Homeಗೌರಿ ಕಾರ್ನರ್ಗೌರಿ ಕಾರ್ನರ್; ’ರೋಡ್ ಟು ಸಂಗಮ್' ಸಿನಿಮಾ ಮತ್ತು ಸೌಹಾರ್ದತೆ

ಗೌರಿ ಕಾರ್ನರ್; ’ರೋಡ್ ಟು ಸಂಗಮ್’ ಸಿನಿಮಾ ಮತ್ತು ಸೌಹಾರ್ದತೆ

- Advertisement -
- Advertisement -

ಕೆಲ ದಿನಗಳ ಹಿಂದೆ ಭಾರತದ 64ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಆದರೆ ಅದ್ಯಾಕೋ ಅವತ್ತು ನನ್ನಲ್ಲಿ ನಮ್ಮ ದೇಶದ ಬಗ್ಗೆ ಅಭಿಮಾನವಾಗಲಿ, ಭರವಸೆಯಾಗಲಿ ಮೂಡಲೇ ಇಲ್ಲ. ಇತ್ತೀಚೆಗೆ ಸವಣೂರಿನಲ್ಲಿ ಭಂಗಿ ಸಂಸಾರವೊಂದು ತಮ್ಮ ಮೇಲೆ ಮಲ ಸುರಿದುಕೊಂಡು ಪ್ರತಿಭಟಿಸಿದ್ದು; ಹಣವಂತರು ತಮ್ಮ ದೇಶಪ್ರೇಮವನ್ನು ಪ್ರದರ್ಶಿಸಲು ಅನುಕೂಲವಾಗಲೆಂದು ಚಿಂದಿ ಬಟ್ಟೆ ಧರಿಸಿದ್ದ ಬಡಮಕ್ಕಳು ಸಿಗ್ನಲ್ ಲೈಟ್‌ಗಳಲ್ಲಿ ಪ್ಲಾಸ್ಟಿಕ್ ಧ್ವಜಗಳನ್ನು ಮಾರುತ್ತಿದ್ದದ್ದು; ಇದೇ ಶುಕ್ರವಾರ ಬಿಡುಗಡೆಗೊಳ್ಳುತ್ತಿರುವ ನಮ್ಮ ಪ್ರಕಾಶನದ ’ಅಸ್ಪೃಶ್ಯ ವಸಂತ’ ಕಾದಂಬರಿಯಲ್ಲಿನ ನಾಲ್ಕು ತಲೆಮಾರಿನ ದಲಿತ ಕುಟುಂಬವೊಂದರ ದಾರುಣ ಬದುಕು ಮತ್ತು ಪ್ರತಿಭಟನೆ… ಇವೆಲ್ಲವೂ ನನ್ನ ಮನಸ್ಸನ್ನು ಕವಿದಿದ್ದವು.

ನಮ್ಮ ದೇಶದ ಬಹಳಷ್ಟು ಜನ ಇವತ್ತಿಗೂ ಸ್ವಾಭಿಮಾನದ ಬದುಕಿನಿಂದ ವಂಚಿತರಾಗಿರುವಾಗ ಈ ’ಸ್ವಾತಂತ್ರ್ಯ ದಿನಾಚರಣೆ’ಗೆ ಏನು ಅರ್ಥ? 1947ರಲ್ಲಿ ಈ ದೇಶದ ಜನ ಕಂಡಿದ್ದ ’ಸಮಾನತೆ, ಸಹಬಾಳ್ವೆ, ಸೌಹಾರ್ದ ಭಾರತ’ದ ಕನಸು ಈಗ ನುಚ್ಚುನೂರಾಗಿದೆ.

ಇದೆಲ್ಲದರ ಬಗ್ಗೆ ಯೋಚಿಸುತ್ತಾ, ಸ್ವಾತಂತ್ರ್ಯದ ಮುಖ್ಯ ರೂವಾರಿ ಆಗಿದ್ದ ಮಹಾತ್ಮ ಗಾಂಧಿಯ ಸಿದ್ಧಾಂತ, ತ್ಯಾಗ, ಆಶಯಗಳೆಲ್ಲವೂ ಈಗ ಸಮಾಧಿ ಸೇರಿವೆ ಎಂದೆನಿಸುತ್ತಿದ್ದಾಗಲೇ ಒಂದು ಹಿಂದಿ ಸಿನಿಮಾ ನೋಡಿದೆ. ಅದರ ಹೆಸರು ’ದಿ ರೋಡ್ ಟು ಸಂಗಮ್.’

ಆ ಸಿನಿಮಾದ ಕೇಂದ್ರ ಹಸ್ಮತುಲ್ಲಾ ಎಂಬ ಮುಸಲ್ಮಾನ ಮೆಕಾನಿಕ್. ಅಲಹಾಬಾದಿನಲ್ಲಿ ಒಂದು ಗ್ಯಾರೇಜ್ ನಡೆಸುತ್ತಿರುವ ಹಸ್ಮತುಲ್ಲಾ ಎಂತಹ ಹಳೆ ಎಂಜಿನ್‌ಅನ್ನೂ ರಿಪೇರಿ ಮಾಡಬಲ್ಲ ಚಾಣಾಕ್ಷ. ಒಂದು ದಿನ ಅಲಹಾಬಾದಿನ ವಸ್ತು ಸಂಗ್ರಹಾಲಯದವರು ಪುರಾತನ ಫೋರ್ಡ್ ಎಂಜಿನ್ ಅನ್ನು ಆತನಿಗೆ ನೀಡಿ ಅದನ್ನು ಆದಷ್ಟು ಬೇಗ ರಿಪೇರಿ ಮಾಡಿಕೊಡಬೇಕೆಂದು ಕೋರುತ್ತಾರೆ. ಅದಕ್ಕೆ ಹಸ್ಮತುಲ್ಲಾ ಒಪ್ಪಿ ಕೆಲಸ ಪ್ರಾರಂಭಿಸುತ್ತಾನೆ.

PC : Bollywood Hungama

ಆದರೆ ಮರುದಿನವೇ ಅಲಹಾಬಾದಿನಲ್ಲಿ ಬಾಂಬ್ ಸ್ಫೋಟವಾಗಿ ಕೆಲ ಜನ ಸಾಯುತ್ತಾರೆ. ಎಂದಿನಂತೆ ಪೊಲೀಸರು ಈ ಸ್ಫೋಟದ ಹಿಂದೆ ಮುಸಲ್ಮಾನರೇ ಇರಬೇಕೆಂದು ಭಾವಿಸಿ ಕೈಗೆ ಸಿಕ್ಕ ಮುಸಲ್ಮಾನರನ್ನು ಬಂಧಿಸುತ್ತಾರೆ. ಹೀಗೆ ಅಮಾಯಕರನ್ನು ಬಂಧಿಸಿದ್ದರ ಬಗ್ಗೆ ಕೋಪಗೊಳ್ಳುವ ಮುಸಲ್ಮಾನ ಸಮುದಾಯದ ನಾಯಕರು ತಮ್ಮ ಪ್ರದೇಶಗಳಲ್ಲಿ ಬಂದ್ ಘೋಷಿಸುತ್ತಾರೆ. ಹಸ್ಮತುಲ್ಲಾ ಕೂಡ ತನ್ನ ಗ್ಯಾರೇಜ್ ಬಾಗಿಲು ಹಾಕುತ್ತಾನೆ.

ಆಗ ಟಿವಿ ಚಾನೆಲ್ ಒಂದರ ವರದಿಗಾರ ಹಸ್ಮತುಲ್ಲಾನನ್ನು ಸಂದರ್ಶಿಸಲು ಬರುತ್ತಾನೆ. ಆ ವರದಿಗಾರ ಹಸ್ಮತುಲ್ಲಾಗೆ ಒಂದು ಅಚ್ಚರಿಯ ವಿಷಯವನ್ನು ಬಹಿರಂಗಪಡಿಸುತ್ತಾನೆ. ಅದೇನೆಂದರೆ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಚಿತಾಭಸ್ಮವಿರುವ ಒಂದು ಚೆಂಬು ಇಷ್ಟು ವರ್ಷಗಳ ಕಾಲ ಯಾವುದೋ ಲಾಕರ್‌ನಲ್ಲಿ ಇದ್ದುದ್ದಾಗಿಯೂ, ಗಾಂಧಿಯವರ ಮೊಮ್ಮಗ ಅದನ್ನೀಗ ಗಂಗೆ, ಯಮುನೆ ಮತ್ತು ಸರಸ್ವತಿ ನದಿಗಳು ಕೂಡುವ ಸಂಗಮದಲ್ಲಿ ವಿಸರ್ಜಿಸಲು ಉದ್ದೇಶಿಸಿದ್ದಾರೆಂದೂ, ಚಿತಾಭಸ್ಮವನ್ನು ಸಂಗಮಕ್ಕೆ ಸಾಗಿಸಲು 1948ರಲ್ಲಿ ಉಪಯೋಗಿಸಿದ್ದ ಫೋರ್ಡ್ ವಾಹನವನ್ನೇ ಉಪಯೋಗಿಸಲಿದ್ದಾರೆಂದೂ, ಅದಕ್ಕಾಗಿಯೇ ಆ ವಾಹನದ ಎಂಜಿನ್‌ಅನ್ನು ರಿಪೇರಿ ಮಾಡಲು ಹಸ್ಮತುಲ್ಲಾನನ್ನು ಕೇಳಲಾಗಿದೆ ಎಂದೂ ವರದಿಗಾರ ಹೇಳುತ್ತಾನೆ.

ಇದನ್ನು ಕೇಳಿ ಹಸ್ಮತುಲ್ಲಾನಿಗೆ ಆಘಾತವಾಗುತ್ತದೆ. ಒಂದೆಡೆ ಇಂತಹ ದೊಡ್ಡ ಜವಾಬ್ದಾರಿ ವಹಿಸಿಕೊಂಡಿದ್ದಾನೆ. ಇನ್ನೊಂದೆಡೆ ಅದನ್ನು ಪೂರೈಸಲಾಗದಂತೆ ಆತನ ಸಮುದಾಯದವರೇ ಬಂದ್ ಘೋಷಿಸಿದ್ದಾರೆ. ಹಸ್ಮತುಲ್ಲಾ ಕಷ್ಟದಲ್ಲಿ ಸಿಲುಕಿಕೊಳ್ಳುತ್ತಾನೆ. ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ, ಎಲ್ಲಾ ಕೋಮಿನವರೂ ಅಣ್ಣತಮ್ಮಂದಿರಂತೆ ಭಾರತದಲ್ಲಿ ವಾಸಿಸಬೇಕೆಂದು ಬಯಸಿದ್ದ ಮಹಾತ್ಮ ಗಾಂಧಿಯ ಬಗ್ಗೆ ಹಸ್ಮತುಲ್ಲಾನಿಗೆ ಅಪಾರವಾದ ಮೆಚ್ಚುಗೆ; ಆದ್ದರಿಂದಲೇ ಅವರ ಈ ಅಂತಿಮ ಯಾತ್ರೆಗೆ ತನ್ನ ಕೈಲಾದ ಸೇವೆಯನ್ನು ಸಲ್ಲಿಸಬೇಕೆಂಬ ಬಯಕೆ.

ಆ ಕಾರಣಕ್ಕಾಗಿಯೇ ತನ್ನ ಗ್ಯಾರೇಜ್‌ಗೆ ಈ ಬಂದ್‌ನಿಂದ ವಿನಾಯಿತಿ ಕೊಡಬೇಕೆಂದು ತನ್ನ ಸಮುದಾಯದ ನಾಯಕರನ್ನು ವಿನಂತಿಸಿಕೊಳ್ಳುತ್ತಾನೆ. ಆದರೆ ಅದಕ್ಕೆ ಅವರು ಒಪ್ಪುವುದಿಲ್ಲ. ಆಗ ಹಸ್ಮತುಲ್ಲಾ ತನ್ನ ಗ್ಯಾರೇಜ್ ಮುಂದೆ ಧರಣಿ ಕೂರುತ್ತಾನೆ; ಮುಸಲ್ಮಾನರ ಪರ ವಹಿಸಿದ್ದಕ್ಕೆ ತನ್ನ ಪ್ರಾಣತೆತ್ತ ಮಹಾತ್ಮ ಗಾಂಧಿಗೆ ತಾನು ಸೇವೆ ಸಲ್ಲಿಸುತ್ತೇನೆ ಎಂದು ಪಣ ತೊಡುತ್ತಾನೆ. ಹಸ್ಮತುಲ್ಲಾನ ಈ ಗಟ್ಟಿ ನಿರ್ಧಾರವನ್ನು ಕಂಡು ವಿಧಿಯಿಲ್ಲದೆ ಆತನ ಗ್ಯಾರೇಜ್‌ನ ಕೀಲಿ ಕೈಗಳನ್ನು ಆತನ ಸಮುದಾಯದವರೇ ನೀಡುತ್ತಾರೆ.

ಫೋರ್ಡ್ ಎಂಜಿನ್‌ಅನ್ನು ರಿಪೇರಿ ಮಾಡಲು ಹಸ್ಮತುಲ್ಲಾನಿಗೆ ಇತರರ ನೆರವೂ ಬೇಕಾಗುತ್ತದೆ. ಆತನ ಹಿಂದೂ ಸ್ನೇಹಿತ ಡಾ.ಅನ್ಸಾರಿ ನೀಡುವ ಸಲಹೆಯ ಪ್ರಕಾರ ಆತ ತನ್ನ ಸಮುದಾಯದವರ ಪ್ರಮುಖರನ್ನು ಒಬ್ಬೊಬ್ಬರಾಗಿ ತನ್ನತ್ತ ಸೆಳೆಯುತ್ತಾನೆ, ತಾನು ಮಾಡುತ್ತಿರುವುದು ಸರಿಯಾದದ್ದು ಎಂದು ಅವರಿಗೆ ಮನವರಿಕೆ ಮಾಡಿಕೊಡುತ್ತಾನೆ. ಕೊನೆಗೆ ಎಲ್ಲರೂ ಹಸ್ಮತುಲ್ಲಾನ ಪರ ನಿಂತರೂ ಸಮುದಾಯದ ಪ್ರಮುಖ ಕಸೂರಿ ಮತ್ತು ಮೌಲ್ವಿ ಖುರೇಷಿ ಮಾತ್ರ ಆತನ ವಿರುದ್ಧ ನಿಲ್ಲುತ್ತಾರೆ. ಇದರಿಂದ ಹಸ್ಮತುಲ್ಲಾ ತುಂಬಾ ಬೇಸರಗೊಂಡು “ನಾನು ರಿಪೇರಿ ಮಾಡುತ್ತಿರುವ ವಾಹನ ಜಿನ್ನಾದಾಗಿದ್ದರೆ ನಿಮ್ಮ ಪ್ರತಿಕ್ರಿಯೆ ಹೀಗೇ ಇರುತ್ತಿತ್ತೆ? ಈ ದೇಶದ ಪ್ರಜೆಗಳಾಗಿ ಈ ದೇಶದ ರಾಷ್ಟ್ರಪಿತನಿಗೆ ನಾವು ತೋರಿಸುವ ಗೌರವವೇ ಇದು” ಎಂದು ಕುಟುಕುತ್ತಾನೆ. ಆದರೂ ಅವರು ಹಸ್ಮತುಲ್ಲಾನ ವಾದಕ್ಕೆ ಒಪ್ಪುವುದಿಲ್ಲ.

ನಗರದಲ್ಲಾಗಲೇ ಬಾಂಬ್ ಸ್ಫೋಟಗೊಂಡಿದೆ, ಮುಸಲ್ಮಾನರು ರೋಷಗೊಂಡು ಬಂದ್ ಘೋಷಿಸಿದ್ದಾರೆ, ಯಾವುದೇ ಕ್ಷಣದಲ್ಲಿ ದೊಂಬಿಗಳಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲೂ ಮಹಾತ್ಮಾ ಗಾಂಧಿ ಅವರ ಚಿತಾಭಸ್ಮವನ್ನು ಹೊತ್ತಿರುವ ವಾಹನ ಮುಸಲ್ಮಾನರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ತನ್ನ ಪ್ರದೇಶದಲ್ಲೂ ಸಾಗಿ ಹೋಗಬೇಕೆಂದು ಹಸ್ಮತುಲ್ಲಾ ಅಧಿಕಾರಿಗಳ ಮುಂದೆ ಬೇಡಿಕೊಳ್ಳುತ್ತಾನೆ. ತನ್ನ ಜನರೂ ಗಾಂಧಿಗೆ ಗೌರವ ಸಲ್ಲಿಸುವ ಅವಕಾಶ ನೀಡಬೇಕೆಂದು ಕೇಳಿಕೊಳ್ಳುತ್ತಾನೆ. ತನ್ನ ಎಲ್ಲ ಕಷ್ಟಗಳ ನಡುವೆಯೂ ಆತ ತಮ್ಮೊಂದಿಗೆ ಸಹಕರಿಸಿದ್ದರಿಂದ ಅಧಿಕಾರಿಗಳು ಒಪ್ಪಿಕೊಳ್ಳುತ್ತಾರೆ.

ಗಾಂಧಿಯ ಚಿತಾಭಸ್ಮವನ್ನು ಹೊತ್ತ ವಾಹನ ಮುಸಲ್ಮಾನರ ಪ್ರದೇಶವನ್ನು ಪ್ರವೇಶಿಸುತ್ತದೆ. ಆದರೆ ಎಲ್ಲೂ ಜನರಿಲ್ಲ. ಎಲ್ಲ ಅಂಗಡಿಗಳು, ಮನೆಗಳು ತಮ್ಮ ಕದ ಮುಚ್ಚಿದ್ದು ಎಲ್ಲೆಡೆ ನಿಶಬ್ದ ಆವರಿಸಿದೆ. ಇದನ್ನು ನೋಡಿ ಹಸ್ಮತುಲ್ಲಾ ಆತಂಕಗೊಳ್ಳುತ್ತಾನೆ. ಆದರೆ ವಾಹನ ಸಾಗಿದಂತೆಲ್ಲ ನಿಧಾನವಾಗಿ ಜನ ಪ್ರತ್ಯಕ್ಷರಾಗುತ್ತಾರೆ. ಅವರೆಲ್ಲ ನೋಡುನೋಡುತ್ತಿದ್ದಂತೆ ಮುಸಲ್ಮಾನರ ನಾಯಕ ಕಸೂರಿ ತನ್ನ ಮನೆಯಿಂದ ಹೊರಬಂದು ಗಾಂಧಿಯವರ ಅಂತಿಮ ಯಾತ್ರೆಗೆ ತನ್ನ ನಮನ ಸಲ್ಲಿಸುತ್ತಾನೆ. ಮೌಲ್ವಿ ಖುರೇಷಿ ಕೂಡ ಆತನೊಂದಿಗೆ ನಿಲ್ಲುತ್ತಾನೆ. ಮರುಕ್ಷಣ ಜನಸಾಗರವೇ ಹರಿದು ಬಂದು ವಾಹನ ಸಾಗುತ್ತಿರುವ ರಸ್ತೆಯನ್ನು ಸ್ವಚ್ಛಗೊಳಿಸುತ್ತದೆ, ಪುಷ್ಪಗಳನ್ನು ಅರ್ಪಿಸಿ ಜನರೆಲ್ಲಾ ಕೈ ಮುಗಿಯುತ್ತಾರೆ. ಹಸ್ಮತುಲ್ಲಾ ನಿಟ್ಟುಸಿರಿನೊಂದಿಗೆ ಕಣ್ಣೀರು ಸುರಿಸುತ್ತಾನೆ. ಹಿನ್ನೆಲೆಯಲ್ಲಿ ಗಾಂಧೀಜಿ ಅವರಿಗೆ ಪ್ರಿಯವಾಗಿದ್ದ ’ಈಶ್ವರ್, ಅಲ್ಲಾ ತೇರೇ ನಾಮ್ ಸಬುಕೊ ಸಮ್ಮತಿ ದೇ ಭಗವಾನ್’ ಹಾಡು ಕೇಳಿಸುತ್ತಾ ಸಿನಿಮಾ ಅಂತ್ಯಗೊಳ್ಳುತ್ತದೆ.

PC : Bollywood Hungama, (ಅಮಿತ್ ರೈ)

ಈ ಚಿತ್ರದ ವಿಶೇಷ ಯಾವುದೆಂದರೆ ಇದರಲ್ಲಿ ಎಲ್ಲೂ ಗಾಂಧೀಜಿಯವರ ನೀತಿ, ಮೌಲ್ಯಗಳ ಬಗ್ಗೆ ಯಾರೂ ಮಾತಾಡುವುದಿಲ್ಲ. ಅವರು ಸಾಂದರ್ಭಿಕ ಕಥಾವಸ್ತು ಮಾತ್ರ ಆಗಿದ್ದಾರೆ. ಆದರೂ ಹಸ್ಮತುಲ್ಲಾ ಎಂಬ ಸಾಮಾನ್ಯ ಮನುಷ್ಯನೊಳಗಡೆ ಗಾಂಧಿ ಚಿಗುರೊಡೆದು ಆತನ ಮೂಲಕ ಕಾಣಿಸಿಕೊಳ್ಳುತ್ತಾರೆ. ಕಾಯಕವೇ ಕೈಲಾಸ, ಅದಕ್ಕೂ ಧರ್ಮಕ್ಕೂ ಸಂಬಂಧವಿಲ್ಲ; ತನಗೆ ಸರಿ ಅನ್ನಿಸಿದ್ದನ್ನು ಮಾಡಬೇಕು, ತನ್ನ ನಿಲುವು ಸರಿಯಾದದ್ದಾದರೆ ಜನ ತನ್ನ ಪರ ನಿಲ್ಲುತ್ತಾರೆ; ಯಾವುದೇ ಧರ್ಮ ಸೌಹಾರ್ದಕ್ಕೆ ಒತ್ತು ನೀಡುತ್ತದೆಯೇ ಹೊರತು ದ್ವೇಷಕ್ಕೆ, ಸಂಕುಚಿತ ಚಿಂತನೆಗೆ ಅಲ್ಲ ಎಂಬುದನ್ನೆಲ್ಲ ಹಸ್ಮತುಲ್ಲಾನ ನೇರ, ನಿಷ್ಠುರ ಬದುಕಿನ ಮೂಲಕವೇ ಚಿತ್ರಿಸುತ್ತದೆ.

’ರೋಡ್ ಟು ಸಂಗಮ್’ ಅಮಿತ್ ರೈ ಎಂಬುವವರ ಚೊಚ್ಚಲ ನಿರ್ದೇಶನದ ಸಿನಿಮಾವಾಗಿದೆ. ೬೪ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ನಮ್ಮ ದೇಶ ಎತ್ತ ಸಾಗಿದೆ ಎಂಬುದರ ಬಗ್ಗೆ ವಿಷಾದವಾಗುತ್ತಿರುವಾಗಲೇ ನಮ್ಮ ದೇಶದಲ್ಲಿ ಗಾಂಧೀಜಿಯ ಆಶಯಗಳನ್ನು ನಮ್ಮ ಮುಂದೆ ಮತ್ತೆ ತೆರೆದಿಡುವ ಮೂಲಕ ನಾವು ಸಿನಿಕರಾಗದಂತೆ ನೋಡಿಕೊಳ್ಳುವ ಯುವಕರೂ ಇದ್ದಾರೆ ಎಂದು ಈ ತೋರಿಸಿದ್ದರಿಂದ ಒಂದಿಷ್ಟು ನೆಮ್ಮದಿ ಆಯಿತು.

(ಸೆಪ್ಟೆಂಬರ್ 1, 2010ರ ಗೌರಿಯವರ ಕಂಡಹಾಗೆ ಅಂಕಣದ ಸಂಗ್ರಹ ಭಾಗ ಇದು)


ಇದನ್ನೂ ಓದಿ: ಸಿನಿಮಾಟೋಗ್ರಾಫ್ ಕಾಯ್ದೆಯ ತಿದ್ದುಪಡಿ; ಸಿನಿಮಾ ತಯಾರಕರ ಮೇಲೆ ತೂಗಲಿರುವ ಹೊಸ ಕತ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...