Homeಮುಖಪುಟಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿ ಮುಂದೆ ಪೆಗಾಸಸ್ ಪ್ರಕರಣ

ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿ ಮುಂದೆ ಪೆಗಾಸಸ್ ಪ್ರಕರಣ

- Advertisement -
- Advertisement -

ಭಾರತದಲ್ಲಿ 300 ಕ್ಕೂ ಹೆಚ್ಚು ಜನರ ಮೊಬೈಲ್ ಸಂಖ್ಯೆಗಳು ಪೆಗಾಸಸ್ ಸ್ಪೈವೇರ್ ಬಳಸಿ ಗೂಢಚರ್ಯೆ ಮಾಡಲಾಗಿದೆ ಎಂಬ ಆರೋಪಗಳ ಬಗ್ಗೆ ಜುಲೈ 28 ರಂದು ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಐಟಿ ಸಂಸದೀಯ ಸಮಿತಿಯು ಪ್ರಕರಣವನ್ನು ಕೈಗೆತ್ತಿಕೊಳ್ಳಲಿದೆ.

ಸ್ಥಾಯಿ ಸಮಿತಿಯು “ನಾಗರಿಕರ ದತ್ತಾಂಶ ಸುರಕ್ಷತೆ ಮತ್ತು ಗೌಪ್ಯತೆ” ಕುರಿತು ಚರ್ಚಿಸಲಿದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ, ಗೃಹ ಸಚಿವಾಲಯ ಮತ್ತು ಸಂವಹನ ಸಚಿವಾಲಯದ ಪ್ರತಿನಿಧಿಗಳನ್ನು ಕರೆದು ಈ ವಿಷಯದ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇಸ್ರೇಲಿ ನಿರ್ಮಿತ ಪೆಗಾಸಸ್ ಸ್ಪೈವೇರ್ ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ಈ ಸ್ಪೈವೇರ್‌ ಬಳಸಿ ದೇಶದಲ್ಲಿ ಪತ್ರಕರ್ತರು, ಸಾಮಾಜಿಕ ಹೋರಾಟಗಾರರು, ಮತ್ತು ರಾಜಕಾರಣಿಗಳು ಸೇರಿ ಸುಮಾರು 300ಕ್ಕೂ ಅಧಿಕ ಜನರ ಮೇಲೆ ಕನ್ಗಾವಲು ಮಾಡಲಾಗಿದೆ. ಈ ವಿಷಯವು ಮಾಧ್ಯಮಗಳಲ್ಲಿ ಬಹಿರಂಗವಾದ ಬಳಿಕ, ಕಳೆದೆರಡು ದಿನಗಳಿಂದ ಮಾನ್ಸೂನ್ ಅಧಿವೇಶನದಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.

ಪೆಗಾಸಸ್ ಪ್ರಾಜೆಕ್ಟ್ ಕುರಿತು ಮಾಧ್ಯಮಗಳ ವರದಿ ಅತ್ಯಂತ ಕಳವಳಕಿರಿಯಾಗಿದ್ದು, ಈ ಬೇಹುಗರಿಕೆ ವಿಚಾರ ಗಂಭೀರ ರಾಷ್ಟ್ರೀಯ ಭದ್ರತಾ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್  ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಪ್ರಾಜೆಕ್ಟ್: ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಕಾಂಗ್ರೆಸ್ ಒತ್ತಾಯ

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ನ್ಯಾಯಾಧೀಶರು, ಹಲವಾರು ಉದ್ಯಮಿಗಳು ಮತ್ತು  ಹೋರಾಟಗಾರರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ. ಆದರೆ, ಸೋರಿಕೆಯಾದ ಡೇಟಾಬೇಸ್‌ನಲ್ಲಿ ಕಂಡುಬರುವ ಎಲ್ಲಾ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ.

ಗೂಢಚರ್ಯೆ ನಡೆಸುವಲ್ಲಿ ಒಕ್ಕೂಟ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸರ್ಕಾರ ತಿಳಿಸಿದೆ. ತಾವೇ ಗೂಢಚರ್ಯೆಗೆ ಒಳಗಾಗಿದ್ದೇನೆ ಎಂದು ತಿಳಿಯುವ ಮೊದಲು ನೂತನ ಐಟಿ ಸಚಿವ ಅಶ್ವಿನಿ ವೈಷ್ಣವ್  ಬೇಹುಗಾರಿಕೆ ವರದಿಗಳಲ್ಲಿ ಯಾವುದೇ ಅಂಶವಿಲ್ಲ. ದೇಶದಲ್ಲಿ ಅನಧಿಕೃತ ಕಣ್ಗಾವಲು ಸಂಭವಿಸುವುದಿಲ್ಲ ಎಂದು ತಿಳಿಸಿದ್ದರು.

ಕರ್ನಾಟಕದ 2019 ರ ಸಮ್ಮಿಶ್ರ ಸರ್ಕಾರ ಉರುಳಲು ಈ ಪೆಗಾಸಸ್ ಗೂಢಚರ್ಯೆ ಕಾರಣವಾಗಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮೇಲೆ ಪೆಗಾಸಸ್ ಕಣ್ಗಾವಲು ಇದ್ದದ್ದು ಈಗ ಬಹಿರಂಗವಾಗಿದೆ. ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ವೈಯಕ್ತಿಕ ಕಾರ್ಯದರ್ಶಿಗಳ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.


ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...