ಪೆಗಾಸಸ್ ಬೇಹುಗಾರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿರುವ ಕರ್ನಾಟಕ ಕಾಂಗ್ರೆಸ್ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಪ್ರಜಾಪ್ರಭುತ್ವಕ್ಕೆ ಪದೇ ಪದೇ ಧಕ್ಕೆ ತರುವ ಬಿಜೆಪಿ ಸರ್ಕಾರ ಪೆಗಾಸಸ್ ಬೇಹುಗಾರಿಕೆ ಮೂಲಕ ಅಧಃಪತನಕ್ಕೆ ಇಳಿದಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ರಾಜಭವನ ಮುತ್ತಿಗೆಗೂ ಮೊದಲು ವಿಧಾನಸೌಧದಲ್ಲಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಟೆಲಿಫೋನ್ ಗೂಢಚರ್ಯೆ ವಿರೋಧಿಸಿ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು.
ಧರಣಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಮುಖಂಡರಾದ ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಕೆ.ಆರ್. ರಮೇಶ್ ಕುಮಾರ್, ಶಿವಾನಂದ ಪಾಟೀಲ್, ಶಿವಶಂಕರರೆಡ್ಡಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಲೀಂ ಅಹಮದ್, ಅಜಯ್ ಸಿಂಗ್, ನಾರಾಯಣಸ್ವಾಮಿ, ಎಸ್. ರವಿ ಮತ್ತಿತರರು ಭಾಗವಹಿಸಿದ್ದರು.
ಇದನ್ನೂ ಓದಿ: ಪೆಗಾಸಸ್ ಹಗರಣ: ಅಮಿತ್ ಶಾ ಮೇಲೆ ನೇರ ಆರೋಪ ಹೊರಿಸಿದ ಕಾಂಗ್ರೆಸ್
ರಾಜಭವನ ಮುತ್ತಿಗೆ ಹಾಕಲು ಹೊರಟ್ಟಿದ್ದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಪ್ರಧಾನ ಅಂಚೆ ಕಚೇರಿ (ಜಿಪಿಒ) ಬಳಿ ತಡೆದು, ಬಂಧಿಸಿ ಪೊಲೀಸ್ ವಾಹನದಲ್ಲಿ ಆಶೋಕ ನಗರ ಪೊಲೀಸ್ ಠಾಣೆಗೆ ಕರೆದೊಯ್ದರು.
Our democracy has been repeatedly assaulted by BJP Govt, with latest being #Pegasus spying attack, showing how morally bankrupt this govt is!
Protested against the same at Mahatma Gandhi's Statue at Vidhana Soudha before laying siege at Governor house, alongside Congress leaders. pic.twitter.com/rS9we2GWLe— DK Shivakumar (@DKShivakumar) July 22, 2021
“ಸಂವಿಧಾನಾತ್ಮಕವಾಗಿ ಅಧಿಕಾರ ಹಿಡಿಯಲು ಯೋಗ್ಯತೆ ಇಲ್ಲದ ಬಿಜೆಪಿ, ಹಿಡಿಯುವುದೆಲ್ಲವೂ ಅನೈತಿಕ ಮಾರ್ಗವೇ. ಐಟಿ, ಈಡಿ, ಸಿಬಿಐಗಳನ್ನು ಅಸ್ತ್ರಗಳಂತೆ ಬಳಸುವುದು, ಶಾಸಕರನ್ನ ‘ಸಿಡಿ ಬ್ಲಾಕ್ಮೇಲ್’ ಮಾಡುವುದು. ಫೋನ್ ಕದ್ದಾಲಿಕೆ ನಡೆಸುವುದು. ಈ ಅನೈತಿಕ ಸರ್ಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ” ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ಪ್ರಜೆಗಳ ಖಾಸಗಿ ಬದುಕಿನೊಳಗೆ ಇಣುಕಿ ನೋಡುವ ಚಟ ಸಂವಿಧಾನ ವಿರೋಧಿ: ಸಿದ್ದರಾಮಯ್ಯ
Another video byte when the police took us to Ashoknagar police station after detaining Congress leaders @DKShivakumar sir and @siddaramaiah sir for protesting against #PegasusSnoopgate pic.twitter.com/yJCwfncFVx
— Bhavya Narasimhamurthy (@Bhavyanmurthy) July 22, 2021
ಕಳೆದೆರಡು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತ ಸಹಾಯಕರು ಮತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮೇಲೆ ಪೆಗಾಸಸ್ ಕಣ್ಗಾವಲು ಇದ್ದದ್ದು ಬಹಿರಂಗವಾಗಿದೆ. 2019 ರ ಸಮ್ಮಿಶ್ರ ಸರ್ಕಾರ ಉರುಳಲು ಈ ಪೆಗಾಸಸ್ ಗೂಢಚರ್ಯೆ ಕಾರಣವಾಗಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ.
ಇದನ್ನೂ ಓದಿ: ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!


