Homeಕರ್ನಾಟಕಹೆಚ್ಚುತ್ತಿರುವ ಆಕ್ರೋಶದ ನಡುವೆ ಮತ್ತೆ ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ!

ಹೆಚ್ಚುತ್ತಿರುವ ಆಕ್ರೋಶದ ನಡುವೆ ಮತ್ತೆ ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ!

- Advertisement -
- Advertisement -

ದೇಶದಾದ್ಯಂತ ಇಂಧನ ದರಗಳು ಹೆಚ್ಚುತ್ತಿರುವುದರ ವಿರುದ್ದ ಆಕ್ರೋಶಗಳು ಹೆಚ್ಚುತ್ತಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಮುಂಬಯಿಯಲ್ಲಿ ಪೆಟ್ರೋಲ್ ಬೆಲೆ ಗುರುವಾರ ಲೀಟರ್‌ಗೆ 107.54 ರೂ.ಗೆ ಏರಿದ್ದು, ಈ ಮೂಲಕ ಇಂಧನ ದರದ ಏರಿಕೆಯ ಮತ್ತೊಂದು ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್‌ 97.45 ರೂ.ಗೆ ಏರಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್‌ ಪ್ರತಿ ಲೀಟರ್‌ಗೆ 104.94 ರೂ. ಆಗಿದ್ದು, ಡೀಸೆಲ್‌ಗೆ 95.05 ರೂ.ಗೆ ತಲುಪಿದೆ. ಗುರುವಾರ ಪೆಟ್ರೋಲ್ ಬೆಲೆಯನ್ನು 36 ಪೈಸೆ ವರೆಗೆ ಹೆಚ್ಚಿಸಿದರೆ ಡೀಸೆಲ್ ಬೆಲೆಯನ್ನು 17 ಪೈಸೆ ಹೆಚ್ಚಿಸಲಾಗಿದೆ.

ಈ ತಿಂಗಳ 15 ದಿನದ ಒಳಗೆ ಒಟ್ಟು ನಾಲ್ಕು ಬಾರಿ ಪೆಟ್ರೋಲ್ ಬೆಲೆಯನ್ನು ಏರಿಸಲಾಗಿದ್ದು, ಡೀಸೆಲ್ ಬೆಲೆಯನ್ನು ಐದು ಬಾರಿ ಬದಲಾಯಿಸಲಾಗಿದೆ.

ದೆಹಲಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಎರಡರ ಚಿಲ್ಲರೆ ಬೆಲೆ ಕ್ರಮವಾಗಿ ಲೀಟರ್‌ಗೆ 101.54 ಮತ್ತು ಲೀಟರ್‌ಗೆ 89.87 ರೂ. ಆಗಿದೆ.

ಇದನ್ನೂ ಓದಿ: ಪೆಟ್ರೋಲ್‌: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ ಎಂದ ದಾವಣಗೆರೆ ಬಿಜೆಪಿ ಸಂಸದ

ಭೋಪಾಲ್‌ನಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 109.89 ರೂ.ಗೆ ಏರಿದ್ದು ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 98.67 ರೂ. ಆಗಿದೆ.

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಪ್ರತಿ ಲೀಟರ್‌‌ ಪೆಟ್ರೋಲ್‌ಗೆ 101.74 ರೂ. ಮತ್ತು ಡೀಸೆಲ್‌ಗೆ 93.02 ರೂ. ತಲುಪಿದೆ.

ದೇಶಾದ್ಯಂತ ದರಗಳನ್ನು ಹೆಚ್ಚಿಸಲಾಗಿದ್ದು, ಮೌಲ್ಯವರ್ಧಿತ ತೆರಿಗೆಯ ಪ್ರಮಾಣವನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ಈ ದರಗಳು ಭಿನ್ನವಾಗಿರುತ್ತದೆ.

ಈ ಮಧ್ಯೆ, ಬೆಲೆ ಏರಿಕೆಯ ವಿರುದ್ದ ಜುಲೈ 7 ರಿಂದ 10 ದಿನಗಳ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

ದೇಶಾದ್ಯಂತ ಹೆಚ್ಚುತ್ತಿರುವ ಇಂಧನ ಬೆಲೆಗಳ ವಿರುದ್ಧ ಹಲವಾರು ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿವೆ. ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಮಹಾರಾಷ್ಟ್ರ ಉಪ ಸಿಎಂ ಅಜಿತ್ ಪವಾರ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ರಾಜಕೀಯ ಮುಖಂಡರು ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಅದನ್ನು ಕಡಿತಗೊಳಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...