ಟಿ-ಸೀರಿಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಭೂಷಣ್ ಕುಮಾರ್ ಮಹಿಳೆಯೊಬ್ಬರಿಗೆ ಉದ್ಯೋಗ ನೀಡುವ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮುಂಬೈ ಪೊಲೀಸರು ಅವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ ಎಂದು ಶುಕ್ರವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು 30 ವರ್ಷದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪಶ್ಚಿಮ ಅಂಧೇರಿಯ ಡಿ.ಎನ್. ನಗರ ಪೊಲೀಸ್ ಠಾಣೆಯಲ್ಲಿ ಭೂಷಣ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಮೈಸೂರು: ಕೆಆರ್ ಆಸ್ಪತ್ರೆಯಲ್ಲಿ ಮಾನಸಿಕ ಅಸ್ವಸ್ಥ ಮಹಿಳೆ ಮೇಲೆ ಅತ್ಯಾಚಾರ
ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದಂತೆ ಭೂಷಣ್ ಕುಮಾರ್ ಅವರು ತಮ್ಮ ಸ್ವಂತ ಕಂಪನಿಯ ಕೆಲವು ಪ್ರಾಜೆಕ್ಟ್‌ಗಳಲ್ಲಿ ಉದ್ಯೋಗ ನೀಡುತ್ತೇನೆ ಎಂದು ಪುಸಲಾಯಿಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಆದರೆ, ಅಪರಾಧ ಯಾವಾಗ ನಡೆಯಿತು ಎಂಬ ವಿವರಗಳನ್ನು ಪೊಲೀಸರು ನೀಡಿಲ್ಲ.
ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಭೂಷಣ್ ಕುಮಾರ್ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ), 420 (ಮೋಸ), 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ಟಿ-ಸೀರೀಸ್ ಎನ್ನುವುದು ಮ್ಯೂಸಿಕ್ ರೆಕಾರ್ಡ್ ಲೇಬಲ್ ಮತ್ತು ಚಲನಚಿತ್ರ ನಿರ್ಮಾಣ ಸಂಸ್ಥೆಯಾಗಿದ್ದು, ಇದನ್ನು ಭೂಷಣ್ ಕುಮಾರ್ ಅವರ ತಂದೆ ಗುಲ್ಶನ್ ಕುಮಾರ್ ಸ್ಥಾಪಿಸಿದ್ದಾರೆ. ಗುಲ್ಶನ್ ಕುಮಾರ್ ಅವರನ್ನು ‘ಕ್ಯಾಸೆಟ್ ಕಿಂಗ್’ ಎಂದೂ ಕರೆಯಲಾಗುತ್ತಿತ್ತು. 1997 ರಲ್ಲಿ ಗುಲ್ಶನ್ ಕುಮಾರ್ ಅವರನ್ನು ಮುಂಬೈನ ಅಂಧೇರಿಯಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.
ಇದನ್ನೂ ಓದಿ: ಹರಿಯಾಣ: ದಲಿತ ಯುವತಿಯನ್ನು ಅಪಹರಿಸಿ ಸತತ 9 ದಿನ ಅತ್ಯಾಚಾರ ನಡೆಸಿದ ದುಷ್ಕರ್ಮಿಗಳು


