Homeಕರ್ನಾಟಕಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಹುಸಿಯಾದ ತೇಜಸ್ವಿ ಸೂರ್ಯ ಭರವಸೆ: ‘ನನ್ನನ್ನು ಕೇಳಿ ಬ್ಯಾಂಕಲ್ಲಿ ಹಣ ಇಟ್ಟಿದ್ದೀರಾ?’ ಎಂದ ನಿರ್ಮಲಾ ಸೀತಾರಾಮನ್!

ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಯಾವುದೇ ಠೇವಣಿದಾರರು ಭಯಭೀತರಾಗದಿರಿ. ನಿಮ್ಮ ಹಿತಾಸಕ್ತಿಗಳನ್ನು ಸರ್ಕಾರ ರಕ್ಷಿಸುತ್ತದೆ ಎಂದು ಸಂಸದ ತೇಜಸ್ವಿ ಸೂರ್ಯ ಭರವಸೆ ನೀಡಿದ್ದರು.

- Advertisement -
- Advertisement -

ಬೆಂಗಳೂರಿನ ಗುರುರಾಘವೇಂದ್ರ ಕೋ-ಆಪರೇಟಿವ್‌ ಬ್ಯಾಂಕಿನ ವಂಚನೆ ಪ್ರಕರಣದ ದೂರು ದಾಖಲಾಗಿ ಎರಡು ವರ್ಷಗಳಾದರೂ, ಗ್ರಾಹಕರಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಎಂದು ದೂರಲಾಗಿದೆ. ಜುಲೈ 2 ರ ಶುಕ್ರವಾರದಂದು ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಬ್ಯಾಂಕ್‌‌ನ ಠೇವಣಿದಾರರು ಭೇಟಿ ಮಾಡಿದ್ದರು. ಈ ವೇಳೆ ನ್ಯಾಯ ಕೊಡಿಸುವಂತೆ ಅವರಲ್ಲಿ ಕೇಳಿಕೊಂಡಾಗ ‘‘ನನ್ನನ್ನು ಕೇಳಿ ಹಣ ಇಟ್ಟಿದ್ದೀರಾ” ಎಂದು ಉಡಾಫೆಯಿಂದ ಮಾತನಾಡಿದರು ಎಂದು ಠೇವಣಿದಾರ ಹರೀಶ್ ಸೋಮವಾರ ಆರೋಪಿಸಿದ್ದಾರೆ.

ಕೆಪಿಸಿಸಿ ವೈದ್ಯಕೀಯ ಘಟಕದ ಕಾರ್ಯದರ್ಶಿ ಡಾ. ಶಂಕರ್‌ ಗುಹಾ ಅವರು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಠೇವಣಿದಾರ ಹರೀಶ್‌, “ಸಚಿವೆ ಸೀತಾರಾಮ್‌ ಅವರು ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಗುರು ರಾಘವೇ೦ದ್ರ ಸಹಕಾರಿ ಬ್ಯಾಂಕ್‌ ಠೇವಣಿದಾರರು ತಾವು ಹೂಡಿಕೆ ಮಾಡಿದ ಹಣ ಕಳೆದುಕೊಂಡಿರುವ ಬಗ್ಗೆ ಹೇಳಲಾಯಿತು. ಅದಕ್ಕೆ ಅವರು, ನನ್ನನ್ನು ಕೇಳಿ ರಾಘವೇಂದ್ರ ಬ್ಯಾಂಕ್‌ನಲ್ಲಿ ಹಣ ಹೂಡಿಕೆ ಮಾಡಿದ್ದೀರಾ” ಎಂದು ಪ್ರಶ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಿಲಯನ್ಸ್‌ ಫೈನಾನ್ಸ್‌ಗಳಿಂದ ಬ್ಯಾಂಕಿಂಗ್ ಫ್ರಾಡ್- ಕರ್ನಾಟಕ ಬ್ಯಾಂಕ್‌ಗೆ ವಂಚನೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ. ಶಂಕರ್‌ ಗುಹಾ, ‘‘ಈ ಹಗರಣದ ಬಗ್ಗೆ ಪ್ರಕರಣ ದಾಖಲಾಗಿ ಎರಡು ವರ್ಷಗಳು ಕಳೆದಿವೆ. ಆದರೂ ಠೇವಣಿದಾರರಿಗೆ ನ್ಯಾಯ ಸಿಕ್ಕಿಲ್ಲ. ಹಣ ಕಳೆದುಕೊಂಡ ಕೊರಗಿನಲ್ಲೇ 70 ಜನ ವಿವಿಧ ಕಾಯಿಲೆಗಳಿಗೆ ತುತ್ತಾಗಿ ಮೃತಪಟ್ಟಿದ್ದಾರೆ. ಪ್ರಕರಣದ ತನಿಖೆಯ ಹೊಣೆಯನ್ನು ಸಿಐಡಿಗೆ ವಹಿಸಲಾಗಿದೆಯಾದರೂ, ಏನೂ ಪ್ರಯೋಜನ ಆಗಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐಗೆ ವಹಿಸಬೇಕು’’ ಎಂದು ಆಗ್ರಹಿಸಿದ್ದಾರೆ.

“ಬ್ಯಾಂಕಿಗೆ ಸತತವಾಗಿ ‘ಎ’ ದರ್ಜೆಯ ಪ್ರಮಾಣ ಪತ್ರ ನೀಡಲಾಗಿದೆ. ಇಂತಹ ವಂಚಕ ಬ್ಯಾಂಕ್‌ಗೆ ಆರ್‌ಬಿಐ ಈ ಪ್ರಮಾಣಪತ್ರ ನೀಡಿದ್ದಾದರೂ ಹೇಗೆ? ವಿವಿಧ ಕಡೆ ಶಾಖಾ ಕಚೇರಿಗಳನ್ನು ತೆರೆಯಲು ಅನುಮತಿ ನೀಡಿರುವುದರ ಹಿಂದಿನ ಉದ್ದೇಶವೇನು? ಈ ಬಗ್ಗೆ ಸಂಸದರನ್ನು ಪ್ರಶ್ನಿಸಿದರೆ ಹಾರಿಕೆಯ ಉತ್ತರ ನೀಡುತ್ತಾರೆ. ಸಂಸದರು ಹಾಗೂ ಶಾಸಕರಿಂದ ಸಮಸ್ಯೆಗೆ ಪರಿಹಾರ ಸಿಗುವುದು ಕಷ್ಟ. ಮುಖ್ಯಮಂತ್ರಿ ಮಧ್ಯ ಪ್ರವೇಶಿಸಬೇಕು. ಇದೇ 14 ರಂದು ಆಡಿಟ್‌ ವರದಿ ನೀಡುವುದಾಗಿ ಹೇಳಿದ್ದಾರೆ. ಕೊಡದಿದ್ದರೆ ‘ಆರ್‌ಬಿಐ ಚಲೋ’ ಅಭಿಯಾನ ಹಮ್ಮಿಕೊಳ್ಳುತ್ತೇವೆ” ಎಂದು ಶಂಕರ್‌‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಎಸ್‌ಬಿಐ ಬ್ಯಾಂಕ್‌ನಿಂದ ಗ್ರಾಹಕರಿಗೆ ಎಟಿಎಂ ವಿತ್‌ ಡ್ರಾ ಸೇರಿ ಹಲವು ಶುಲ್ಕಗಳು!

ಪ್ರಕರಣ ಸಂಬಂಧ ಕಳೆದ ವರ್ಷದ ಜನವರಿಯಲ್ಲಿ ಟ್ವೀಟ್ ಮಾಡಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, “ಗುರು ರಾಘವೇಂದ್ರ ಸಹಕಾರಿ ಬ್ಯಾಂಕಿನ ಯಾವುದೇ ಠೇವಣಿದಾರರು ಭಯಭೀತರಾಗದಿರಿ. ಅವರಿಗೆ ನಾನು ಭರವಸೆ ನೀಡುತ್ತೇನೆ. ಗೌರವಾನ್ವಿತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಕರಣದ ಬಗ್ಗೆ ಮೌಲ್ಯಮಾಪನ ಮಾಡುತ್ತಾರೆ, ಜೊತೆಗೆ ವೈಯಕ್ತಿಕವಾಗಿ ಸಮಸ್ಯೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಠೇವಣಿದಾರರ ಹಿತಾಸಕ್ತಿಗಳನ್ನು ಸರ್ಕಾರ ರಕ್ಷಿಸುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ. ಅವರ ಕಾಳಜಿಗೆ ಕೃತಜ್ಞತೆಗಳು” ಎಂದು ಹೇಳಿದ್ದರು.

ಇದಾಗಿ ಒಂದೂವರೆ ವರ್ಷ ಕಳೆದರೂ ಪ್ರಕರಣವು ಯಾವುದೇ ತಾರ್ಕಿಕ ಅಂತ್ಯಕ್ಕೆ ತಲುಪಿಲ್ಲ. ಜುಲೈ 2 ರ ಶುಕ್ರವಾರದಂದು ಠೇವಣಿದಾರರನ್ನು ಭೇಟಿಯಾದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ನಿರ್ಮಲಾ ಸೀತಾರಾಮನ್‌, ಆರ್‌ಬಿಐ ನೇಮಿಸಿರುವ ಆಡಳಿತಾಧಿಕಾರಿ ವರದಿ ಸಲ್ಲಿಸುವವರೆಗೆ ತಾಳ್ಮೆಯಿಂದ ಇರಿ ಎಂದು ವಿನಂತಿಸಿದ್ದರು. “ಕೆಲವು ಕಾರ್ಯವಿಧಾನಗಳನ್ನು ಅನುಸರಿಸಬೇಕಾದ ಅಗತ್ಯವಿದ್ದು, ಆಡಳಿತಾಧಿಕಾರಿ ಆರ್‌ಬಿಐಗೆ ವರದಿ ಸಲ್ಲಿಸಿದ ಕೂಡಲೇ ಸಮಸ್ಯೆಯನ್ನು ಬಗೆಹರಿಸಲು ನನ್ನಿಂದಾದ ಪ್ರಯತ್ನವನ್ನು ಖಂಡಿತಾ ಮಾಡುತ್ತೇನೆ” ಹೇಳಿದ್ದರು.

ಬ್ಯಾಂಕಿನ ಒಟ್ಟು 25 ಸಾವಿರ ಮಂದಿ ಹಣ ಕಳೆದುಕೊಂಡಿದ್ದು, 2,130 ಕೋಟಿಗೂ ಅಧಿಕ ಹಣ ವಂಚನೆ ನಡೆಸಿದೆ ಎಂದು ಹೇಳಲಾಗಿದೆ. ಈ ಹಗರಣದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಅಶ್ವಥ ನಾರಾಯಣ ಗೌಡ ಅವರ ಪಾತ್ರವು ಇದೆ ಎಂದು ಆರೋಪಿಸಲಾಗಿದ್ದು, ಅವರು ಕೂಡಾ ಬ್ಯಾಂಕಿಗೆ 12 ಕೋಟಿ ಬಾಕಿ ಕಟ್ಟಬೇಕಿದೆ ಎಂದು ಹೇಳಲಾಗಿದೆ. ಈ ಮಧ್ಯೆ, ಬ್ಯಾಂಕಿನ ಆಡಿಟ್‌ ನಡೆಲಿದ್ದು, ಅದರ ವರದಿ ಬರಬೇಕಿದೆ. ಆದ್ದರಿಂದ ವಹಿವಾಟು ಆರು ತಿಂಗಳು ಯಥಾಸ್ಥಿತಿಯಲ್ಲಿ ಇರಬೇಕು ಎಂದು ಆರ್‌ಬಿಐ ಹೇಳಿದೆ. ಇದರಿಂದಾಗಿ ಠೇವಣಿದಾರರು ತಮ್ಮ ಹಣವನ್ನು ಬ್ಯಾಂಕಿನಿಂದ ತೆಗೆಯಲು ಆಗುತ್ತಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಕನ್ನಡ ಚಿತ್ರನಿರ್ಮಾಣಕ್ಕೆ ಸ್ಥಿರತೆ ತಂದುಕೊಟ್ಟ ಪಾರ್ವತಮ್ಮ ರಾಜಕುಮಾರ್ ಸ್ಮರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...