ ಗ್ರಾಮಸ್ಥರೊಬ್ಬರಿಗೆ, ಬಿಜೆಪಿ ಪಕ್ಷಕ್ಕೆ ಮತ ನೀಡಿದ್ದಾಗಿ ಪ್ರಮಾಣ ಮಾಡುವಂತೆ ಬಿಜೆಪಿ ಶಾಸಕರೊಬ್ಬರು ಕೇಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಉತ್ತರ ಪ್ರದೇಶದ ಶಹಜಹಾನ್‌ಪುರದ ಕತ್ರಾ ಅಸೆಂಬ್ಲಿ ಕ್ಷೇತ್ರದ ಬಿಜೆಪಿ ಶಾಸಕ ವೀರ್ ವಿಕ್ರಮ್ ಸಿಂಗ್ (ಪ್ರಿನ್ಸ್), ಹಳ್ಳಿಯೊಂದರಲ್ಲಿ ಮರ ನೆಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ತಾವು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡುತ್ತಿದ್ದ ಸಮಯದಲ್ಲಿ ಅಲ್ಲಿದ್ದ ಗ್ರಾಮಸ್ಥರೊಬ್ಬರು ತಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ಕೋರಿದ್ದಾರೆ. ಆಗ, ಶಾಸಕ ವೀರ್ ವಿಕ್ರಮ್ ಸಿಂಗ್, ನೀವು ಬಿಜೆಪಿ ಪಕ್ಷಕ್ಕೆ ಮತ ಹಾಕಿದ್ದೆ ಎಂದು ಪ್ರಮಾಣ ಮಾಡಿ ಎಂದು ಕೇಳಿದ್ದಾರೆ. ಸೋಮವಾರ ಈ ವಿಡಿಯೊ ವೈರಲ್ ಆಗಿದೆ.

“ಗಂಗಾ ನದಿಯ ಕಡೆಗೆ ಮುಖ ಮಾಡಿ ಅಥವಾ ನಿಮ್ಮ ಮಗನ ಮೂಲಕ ಪ್ರಮಾಣ ಮಾಡಿ, ನೀವು ಬಿಜೆಪಿಗೆ ಮತ ಹಾಕಿದ್ದೀರಿ ಎಂದು ಹೇಳಿ. ಆಗ, ನಾನು ನಿಮ್ಮ ಮನೆಯಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸುತ್ತೇನೆ. ನೀವು ಏನನ್ನಾದರೂ ಕೊಟ್ಟ ವ್ಯಕ್ತಿಯಿಂದ ಮಾತ್ರ ಏನನ್ನಾದರೂ ನಿರೀಕ್ಷಿಸಲು ಸಾಧ್ಯ” ಎಂದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಭಾರಿ ಮಳೆ, ಸಿಡಿಲಿಗೆ ಮಕ್ಕಳು , ಮಹಿಳೆಯರು ಸೇರಿ 40 ಮಂದಿ ಬಲಿ

ತಾನು ಕೇವಲ ಮನವಿ ಮಾಡುತ್ತಿದ್ದೇನೆ ಎಂದು ಗ್ರಾಮಸ್ಥ ಹೇಳುತ್ತಿದ್ದಂತೆ, ಬಿಜೆಪಿ ಶಾಸಕ, “ನೀವು ಮತ ನೀಡಿರುವ ವ್ಯಕ್ತಿಗೆ ಮನವಿ ಮಾಡಿ. ನೀವು ನನಗೆ ನಿಮ್ಮ ಮತ ನೀಡಿದ್ದರೆ, ನನ್ನನ್ನು ಪ್ರಶ್ನಿಸುವ ಹಕ್ಕು ನಿಮಗೆ ಇರುತ್ತದೆ. ನನ್ನನ್ನು ಯಾಮಾರಿಸಲು ಪ್ರಯತ್ನಿಸಬೇಡಿ. ನನ್ನ ತಂದೆ ನಾಲ್ಕು ಬಾರಿ ಶಾಸಕರಾಗಿದ್ದಾರೆ. ನಾನು ಕೂಡ ಒಬ್ಬ ಶಾಸಕ” ಎಂದು ಹೇಳಿದ್ದಾರೆ.

“ಪ್ರತಿ ಬೂತ್‌ನಲ್ಲಿ ನಾನು ಎಷ್ಟು ಮತಗಳನ್ನು ಪಡೆದಿದ್ದೇನೆ ಎಂಬುದು ನನಗೆ ತಿಳಿದಿಲ್ಲ ಎಂದು ನೀವು ಅಂದುಕೊಂಡಿದ್ದೀರಾ…?, ನೀವು ನನಗೆ ಮತ ಹಾಕಿದ್ದರೇ, ನಾನು ನಿಮ್ಮ ಮನೆಗೆ ದೀಪಗಳನ್ನು ಅಳವಡಿಸದಿದ್ದರೇ ನೀವು ದೂರು ನೀಡಬಹುದಿತ್ತು” ಎಂದು ಶಾಸಕರು ವೀಡಿಯೊದಲ್ಲಿ ಹೇಳಿದ್ದಾರೆ.

ಬಿಜೆಪಿ ಶಾಸಕ ವೀರ್ ವಿಕ್ರಮ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಎಸ್‌ಪಿ ಶಾಸಕ ರಾಜೇಶ್ ಯಾದವ್, “ಚುನಾವಣೆಯಲ್ಲಿ ಜಯಗಳಿಸಿದ ನಂತರ ಒಬ್ಬ ಶಾಸಕರು ಎಲ್ಲರ ಪ್ರತಿನಿಧಿಯಾಗಿರುತ್ತಾರೆ. ಅವರಿಗೆ ಯಾರು ಮತ ಹಾಕಿದ್ದಾರೆ, ಯಾರು ಮತ ಚಲಾಯಿಸಲಿಲ್ಲ ಎಂಬುದು ಲೆಕ್ಕಕ್ಕೆ ಬರುವುದಿಲ್ಲ. ಮತ ರಾಜಕಾರಣದಲ್ಲಿ ಪಾಲ್ಗೊಳ್ಳುವುದು ಮತ್ತು ಜನರು ಪ್ರಮಾಣ ಮಾಡಬೇಕೆಂದು ಕೇಳಿಕೊಳ್ಳುವುದು ಶಾಸಕರಾದವರಿಗೆ ಸರಿಹೊಂದುವುದಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...