Homeಕರ್ನಾಟಕಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ

ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ

- Advertisement -
- Advertisement -

ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು. ಸಚಿವರು, ಸಂಸದರು, ಶಾಸಕರೇ ಸಂವಿಧಾನ ವಿರೋಧಿಸುತ್ತಾರೆ. ಸಂವಿಧಾನ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸುತ್ತಾರೆ. ನನ್ನ ದೃಷ್ಟಿಯಲ್ಲಿ ಅಂಥವರು ಜನಪ್ರತಿನಿಧಿಗಳಾಗಲು ಯೋಗ್ಯರೇ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಶನಿವಾರ ಅವರು ಹಿರಿಯ ಪತ್ರಕರ್ತ ಮಣಿ ಅವರು ಬರೆದಿರುವ “ಮನು ಭಾರತ” ಪುಸ್ತಕವನ್ನು ಬಿಡುಗಡೆಗೊಳಿಸಿದರು. “ಮನು ಭಾರತ” ಪುಸ್ತಕವನ್ನು ಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

“ವಿದ್ಯಾವಂತರು ವೈಚಾರಿಕತೆ, ಜಾತ್ಯಾತೀತ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ವಿದ್ಯಾವಂತರು ಎನಿಸಿಕೊಂಡವರು ಕನಿಷ್ಠ ಸಂವಿಧಾನದ ಮೂಲ ಆಶಯಗಳನ್ನಾದರೂ ಓದಿಕೊಳ್ಳಬೇಕು. ಮನುವಾದಿಗಳು ಸಂವಿಧಾನ ವಿರೋಧಿಗಳಾದ ಕಾರಣ ಅದು ಬದಲಾವಣೆ ಆಗಬೇಕು ಎನ್ನುತ್ತಾರೆ. ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ನೀಡಬೇಕು ಎಂದು ಸಂವಿಧಾನ ಹೇಳಿದೆ. ಸಾಮಾಜಿಕ ಮತ್ತು ಆರ್ಥಿಕವಾಗಿ ನಮ್ಮಲ್ಲಿ ತಾರತಮ್ಯವಿದೆ. ಮನು ಸ್ಮೃತಿ, ಶಾಸ್ತ್ರದಿಂದ ನಿರ್ಮಾಣವಾಗಿರುವ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇನ್ನೂ ಮುಂದುವರಿದಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?- ಸಿದ್ದರಾಮಯ್ಯ

“ನಮ್ಮ ದೇಶದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯನ್ನು ಅಂಬೇಡ್ಕರ್ ಅವರಷ್ಟು ಅರ್ಥ ಮಾಡಿಕೊಂಡವರು ಬೇರೆ ಯಾರೂ ಇಲ್ಲ. ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿ ಅವರು ಸಂವಿಧಾನ ರಚಿಸುವ ಕೆಲಸ ಮಾಡುವುದರ ಜೊತೆಗೆ ಸಮಸ್ಯೆಗಳಿಗೆ ಪರಿಹಾರ ನೀಡುವ ಪ್ರಯತ್ನ ಮಾಡಿದರು.
ಸಂವಿಧಾನ ಉತ್ತಮವೇ ಅಲ್ಲವೇ ಎಂಬುದು ದೇಶದ ಆಡಳಿತದ ಚುಕ್ಕಾಣಿ ಹಿಡಿದವರಲ್ಲಿ ಅದನ್ನು ಜಾರಿ ಮಾಡುವ ಬದ್ಧತೆ ಇದ್ದಾಗ ಗೊತ್ತಾಗುತ್ತದೆ ಎಂದು ಅಂಬೇಡ್ಕರ್ ಅವರು ಹೇಳಿದ್ದರು” ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

“ಜನರಿಗೆ ಮತದಾನದ ಹಕ್ಕಿನ ಜೊತೆಗೆ ಆರ್ಥಿಕ, ಸಾಮಾಜಿಕ ಪ್ರಜಾಪ್ರಭುತ್ವ ಸಹ ಇರಬೇಕಾಗುತ್ತದೆ. ಅವಕಾಶಗಳಿಂದ ವಂಚಿತರಾದ ಜನತೆಗೆ ಸಾಮಾಜಿಕ, ಆರ್ಥಿಕ ಶಕ್ತಿ ತುಂಬದಿದ್ದರೆ ಸಮಾನತೆಯ ಸಮಾಜ ನಿರ್ಮಾಣವಾಗುವುದಿಲ್ಲ. ಮುಂದುವರಿದ ಜಾತಿಯಲ್ಲಿರುವ ಬಡವರಿಗೆ ಮೀಸಲಾತಿಯಲ್ಲ, ಆರ್ಥಿಕ, ಸಾಮಾಜಿಕ ಸಬಲೀಕರಣ ಕಾರ್ಯಕ್ರಮಗಳನ್ನು ರೂಪಿಸಬೇಕು. ಅದನ್ನು ನಾನು ಯಾವತ್ತೂ ವಿರೋಧಿಸಿಲ್ಲ, ವಿರೋಧಿಸುವುದೂ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನಾನು ಮುಖ್ಯಮಂತ್ರಿಯಾಗಿದ್ದಾಗ ಮಕ್ಕಳಿಗಾಗಿ ಕ್ಷೀರಭಾಗ್ಯ, ಹಸಿದವರಿಗೆ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿದ್ದೆ. ಆ ಯೋಜನೆಯಲ್ಲಿ ಎಲ್ಲ ವರ್ಗದ ಬಡವರು ಸೇರಿದ್ದರು. ಅದೇ ರೀತಿಯ ಕಾರ್ಯಕ್ರಮಗಳನ್ನು ಜಾರಿಗೆ ತಂದು ಮುಂದುವರಿದ ವರ್ಗಗಳ ಬಡವರಲ್ಲಿ ಶಕ್ತಿ ತುಂಬ ಕೆಲಸ ಮಾಡಬೇಕು. ಅಂಬೇಡ್ಕರ್ ಅವರಿಗೆ ಇದ್ದ ದೂರದೃಷ್ಟಿಯೇ ಬೇರೆ. ಅವರೊಂದಿಗೆ ಬೇರೆಯವರನ್ನು ಹೋಲಿಕೆ ಮಾಡಲು ಸಾಧ್ಯವೇ ಇಲ್ಲ. ಬಸವಣ್ಣನವರಂತೆ ಅಂಬೇಡ್ಕರ್ ಅವರ ವಿಚಾರಧಾರೆ ಇಂದಿಗೂ ಪ್ರಸ್ತುತ. ಅದು ಸರ್ವಕಾಲಿಕ ಮತ್ತು ಸರ್ವ ಜನರಿಗೆ ಅನ್ವಯ” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಬ್ಯಾಂಕಿಂಗ್‌ ಪರೀಕ್ಷೆ: ಕನ್ನಡಿಗರಿಗೆ ದ್ರೋಹ ಬಗೆದ ಮೋದಿ ಸರ್ಕಾರ’ – ಸಿದ್ದರಾಮಯ್ಯ

“ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ. ಆದರೆ ಹಿಂದೂಗಳಲ್ಲೇ ಇರುವ ಬಡತನ, ತಾರತಮ್ಯ, ಅಸ್ಪೃಶ್ಯತೆ ನಿವಾರಣೆ ಬಗ್ಗೆ ಬಿಜೆಪಿಯವರು ಎಂದಾದರೂ ಮಾತನಾಡುವರೇ? ಅದನ್ನು ಹೇಳಿದರೆ ಸಿದ್ದರಾಮಯ್ಯ ಹಿಂದೂ ವಿರೋಧಿ, ಮೇಲ್ಜಾತಿಯವರ ವಿರೋಧಿ ಎಂದು ಟೀಕೆ ಮಾಡುತ್ತಾರೆ. ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಪ್ರಧಾನಿಗಳು ಕಳೆದ ಏಳು ವರ್ಷಗಳಲ್ಲಿ ಒಂದು ದಿನವೂ ವಿಶ್ಲೇಷಣೆ ಮಾಡಿಲ್ಲ. ಜಿಡಿಪಿ ಬೆಳವಣಿಗೆ, ನಿರುದ್ಯೋಗ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು, ಅವರಲ್ಲಿ ಶಕ್ತಿ ತುಂಬುವುದು ಹೇಗೆ ಎಂಬ ಬಗ್ಗೆ ಎಂದಾದರೂ ಚರ್ಚೆ ಆಗಿದೆಯೇ?” ಎಂದು ಅವರು ಪ್ರಶ್ನಿಸಿದ್ದಾರೆ.

“ಯಾವುದೇ ಪತ್ರಕರ್ತ, ವರದಿಗಾರನ ವೃತ್ತಿ ಬದುಕು ಸಾರ್ಥಕ ಆಗಬೇಕಾದರೆ ಆತನ ಬರವಣಿಗೆ ಜನರನ್ನು ತಲುಪಬೇಕು. ಟಿವಿ ಮಾಧ್ಯಮ ಬಂದ ಬಳಿಕ ಪತ್ರಿಕೆ ಓದುವ ಹವ್ಯಾಸ ಕಡಿಮೆಯಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಟಿವಿಗಳಲ್ಲಿ ಅತಿ ರಂಜಿತ ವರದಿಗಳ ಪ್ರಸಾರವಾಗುವುದು ಇದಕ್ಕೆ ಕಾರಣ. ನಿತ್ಯವೂ ನಾನು ಒಂದು ಗಂಟೆ ಕಾಲ ನಾನು ಪತ್ರಿಕೆಗಳನ್ನು ಓದುತ್ತೇನೆ. ಮಾಧ್ಯಮ ಈಗ ವ್ಯಾಪಾರೀಕರಣಕ್ಕೆ ಒಳಗಾಗಿದೆ. ವಾಸ್ತವವನ್ನು ಬಿಚ್ಚಿಡುವ, ವರದಿ ಮಾಡುವ ಕಾರ್ಯಕ್ಕಿಂತ ಜನರ ಅಭಿರುಚಿಗೆ ಅನುಗುಣವಾಗಿ ಸುದ್ದಿ ಬಿತ್ತರವಾಗುತ್ತಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ, ಆರ್ಥಿಕ ಸ್ಥಿತಿ ಮತ್ತು ನಮ್ಮ ಬದುಕನ್ನು ಸರಿಯಾಗಿ ಬಿಂಬಿಸುವ ಕೆಲಸ ಮಾಧ್ಯಮದಿಂದ ಆಗುತ್ತಿಲ್ಲ. ಸಮಾಜದ ಅಂಕುಡೊಂಕು ತಿದ್ದುವ ಬದಲಾವಣೆ ತರುವ ಕೆಲಸವನ್ನು ಮಾಧ್ಯಮಗಳು ದಿಟ್ಟತನದಿಂದ ಮಾಡಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಸಂಪುಟ ಪುನರ್‌‌ರಚನೆಗೆ ಕಾರ್ಯನಿರ್ವಹಣೆಯೆ ಮಾನದಂಡವಾದರೆ ಮೋದಿಯನ್ನೇ ಮೊದಲು ತೆಗೆಯಬೇಕು: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...