Homeಕರ್ನಾಟಕರಾಜ್ಯದಲ್ಲಿ ಶೀಘ್ರದಲ್ಲೇ ‘ಇ-ಬೈಕ್ ಟ್ಯಾಕ್ಸಿ’ ಸೇವೆ ಪ್ರಾರಂಭ!

ರಾಜ್ಯದಲ್ಲಿ ಶೀಘ್ರದಲ್ಲೇ ‘ಇ-ಬೈಕ್ ಟ್ಯಾಕ್ಸಿ’ ಸೇವೆ ಪ್ರಾರಂಭ!

- Advertisement -
- Advertisement -

ರಾಜ್ಯದಲ್ಲಿ ಶೀಘ್ರವೇ ಎಲೆಕ್ಟ್ರಿಕ್‌ ಬೈಕ್ (ಇ-ಬೈಕ್) ಟ್ಯಾಕ್ಸಿ ಸೇವೆಗಳು ಪ್ರಾರಂಭವಾಗಿಲಿದ್ದು, ಸಾರಿಗೆ ಇಲಾಖೆಯು ಅದರ ಕಾರ್ಯಾಚರಣೆಗೆ ಅನುಮೋದನೆ ನೀಡಲಿದೆ. ಅಧಿಕಾರಿಗಳ ಪ್ರಕಾರ, ಇ-ಬೈಕನ್ನು ಟ್ಯಾಕ್ಸಿಯಾಗಿ ನೋಂದಾಯಿಸಲು ವ್ಯಕ್ತಿಗಳಿಗೆ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಇದರಂತೆ ವೈಯಕ್ತಿಕವಾಗಿ ಅಥವಾ ಒಂದು ಸಂಸ್ಥೆಯಾಗಿ ರಿಜಿಸ್ಟರ್‌ ಮಾಡಿ ಈ ಸೇವೆಯನ್ನು ನೀಡಬಹುದಾಗಿದೆ.

ಇ-ಬೈಕ್ ಟ್ಯಾಕ್ಸಿಗಳು ಆರಂಭದಲ್ಲಿ ಬೆಂಗಳೂರಿನಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತವೆ ಮತ್ತು ನಂತರ ರಾಜ್ಯದಾದ್ಯಂತ ಇತರ ನಗರ ಕೇಂದ್ರಗಳಿಗೆ ವಿಸ್ತರಿಸಲಾಗುವುದು ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಕಾರ್ಪೊರೆಟ್ ಧೃತರಾಷ್ಟ್ರ ಬಾಹುಗಳಿಗೆ ವಾಣಿಜ್ಯ ಬ್ಯಾಂಕುಗಳು!

“ಇ-ಬೈಕ್ ಟ್ಯಾಕ್ಸಿಗಳು ಮೆಟ್ರೋ ಮತ್ತು ಸಿಟಿ ಬಸ್ ಸೇವೆಗಳಿಗೆ ಫೀಡರ್ ಸೇವೆಗಳಾಗಿ ಕಾರ್ಯನಿರ್ವಹಿಸುತ್ತವೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇದರ ಸಂಪೂರ್ಣ ಮಾರ್ಗಸೂಚಿಗಳನ್ನು ಬುಧವಾರ ಬಿಡುಗಡೆ ಮಾಡುವ ನಿರೀಕ್ಷೆಯಿದೆ” ಎಂದು ಅವರು ಹೇಳಿದ್ದಾರೆ.

ಇದಲ್ಲದೆ, ಪ್ರತಿ ವಾಹನದಲ್ಲಿ ಜಿಪಿಎಸ್ ಅಳವಡಿಸಬೇಕಿದ್ದು, ಅವುಗಳ ಮೇಲೆ ‘ಬೈಕು ಟ್ಯಾಕ್ಸಿ’ ಎಂದು ಪ್ರಧಾನವಾಗಿ ಬರೆಯಲ್ಪಟ್ಟಿದ್ದರೆ ಮಾತ್ರ ಸರ್ಕಾರ ಇ-ಬೈಕ್ ಟ್ಯಾಕ್ಸಿಗಳ ಸೇವೆಗಳನ್ನು ಅನುಮತಿಸುವ ಸಾಧ್ಯತೆಯಿದೆ. ಸವಾರ ಮತ್ತು ಗ್ರಾಹಕರಿಗೆ ವಿಮೆ ಮತ್ತು ಹೆಲ್ಮೆಟ್‌ಗಳನ್ನು ಕಡ್ಡಾಯವಾಗಿ ಧರಿಸುವುದು ಇ-ಬೈಕ್ ಟ್ಯಾಕ್ಸಿ ಆಪರೇಟರ್‌ಗಳಿಗೆ ಅನುಸರಿಸಲು ನಿರ್ದೇಶಿಸಲಾಗುವುದು.

“ಆದಾಗ್ಯೂ, ಗ್ರಾಹಕರಿಗೆ ಇ-ಬೈಕ್ ಟ್ಯಾಕ್ಸಿ ಸೇವೆಯನ್ನು ಬಳಸಲು ಅನುಮತಿಸುವ ಗರಿಷ್ಠ ದೂರವು 10 ಕಿಲೋಮೀಟರ್ ಆಗಿರುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ. 0-5 ಕಿಲೋಮೀಟರ್ ಮತ್ತು 5-10 ಕಿಲೋಮೀಟರ್‌‌ ವ್ಯಾಪ್ತಿಗಾಗಿ ವಿವಿಧ ಶುಲ್ಕಗಳನ್ನು ಘೋಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾ ಮೇಲೆ ವಾಣಿಜ್ಯ ನಿರ್ಬಂಧ ಹೇರಲು ಮುಂದಾದ ಯುರೋಪಿಯನ್‌ ಸಂಸತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...