Homeಮುಖಪುಟಒಟ್ಟಿಗೆ ನೃತ್ಯ ಮಾಡಿದ ಅಮೀರ್‌ ಖಾನ್ ಮತ್ತು ಕಿರಣ್ ರಾವ್: ವಿಡಿಯೊ ವೈರಲ್‌

ಒಟ್ಟಿಗೆ ನೃತ್ಯ ಮಾಡಿದ ಅಮೀರ್‌ ಖಾನ್ ಮತ್ತು ಕಿರಣ್ ರಾವ್: ವಿಡಿಯೊ ವೈರಲ್‌

- Advertisement -
- Advertisement -

ಮದುವೆಯಾಗಿ 15 ವರ್ಷಗಳ ನಂತರ ಇತ್ತೀಚೆಗೆ ತಮ್ಮ ವಿಚ್ಛೇದನವನ್ನು ಘೋಷಿಸಿದ್ದ ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಕಿರಣ್ ರಾವ್ ದಂಪತಿ ಒಟ್ಟಿಗೆ ನೃತ್ಯ ಮಾಡುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

ತಮ್ಮ ಹೊಸ ಚಿತ್ರ ಲಾಲ್ ಸಿಂಗ್ ಚಡ್ಡಾ ಶೂಟಿಂಗ್‌ಗಾಗಿ ಪ್ರಸ್ತುತ ಲಡಾಖ್‌ನಲ್ಲಿರುವ ಇವರು, ಕೆಲಸದ ಮಧ್ಯೆ ಸ್ಥಳೀಯರ ಸಾಂಸ್ಕೃತಿಕ ನೃತ್ಯವೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ಅಮೀರ್ ಖಾನ್ ಪ್ರೊಡಕ್ಷನ್ಸ್ ಭಾಗವಾಗಿ ಇಬ್ಬರ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಲಾಲ್ ಸಿಂಗ್ ಚಡ್ಡಾ ಚಿತ್ರವನ್ನು ಅದ್ವೈತ್‌ ಚಂದನ್‌ ನಿರ್ದೇಶನ ಮಾಡುತ್ತಿದ್ದಾರೆ. ಅಮೀರ್‌ಖಾನ್, ಕರೀನಾ ಕಪೂರ್‌, ತೆಲುಗು ನಟ ನಾಗ ಚೈತನ್ಯ, ಮೋಹನ್ ಸಿಂಗ್‌ ತಾರಾಂಗಣದಲ್ಲಿ ಇರಲಿದ್ದಾರೆ.

ಲಾಲ್ ಸಿಂಗ್ ಚಡ್ಡಾ ಅವರ ತಂಡವು ಇತ್ತೀಚೆಗೆ ವಾಖಾದ ಲಖಾಕಿ ಗ್ರಾಮದ ಒಂದು ಪ್ರಮುಖ ಸನ್ನಿವೇಶವನ್ನು ಚಿತ್ರೀಕರಿಸಿತ್ತು. ಈ ವೇಳೆ ಅಮೀರ್ ಖಾನ್ ಮತ್ತು ಕಿರಣ್ ರಾವ್ ಅವರು ಸಾಂಪ್ರದಾಯಿಕ ಉಡುಪನ್ನು ಧರಿಸಿ ನೃತ್ಯ ಮಾಡಿದ್ದಾರೆ.

ಇದನ್ನೂ ಓದಿ: ವಿಚ್ಛೇದನದ ನಂತರ ಅಮಿರ್ ಖಾನ್-ಕಿರಣ್ ರಾವ್ ಭಾವನಾತ್ಮಕ ವಿಡಿಯೋ ಸಂದೇಶ

ಜುಲೈ 3 ರಂದು ತಮ್ಮ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದ ಅಮಿರ್‌ ಖಾನ್‌ ಮತ್ತು ಕಿರಣ್ ರಾವ್ ಈ ದಂಪತಿ, ವಿಚ್ಛೇದನದ ಬೆನ್ನಲ್ಲೇ ತಾವಿಬ್ಬರೂ ಒಂದೇ ಕುಟುಂಬವಾಗಿ ಮುಂದುವರೆಯುತ್ತೇವೆ ಎಂದು ಅಭಿಮಾನಿಗಳಿಗೆ ಸಂದೇಶ ನೀಡಿದ್ದರು. ಪರಸ್ಪರ ಒಬ್ಬರ ಕೈ ಒಬ್ಬರು ಹಿಡಿದು ತಮ್ಮ ನಡುವೆ ದಾಂಪತ್ಯ ಕೊನೆಗೊಂಡಿರಬಹುದು ಹಾಗೆಂದ ಮಾತ್ರಕ್ಕೆ ತಮ್ಮ ನಡುವಿನ ಅನ್ಯೋನ್ಯತೆಯಲ್ಲಿ ಯಾವುದೇ ಕೊರತೆಯಾಗುವುದಿಲ್ಲವೆಂದು ಸಾರಿದ್ದರು.

“ನಿಮಗೆ ಬೇಸರವಾಗಿರಬಹುದು, ಸಿಟ್ಟೂ ಬಂದಿರಬಹುದು. ಆಘಾತವಾಗಿರಬಹುದು. ಆದರೆ ನಮ್ಮ ನಿರ್ಧಾರದಿಂದ ನಾವಿಬ್ಬರೂ ಖುಷಿಯಾಗಿದ್ದೇವೆ. ಒಂದು ಕುಟುಂಬವಾಗಿ ಮುಂದುವರೆಯುತ್ತೇವೆ” ಎಂದು ವಿಡಿಯೊದಲ್ಲಿ ಅಮೀರ್ ಖಾನ್ ಹೇಳಿದ್ದರು.

 

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಸ್‌ಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...