Homeಕರೋನಾ ತಲ್ಲಣಕೇರಳ: ದೇಶದ ಮೊದಲ ಕೊರೊನಾ ಸೋಂಕಿತೆಯಾಗಿದ್ದ ವಿದ್ಯಾರ್ಥಿನಿಗೆ ಮತ್ತೆ ಸೋಂಕು

ಕೇರಳ: ದೇಶದ ಮೊದಲ ಕೊರೊನಾ ಸೋಂಕಿತೆಯಾಗಿದ್ದ ವಿದ್ಯಾರ್ಥಿನಿಗೆ ಮತ್ತೆ ಸೋಂಕು

- Advertisement -
- Advertisement -

ಕಳೆದ ವರ್ಷ ದೇಶದಲ್ಲಿಯೇ ಮೊದಲ ಕೊರೊನಾ ಸೋಂಕು ಪತ್ತೆಯಾಗಿದ್ದ ಕೇರಳದ ತ್ರಿಶೂರ್ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಯಲ್ಲಿ ಮತ್ತೆ ಒಂದೂವರೆ ವರ್ಷಗಳ ನಂತರ ಕೊರೊನಾ ಸೋಂಕು ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

ಚೀನಾದ ವುಹಾನ್‌ನ ವೈದ್ಯಕೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿರುವ 20 ವರ್ಷದ ಯುವತಿ ದೆಹಲಿಗೆ ಹೊರಡುವ ಮೊದಲು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್ ಕಂಡು ಬಂದಿದೆ. ಈ ಮೂಲಕ ಎರಡನೇ ಬಾರಿ ವೈರಸ್ ಸೋಂಕಿಗೆ ಒಳಗಾಗಿದ್ದಾರೆ.

ಸದ್ಯಕ್ಕೆ ವಿದ್ಯಾರ್ಥಿನಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಆಕೆ ತ್ರಿಶೂರ್‌ನಲ್ಲಿರುವ ತನ್ನ ಮನೆಯಲ್ಲಿ ಪ್ರತ್ಯೇಕವಾಗಿರುತ್ತಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಕೆ ಇನ್ನೂ ಕೊರೊನಾ ಲಸಿಕೆ ತೆಗೆದುಕೊಂಡಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ 3ನೇ ಅಲೆ: ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳಿಗೆ ಐಎಂಎ ಎಚ್ಚರಿಕೆ

ಕೊರೊನಾ ವೈರಸ್‌ನ ಕೇಂದ್ರ ಬಿಂದುವಾಗಿರುವ ಚೀನಾದ ವುಹಾನ್‌ನಲ್ಲಿ ವೈದ್ಯಕೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದರು. ಕೊಡುಂಗಲ್ಲೂರ್ ಮೂಲದ ಈಕೆ 2020 ರ ಜನವರಿ 30 ರಂದು ಮೊದಲ ಬಾರಿ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಮೂಲಕ ದೇಶದಲ್ಲಿ ಸಾಂಕ್ರಾಮಿಕ ವೈರಸ್‌ಗೆ ತುತ್ತಾದ ಮೊದಲ ಸೋಂಕಿತರಾಗಿದ್ದರು.

ಕೊರೊನಾ ಸೋಂಕಿತರಾಗಿದ್ದ ಆಕೆಯನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಂತರ ಆಕೆ ವೈರಸ್ ವಿರುದ್ಧ ಹೊರಾಡಿ, ಗೆದ್ದಿದ್ದರು. ಈಗ ಎರಡನೇ ಬಾರಿಗೆ ಸೋಂಕು ತಗುಲಿದ್ದು, ಯಾವುದೇ ಭಯವಿಲ್ಲ. ಈ ರೀತಿ ಹಕವರಿಗೆ ಎರಡೆರಡು ಬಾರಿ ಸೋಂಕು ತಗುಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು, ಕೊರೊನಾ ಮೂರನೇ ಅಲೆಯ ಎಚ್ಚರಿಕೆಗಳ ಮಧ್ಯೆಯೇ, ಮಧ್ಯಪ್ರದೇಶದಲ್ಲಿ ಒಂದೇ ದಿನ 1,478 ಸಾವುಗಳನ್ನು ದಾಖಲಿಸಿದೆ. ಇದರಿಂದ ದೇಶದಲ್ಲಿ 24 ಗಂಟೆಯಲ್ಲಿ ಉಂಟಾದ ಕೋವಿಡ್ ಸಾವುಗಳಲ್ಲಿ ಭಾರಿ ಏರಿಕೆ ಕಂಡಿದ್ದು, ಸಾವಿನ ಸಂಖ್ಯೆ 2,020 ಕ್ಕೆ ಏರಿಕೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಅತ್ಯಂತ ಕಡಿಮೆ ದೈನಂದಿನ ಪ್ರಕರಣಗಳನ್ನು ವರದಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...