Homeಕರ್ನಾಟಕ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ - ಸಿದ್ದರಾಮಯ್ಯ

‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

ರಾಜ್ಯದ ಹುಲಿ,ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ ಎಂದು ಮಂಗಳವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ ಈ ಅನ್ಯಾಯವನ್ನು ಸರಿಪಡಿಸಿ ಕನ್ನಡಿಗರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 3000 ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇವುಗಳಲ್ಲಿ 407 ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ತೀವ್ರ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗ ಯುವಜನರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

“2014ಕ್ಕಿಂತ ಮೊದಲು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯ ಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. 2014 ರಲ್ಲಿ ಒಕ್ಕೂಟ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕ ಯುವ ಜನರಿಗೆ ಅನ್ಯಾಯವೆಸಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ, ಒಕ್ಕೂಟ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು” ಎಂದು ನೆನಪಿಸಿಕೊಂಡಿದ್ದಾರೆ.

“ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ನಮ್ಮ ಸರ್ಕಾರ, ಒಕ್ಕೂಟ ಸರ್ಕಾರದ ಗಮನಸೆಳೆದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಭರವಸೆಯನ್ನು ಲೋಕಸಭೆಯಲ್ಲಿ ನೀಡಿದ್ದರೂ ಆ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ” ಎಂದು ಅವರು ಹೇಳಿದ್ದಾರೆ.

“ಇತ್ತೀಚಿನ ವರ್ಷಗಳಲ್ಲಿ ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್‌ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಜನತೆ ಹೆಚ್ಚುಹೆಚ್ಚು ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ಈ ಜನಸಮುದಾಯ ಪ್ರತಿನಿತ್ಯ ಕಿರುಕುಳ ಅನುಭವಿಸುತ್ತಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದುಳಿದ ಜಾತಿಗಳನ್ನು ಗುರುತಿಸುವ ಅಧಿಕಾರ ಮರಳಿ ರಾಜ್ಯಕ್ಕೆ: ಸಿದ್ದರಾಮಯ್ಯ ಸ್ವಾಗತ

“ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿರುವ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಮತ್ತೆ ಕನ್ನಡ-ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಾ ಬಂದಿದ್ದಾರೆ. ಇದೀಗ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿಯೂ ಸಚಿವರು ಈ ಅನ್ಯಾಯವನ್ನು ಮುಂದುವರಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ದೆಹಲಿ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಸೌಲಭ್ಯಗಳ ಸುನಾಮಿ ಬರಲಿದೆ ಎಂದು ಲೋಕಸಭಾ ಚುನಾವಣೆಯ ಕಾಲದಲ್ಲಿ ಬುರುಡೆ ಬಿಟ್ಟ ಬಿಜೆಪಿಯಿಂದ ಆಯ್ಕೆಯಾದ 25 ಸಂಸದರು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯಗಳ ಸರಮಾಲೆಯ ಬಗ್ಗೆ ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ” ಎಂದು ಅವರು ಕಿಡಿ ಕಾರಿದ್ದಾರೆ.

“ತಮ್ಮನ್ನು ರಾಜ್ಯದ ಹುಲಿ-ಸಿಂಹಗಳೆಂದು ವಂದಿ-ಮಾಗದರಿಂದ ಘೋಷಣೆ ಕೂಗಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಕರ್ನಾಟಕಕ್ಕೆ ಅನ್ಯಾಯ ಆಗುತ್ತಿರುವಾಗ ಮಾತ್ರ ಬೆದರಿದ ಇಲಿಯಾಗುತ್ತಾರೆ. ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಈ ಅನ್ಯಾಯದ ಬಗ್ಗೆ ಯಡಿಯೂರಪ್ಪನವರು ತಕ್ಷಣ ಪ್ರಧಾನಮಂತ್ರಿಯವರ ಗಮನಸೆಳೆದು ಕನ್ನಡಿಗ ಯುವಜನರಿಗೆ ನ್ಯಾಯ ಒದಗಿಸಬೇಕು” ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...