Homeಕರ್ನಾಟಕಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

ಕರಾಳ UAPA, NIA ರದ್ದಾಗಬೇಕು: ಫಾದರ್‌‌ ಸ್ಟಾನ್ ಸ್ವಾಮಿ ಶ್ರದ್ಧಾಂಜಲಿ ಸಭೆಯಲ್ಲಿ ಒತ್ತಾಯ

- Advertisement -
- Advertisement -

“ಕರಾಳ ಯುಎಪಿಎ ವಿರೋಧಿ ಸಮಾನ ಮನಸ್ಕರ ವೇದಿಕೆ” ಆಶ್ರಯದಲ್ಲಿ ಹೋರಾಟಗಾರ ಫಾದರ್‌ ಸ್ಟಾನ್ ಸ್ವಾಮಿಯವರ ಶ್ರದ್ಧಾಂಜಲಿ ಹಾಗೂ ಸಾರ್ವಜನಿಕ ಹಕ್ಕೊತ್ತಾಯದ ಬಹಿರಂಗ ಸಭೆ ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿ ಬುಧವಾರ ನಡೆಯಿತು. ವಿವಿಧ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಹಾಗೂ ನೂರಾರು ಮಂದಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಕರಾಳ UAPA, NIA ರದ್ದಾಗಬೇಕು ಮತ್ತು ಬಂಧಿತ ಹೋರಾಟಗಾರರ ಬಿಡುಗಡೆಯಾಗಬೇಕು ಎಂದು ಆಗ್ರಹಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ವಕೀಲ ಕೆ. ಬಾಲನ್, “ಯುಎಪಿಎ ಮತ್ತು ಎನ್‌ಐಎ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲಿಯೇ ಕಾಯ್ದೆಯಾಗಿ ಬಂದಿತ್ತು. ಅದರೊಳಗೆ ಜಗತ್ತಿನ ಎಲ್ಲೂ ಇಲ್ಲದ ಅತಿ ಕ್ರೂರವೂ, ಮಾನವೀಯತೆಗೆ ವಿರುದ್ಧವೂ ಆದ ಮತ್ತಷ್ಟು ಕಲಂಗಳನ್ನು ಕಾಲಕಾಲಕ್ಕೆ ಸೇರಿಸಿದ್ದಲ್ಲದೆ, ಅದರ ನಿರಾತಂಕ ಜಾರಿಗಾಗಿ ಎನ್‌ಐಎ ತನಿಖಾ ಸಂಸ್ಥೆಯನ್ನೂ ಸ್ಥಾಪಿಸಲಾಯಿತು. ನಂತರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಇವುಗಳ ವ್ಯಾಪ್ತಿ ಮತ್ತು ಅಧಿಕಾರಗಳನ್ನು ಮತ್ತಷ್ಟು ಹಿಗ್ಗಿಸಿ ಇವತ್ತಿನ ಅಕರಾಳ ವಿಕರಾಳ ಸ್ವರೂಪಕ್ಕೆ ತಂದಿಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಫಾದರ್ ಸ್ಟಾನ್ ಸ್ವಾಮಿಯವರನ್ನು ಕೊಲ್ಲಲಾಗಿದೆ: ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪ

“ಈ ಎಲ್ಲ ಪಕ್ಷಗಳಿಗೂ ನೆಲ-ಜಲ-ಖನಿಜ ಮೊದಲ್ಗೊಂಡು ದೇಶದ ಸಕಲ ಸಂಪತ್ತನ್ನೂ ದೊಡ್ಡ ಬಂಡವಾಳಿಗ ಕಾರ್ಪೊರೇಟ್ ಶಕ್ತಿಗಳಿಗೆ ಬಿಡಿಗಾಸಿಗೆ ಧಾರೆ ಎರೆಯುವುದು ಹಾಗೂ ಅದನ್ನು ವಿರೋಧಿಸುವ ಆದಿವಾಸಿ-ದಲಿತ-ಅಲ್ಪಸಂಖ್ಯಾತ ಮತ್ತಿತರ ಸಮುದಾಯಗಳು ಮತ್ತು ಪ್ರಜಾತಾಂತ್ರಿಕ ಸಂಘಟನೆಗಳನ್ನು ಬಗ್ಗುಬಡಿಯುವುದಕ್ಕಾಗಿ ಇಂತಹ ಘೋರ ಕಾಯಿದೆ ಅಗತ್ಯವಾಗಿದೆ” ಎಂದು ಬಾಲನ್‌ ಹೇಳಿದರು.

ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಮಾತನಾಡಿ, ‘‘ಸ್ಟಾನ್ ಸ್ವಾಮಿಯಂತಹ ಧೀಮಂತ ಸಂತನ ಕ್ರೂರ ಕೊಲೆಗೆ ಶ್ರದ್ಧಾಂಜಲಿ ಸಲ್ಲಿಸುವುದು ಮತ್ತು ಇಂತಹ ಕಾಯ್ದೆಗಳ ವಿರುದ್ಧ ಮಾತನಾಡುವುದು ಕೂಡ ದೇಶದ್ರೋಹ ಎಂಬ ರೀತಿಯ ಪ್ರಚಾರವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಈಗಾಗಲೇ ಅದರ ವಿವಿಧ ರೂಪಗಳಲ್ಲಿ ರದ್ದಾಗಿರುವ ಯುಎಪಿಎಯನ್ನು ಕೂಡಲೇ ರದ್ದು ಮಾಡುವಂತೆ ನಾವೆಲ್ಲರೂ ನಿರಂತರ ಹೋರಾಟ ಮಾಡದಿದ್ದರೆ ಈ ದೇಶದಲ್ಲಿ ಜನಸಾಮಾನ್ಯರಿಗೆ ಭವಿಷ್ಯವೇ ಇಲ್ಲದಂತಾಗುತ್ತದೆ. ನಮ್ಮ ಮುಂದಿನ ಪೀಳಿಗೆಗೆ ಈ ಲಾಭಬಡುಕರು ಏನನ್ನೂ ಉಳಿಸುವುದಿಲ್ಲ. ಯುಎಪಿಎ ಮತ್ತು ಎನ್‌ಐಎ ರದ್ದಾಗಲೇಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: ಸ್ಟಾನ್ ಸ್ವಾಮಿ ಬಂಧನ: ದಸ್ತಗಿರಿಯಾದದ್ದು ಆದಿವಾಸಿಗಳ ಕೊರಳ ದನಿ

ಪಿಯುಸಿಎಲ್‌ನ ಪ್ರೊ.ವೈ.ಜೆ.ರಾಜೇಂದ್ರ ಮಾತನಾಡಿ, “ವಿಚಾರಣೆಯಾಗಲಿ ಜಾಮೀನಾಗಲಿ ಇಲ್ಲದೆ, ಚಿಕಿತ್ಸೆಗೆ ಅವಕಾಶವನ್ನೂ ನೀಡದೆ, ಸ್ಟಾನ್ ಸ್ವಾಮಿ ಅವರನ್ನು ಅಮಾನುಷ ಹಿಂಸೆಗೆ ಈಡುಮಾಡಿ ಕೊಂದಿದ್ದರಲ್ಲಿ, ಎನ್‌ಐಎ ಅಧಿಕಾರಿಗಳು ಮತ್ತು ಸ್ಥಳೀಯ ಕೋರ್ಟುಗಳು ಮಾತ್ರವಲ್ಲ, ಹೈಕೋರ್ಟಿನಂತಹ ಉನ್ನತ ನ್ಯಾಯಾಲಯ ಕೂಡ ಭಾಗೀದಾರನಾಗಿದೆ. ಹೀಗಾಗಿ ಈ ಕುರಿತು ಉನ್ನತ ವಿಚಾರಣೆ ನಡೆದು ಎಲ್ಲ ತಪ್ಪಿತಸ್ಥರಿಗೂ ಶಿಕ್ಷೆಯಾಗಬೇಕು. ಯುಎಪಿಎ ಮತ್ತು ಎನ್‌ಐಎ ರದ್ದಾಗಬೇಕು, ಎಲ್ಲ ರಾಜಕೀಯ ಕೈದಿಗಳನ್ನೂ ಬೇಷರತ್ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ನಮ್ಮ ಹಕ್ಕೊತ್ತಾಯಗಳು ಈಡೇರುವವರೆಗೂ ಹೋರಾಟ ರಾಜ್ಯದಾದ್ಯಂತ ನಡೆಯಬೇಕಿದೆ. ಅದಕ್ಕಾಗಿ ಇನ್ನೂ ವಿಸ್ತೃತವಾದ ಸಮಾಲೋಚನಾ ಸಭೆ ನಡೆಸಿ, ಬೃಹತ್ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ಸಮಾನ ಮನಸ್ಕ ಸಂಘಟನೆಗಳೂ ಒಗ್ಗೂಡಬೇಕಿದೆ. ಜನಸಾಮಾನ್ಯರೂ ಸ್ವಯಂಪ್ರೇರಿತವಾಗಿ ಹೋರಾಟದಲ್ಲಿ ಭಾಗವಹಿಸಬೇಕಿದೆ” ಎಂದು ಹೋರಾಟಗಾರ ಸಿರಿಮನೆ ನಾಗರಾಜ್ ಮನವಿ ಮಾಡಿದರು.

ದಲಿತ ಹಕ್ಕುಗಳ ಹೋರಾಟಗಾರ ಎಸ್. ಗೋಪಾಲ್, ಪ್ರೊ. ಎನ್.ವಿ. ನರಸಿಂಹಯ್ಯ ಮಾತನಾಡಿ ಸ್ಟಾನ್ ಸ್ವಾಮಿಯವರ ಹತ್ಯೆಯನ್ನು ಖಂಡಿಸಿ, ಯುಎಪಿಎ ಮತ್ತು ಎನ್‌ಐಎ ರದ್ದತಿಗಾಗಿ ಒತ್ತಾಯಿಸಿದರು. ಮಾನವ ಹಕ್ಕು ಕಾರ್ಯಕರ್ತ ಟಿ. ನರಸಿಂಹ ಮೂರ್ತಿ ಸ್ವಾಗತಿಸಿ ವಂದಿಸಿದರು.

ಇದನ್ನೂ ಓದಿ: ಸ್ಟ್ಯಾನ್ ಸ್ವಾಮಿ ಶ್ರದ್ಧಾಂಜಲಿ; ವಿಚಾರಣಾಧೀನ ಕೈದಿಯಾಗಿ ಭಾರತರತ್ನವೊಂದರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...