ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅನಾರೋಗ್ಯದ ಕಾರಣ ಮುಂದಿಟ್ಟು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಅವರು ಶುಕ್ರವಾರ ಸಂಜೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದರು. ಯಡಿಯೂರಪ್ಪ ಅವರ ನಾಯಕತ್ವದ ಕುರಿತು ಹಿಂದಿನಿಂದಲೂ ಪಕ್ಷದ ಆಂತರಿಕ ವಲಯದಲ್ಲಿ ಅಸಮಾಧಾನಗಳು ಹೊಗೆಯಾಡುತ್ತಲೆ ಇದ್ದವು.
ಅವರು ರಾಜೀನಾಮೆಯನ್ನು ಸ್ವೀಕರಿಸಬೇಕೆ ಎಂದು ಇದೀಗ ಪಕ್ಷದ ಹೈಕಮಾಂಡ್ ನಿರ್ಧರಿಸಬೇಕಿದೆ. ಒಂದು ವೇಳೆ ಪಕ್ಷವು ಅವರನ್ನು ಬದಲಾಯಿಸಲು ತೀರ್ಮಾನಿಸಿದರೆ, ಜುಲೈ 26 ರೊಳಗೆ ನಾಯಕತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಆದರೆ ಇದುವರೆಗೂ ಮುಂದಿನ ಮುಖ್ಯಮಂತ್ರಿ ಯಾರು ಎಂಬುವುದು ಇನ್ನೂ ತೀರ್ಮಾನ ಆಗಿಲ್ಲ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಹೇಳಿದೆ.
ಇದನ್ನೂ ಓದಿ: ‘ದೇವರೆ ಶಿಕ್ಷೆ ಕೊಡುವ ಕಾಲ ಬರುತ್ತದೆ’: ಯಡಿಯೂರಪ್ಪ ವಿರುದ್ದ ರೇವಣ್ಣ ಕಿಡಿ
ಆದಾಗ್ಯೂ, ಯಡಿಯೂರಪ್ಪ ಅವರು ಪ್ರಧಾನ ಮಂತ್ರಿಯೊಂದಿಗಿನ ಭೇಟಿಯ ನಂತರ ನಡೆದ ಬೆಳವಣಿಗೆಯ ಬಗ್ಗೆಗಿನ ಊಹಾಪೋಹಗಳನ್ನು ಶನಿವಾರ ಬೆಳಿಗ್ಗೆ ತಳ್ಳಿಹಾಕಿದ್ದಾರೆ. “ಇದರಲ್ಲಿ ಯಾವುದೇ ಸತ್ಯವಿಲ್ಲ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬೆಳಿಗ್ಗೆ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರಧಾನಮಂತ್ರಿಯವರ ಭೇಟಿಯ ನಂತರ ಮುಖ್ಯಮಂತ್ರಿ ಕಚೇರಿಯಿಂದ ಬಂದ ಹೇಳಿಕೆಯು, “ಪ್ರಧಾನಿ ಮತ್ತು ಮುಖ್ಯಮಂತ್ರಿ ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ ಯೋಜನೆ ಮತ್ತು ಮೇಕೆದಾಟು ಯೋಜನೆ ಸೇರಿದಂತೆ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ” ಎಂದು ಹೇಳಿದೆ.
ಯಡಿಯೂರಪ್ಪ ಅವರು ಶನಿವಾರ ತಮ್ಮ ಮಗ ವಿಜಯೇಂದ್ರ ಅವರೊಂದಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದರು.
ಇದನ್ನೂ ಓದಿ: ಯಡಿಯೂರಪ್ಪನವರ ವಿಶೇಷ ಪ್ಯಾಕೇಜ್‌ನಲ್ಲಿ ನೇಕಾರರಿಗೆ ಸಿಕ್ಕಿದ್ದೆಷ್ಟು? ವಿಡಿಯೋ ನೋಡಿ
ರಾಜ್ಯದ ಹಲವಾರು ನಾಯಕರು ಮುಖ್ಯಮಂತ್ರಿಯ ವಿರುದ್ದ ಬಹಿರಂಗವಾಗಿಯೆ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜ್ಯ ನಾಯಕತ್ವದ ವಿರುದ್ದ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಲ್, ಪ್ರವಾಸೋದ್ಯಮ ಸಚಿವ ಸಿಪಿ ಯೋಗೇಶ್ವರ ಮತ್ತು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ನಿರಂತರ ದಾಳಿ ನಡೆಸುತ್ತಲೆ ಇದ್ದಾರೆ. ಸಿಎಂ ಪುತ್ರ ವಿಜಯೇಂದ್ರ ಅವರು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬುವುದು ಪ್ರಮುಖ ಆರೋಪವಾಗಿದೆ.
ಇತ್ತೀಚೆಗಷ್ಟೇ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ರಾಜ್ಯಕ್ಕೆ ಭೇಟಿ ನೀಡಿ ಆಡಳಿತ ಪಕ್ಷದ ಶಾಸಕರನ್ನು ಭೇಟಿ ಮಾಡಿದ್ದರು. ಈ ಭೇಟಿಯ ನಂತರ ಅವರು ಮುಖ್ಯಮಂತ್ರಿಗೆ ಪಕ್ಷದಲ್ಲಿ ಬೆಂಬಲವಿದ್ದು, ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಹೇಳಿದ್ದರು. ಇದರ ನಂತರ ಕೂಡಾ ಯಡಿಯೂರಪ್ಪ ಅವರ ವಿರೋಧಿ ಬಣದ ಕಚ್ಚಾಟಗಳು ನಿಂತಿರಲಿಲ್ಲ.
ಇದನ್ನೂ ಓದಿ: ಮೋದಿ ಮೆಚ್ಚಿಸಿ, ಕುರ್ಚಿ ಉಳಿಸಿಕೊಳ್ಳಲು ಹಿಂದಿ ಜಾಹೀರಾತಿಗೆ ಕೋಟ್ಯಾಂತರ ರೂ. ಸುರಿಯುತ್ತಿರುವ ಯಡಿಯೂರಪ್ಪ: ಆರೋಪ



Don’t believe this news website all fake news and fake anti criminals