Homeಮುಖಪುಟಅವರು ಏನನ್ನು ಓದುತ್ತಿದ್ದಾರೆ ಎಂದು ನಮಗೆ ಗೊತ್ತು!: ‘ಪೆಗಾಸಸ್‌ ಪ್ರಾಜೆಕ್ಟ್‌’ಗೆ ರಾಹುಲ್ ಗಾಂಧಿ

ಅವರು ಏನನ್ನು ಓದುತ್ತಿದ್ದಾರೆ ಎಂದು ನಮಗೆ ಗೊತ್ತು!: ‘ಪೆಗಾಸಸ್‌ ಪ್ರಾಜೆಕ್ಟ್‌’ಗೆ ರಾಹುಲ್ ಗಾಂಧಿ

- Advertisement -
- Advertisement -

‘ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್‌ಗಳನ್ನು ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಈ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒಕ್ಕೂಟ ಸರ್ಕಾರದ ವಿರುದ್ದ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

‘ಪೆಗಾಸಸ್’ ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಗೂಢಚರ್ಯೆ ತಂತ್ರಾಂಶವಾಗಿದೆ. ಈ ತಂತ್ರಾಂಶವನ್ನು ಪರವಾನಗಿ ಪಡೆದಿರುವ ಅಧಿಕೃತ ಸರಕಾರಿ ಏಜೆನ್ಸಿಗಳಿಗೆ ಅಥವಾ ಗುಪ್ತಚರ ಸಂಸ್ಥೆಗಳಿಗೆ ಮಾತ್ರವೇ ಮಾರುತ್ತೇವೆ ಎಂದು ಎನ್‌ಎಸ್‌ಒ ಹೇಳಿತ್ತು.

ಇದನ್ನೂ ಓದಿ: ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೂರು ದಿನದ ಹಿಂದೆಯೆ, “ಈ ದಿನಗಳಲ್ಲಿ ನೀವು ಏನನ್ನು ಓದುತ್ತಿರುವಿರೋ ಅದರ ಬಗ್ಗೆ ನನಗೆ ಆಶ್ಚರ್ಯವಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದರು. ಇಂದು ಈ ಟ್ವೀಟ್‌ ಅನ್ನು ಮತ್ತೆ ರೀಟ್ವೀಟ್‌ ಮಾಡಿರುವ ಅವರು, “ಅವರು ಏನು ಓದುತ್ತಿದ್ದಾರೆಂದು ನಮಗೆ ಗೊತ್ತಿದೆ. ನಿಮ್ಮ ಪೋನಿನ ಎಲ್ಲವೂ” ಎಂದು ಆಶ್ಚರ್ಯಪಟ್ಟಿದ್ದಾರೆ. ಜೊತೆಗೆ ಪೆಗಾಸಸ್ ಹ್ಯಾಶ್‌ಟ್ಯಾಗ್ ಅನ್ನು ಕೂಡಾ ಅವರು ಬಳಸಿಕೊಂಡಿದ್ದಾರೆ.

 

ಆದರೆ ಒಕ್ಕೂಟ ಸರ್ಕಾವು, ತನಿಖಾ ವರದಿಯನ್ನು ನಿರಾಕರಿಸಿದ್ದು, ನಿರ್ದಿಷ್ಟ ಜನರ ಮೇಲೆ ಸರ್ಕಾರ ಕಣ್ಗಾವಲು ಇಟ್ಟಿದೆ ಎಂಬುವುದಕ್ಕೆ ಯಾವುದೇ ದೃಡವಾದ ಆಧಾರವಿಲ್ಲ ಎಂದು ಹೇಳಿದೆ.

ವಿಶ್ವದಾದ್ಯಂತ 50,000 ಫೋನ್‌ಗಳನ್ನು ಟ್ಯಾಪ್‌ ಮಾಡಲಾಗಿದೆ ಎನ್ನಲಾಗಿದ್ದು, ತನಿಖಾ ವರದಿಯನ್ನು ಪ್ಯಾರಿಸ್‌ ಮೂಲದ ಲಾಭರಹಿತ ಮಾಧ್ಯಮ ಸಂಸ್ಥೆ ‘ಫಾರ್ಬಿಡೆನ್‌ ಸ್ಟೋರಿಸ್‌’, ಅಮ್ನೆಸ್ಟಿ ಇಂಟರ್‌ನ್ಯಾಷನಲ್‌, ಭಾರತದ ಆನ್‌ಲೈನ್‌ ಸುದ್ದಿ ಸಂಸ್ಥೆ ದಿ ವೈರ್‌, ಲೆ ಮಾಂಡೆ, ದಿ ಗಾರ್ಡಿಯನ್‌, ವಾಷಿಂಗ್ಟನ್‌ ಪೋಸ್ಟ್‌ ಸೇರಿದಂತೆ ಒಟ್ಟು 16 ಮೆಕ್ಸಿಕನ್‌, ಅರಬ್‌ ಮತ್ತು ಯುರೋಪಿನ ಸುದ್ದಿ ಸಂಸ್ಥೆಗಳು ಜಂಟಿಯಾಗಿ ನಡೆಸಿದೆ. ಈ ಸಂಸ್ಥೆಗಳು ಕೈಗೊಂಡಿರುವ ಈ ತನಿಖೆಗೆ ‘ಪೆಗಾಸಸ್‌ ಪ್ರಾಜೆಕ್ಟ್‌’ ಎಂದು ಕರೆಯಲಾಗಿದೆ.

ತನಿಖಾ ವರದಿಯಲ್ಲಿ, ನರೇಂದ್ರ ಮೋದಿ ಸರ್ಕಾರದ ಇಬ್ಬರು ಸಚಿವರು, ಮೂವರು ವಿರೋಧ ಪಕ್ಷದ ನಾಯಕರು, ಒಬ್ಬ ನ್ಯಾಯಾಂಗದ ವ್ಯಕ್ತಿ, 40 ಪತ್ರಕರ್ತರು, ವಿಜ್ಞಾನಿಗಳು ಹಾಗೂ ಮಾನವ ಹಕ್ಕುಗಳ ಹೋರಾಟಗಾರರು ಸೇರಿದಂತೆ ಹಲವು ಉದ್ಯಮಿಗಳ ಫೋನ್‌‌ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಿಎಸ್‌ವೈ ವಿರುದ್ಧ ಕತ್ತಿ ಮಸೆಯುತ್ತಿದ್ದ ಮೀರ್ ಸಾದಿಕ್ ಯಾರೆಂಬುದು ಗೊತ್ತಾಯಿತು..: ಕಾಂಗ್ರೆಸ್

2019 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ನರೇಂದ್ರ ಮೋದಿ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂತ್ರಿಗಳು ಸೇರಿದಂತೆ 2018 ಮತ್ತು 2019 ರ ನಡುವೆ ಹೆಚ್ಚಿನ ಜನರನ್ನು ಗುರಿಯಾಗಿಸಲಾಗಿತ್ತು ಎಂದು ದಿ ವೈರ್‌ ವರದಿ ಹೇಳಿದೆ.

ಇಷ್ಟೇ ಅಲ್ಲದೆ, ಭೀಮಾ ಕೋರೆಗಾಂವ್‌ ಪ್ರಕರಣದ ಆರೋಪಿಗಳಾದ 12 ಹೋರಾಟಗಾರರ ಫೋನ್‌ಗಳನ್ನು ಹ್ಯಾಕ್‌ ಮಾಡಲಾಗಿದ್ದು ಅವರ ಮೇಲೆ ಕಣ್ಗಾವಲು ಇಡಲಾಗಿದೆ ಎಂಬ ತನಿಖಾ ವರದಿಯು ಹೇಳಿದೆ. ವರದಿಯು ‘ಜಾಗತಿಕ ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಉಲ್ಲೇಖಿಸಿದೆ.

ಫೋನ್‌ ಹ್ಯಾಕ್ ಮಾಡಲಾಗಿರುವ ಭಾರತೀಯ ಪತ್ರಕರ್ತರಲ್ಲಿ ಸುಶಾಂತ್ ಸಿಂಗ್, ಜೆ. ಗೋಪಿಕೃಷ್ಣನ್‌, ಶಿಶಿರ್‌ ಗುಪ್ತಾ, ರಿತಿಕಾ ಚೋಪ್ರಾ, ಪ್ರಶಾಂತ್‌ ಝಾ, ಪ್ರೇಮ್‌ ಶಂಕರ್‌ ಝಾ, ಸ್ವಾತಿ ಚತುರ್ವೇದಿ, ರಾಹುಲ್‌ ಸಿಂಗ್‌, ಮುಜಮ್ಮಿಲ್‌ ಜಲೀಲ್‌, ಇಫ್ತಿಕಾರ್‌ ಗೀಲಾನಿ, ಸಂದೀಪ್‌ ಉನ್ನಿತಾನ್‌, ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಮತ್ತು ಎಂ.ಕೆ.ವೇಣು ಮುಂತಾದವರು ಸೇರಿದ್ದಾರೆ.

ಪೆಗಾಸಸ್ ತಂತ್ರಾಂಗಳನ್ನು ಬಳಸಿಕೊಂಡು ಫೋನ್‌ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಈ ಹಿಂದೆ ಕೂಡಾ ವರದಿಯಾಗಿತ್ತು.

ಇದನ್ನೂ ಓದಿ: ಬಿಜೆಪಿ ಸೇರುತ್ತಿರುವ ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌; ಆಪ್ತರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...