Homeಮುಖಪುಟಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಪೆಗಾಸಸ್ ಅನ್ನು ಸರ್ಕಾರಗಳಿಗೆ ಬಿಟ್ಟರೆ ಬೇರೆಯವರಿಗೆ ಮಾರಲು ಸಾಧ್ಯವಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ತಪ್ಪಿತಸ್ಥರಾದ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಕೂಡಲೇ ರಾಜೀನಾಮೆ ನೀಡಬೇಕು.

- Advertisement -
- Advertisement -

ಪೆಗಾಸಸ್ ಎಂಬುದು ಕೇವಲ ಸಾಫ್ಟ್‌ವೇರ್ ಅಲ್ಲ. ಅದೊಂದು ಆಯುಧವಾಗಿದೆ. ಅದನ್ನು ಭಯೋತ್ಪಾದಕರು, ಕ್ರಿಮಿನಲ್‌ಗಳ ವಿರುದ್ಧ ಬಳಸುವುದು ಬಿಟ್ಟು ಈ ದೇಶದ ಪ್ರಜಾತಂತ್ರವನ್ನು ಹಾಳು ಮಾಡಲು ಬಳಸಲಾಗುತ್ತಿದೆ. ದೇಶದ ಜನರ ಜನರ ದನಿ ಅಡಗಿಸಲು ದುರಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪೆಗಾಸಸ್ ಅನ್ನು ಕರ್ನಾಟಕದ ಸರ್ಕಾರ ಕೆಡವಲು ಬಳಸಿಕೊಳ್ಳಲಾಯಿತು. ರಾಫೇಲ್ ಹಗರಣವನ್ನು ಮುಚ್ಚಿಹಾಕಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲೆ ಅದನ್ನು ಬಳಸಲಾಯಿತು. ಪತ್ರಕರ್ತರು, ವಿರೋಧ ಪಕ್ಷದವರ ಮೇಲೆ ಬಳಸಿ ಮೋದಿ ಮತ್ತು ಅಮಿತ್ ಶಾ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ.

ನನ್ನ ಫೋನ್ ಕೇವಲ ಗುರಿಯಾಗಿರಲಿಲ್ಲ, ಬದಲಿಗೆ ಖಂಡಿತಾ ಟ್ಯಾಪ್ ಮಾಡಲಾಗಿದೆ. ಕೇವಲ ರಾಹುಲ್ ಗಾಂಧಿಯ ಫೋನ್ ಟ್ಯಾಪ್ ಮಾಡಿದರೆ ಅದು ದೊಡ್ಡ ವಿಷಯವಲ್ಲ. ಆದರೆ ನಾನು ವಿರೋಧ ಪಕ್ಷದ ನಾಯಕ. ಜನರ ದನಿಯಾಗಿ ಕೆಲಸ ಮಾಡುತ್ತಿರುವವನು. ನನ್ನ ಫೋನ್ ಟ್ಯಾಪ್ ಮಾಡುವ ಮೂಲಕ ಜನರ ದನಿ ಅಡಗಿಸಲು ಈ ಸರ್ಕಾರ ಮುಂದಾಗಿದೆ. ಇಡೀ ದೇಶದ ಮೇಲಿನ ದಾಳಿ ಇದಾಗಿದೆ ಎಂದು ಕಿಡಿಕಾರಿದರು.

ಪೆಗಾಸಸ್ ಅನ್ನು ಸರ್ಕಾರಗಳಿಗೆ ಬಿಟ್ಟರೆ ಬೇರೆಯವರಿಗೆ ಮಾರಲು ಸಾಧ್ಯವಿಲ್ಲ. ಹಾಗಾಗಿ ಈ ಪ್ರಕರಣದಲ್ಲಿ ತಪ್ಪಿತಸ್ಥರಾದ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಕೂಡಲೇ ರಾಜೀನಾಮೆ ನೀಡಬೇಕು. ಸುಪ್ರೀಂ ಕೋರ್ಟ್ ಮೇಲ್ವೀಚಾರಣೆಯಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ನಡೆಯಬೇಕೆಂದು ರಾಹುಲ್ ಆಗ್ರಹಿಸಿದ್ದಾರೆ.

ಪೆಗಾಸಸ್ ಕಣ್ಗಾವಲಿನಲ್ಲಿ ಉದ್ಯಮಿ ಅನಿಲ್ ಅಂಬಾನಿಯ ಹೆಸರು ಕೇಳಿಬಂದಿರುವ ಬಗ್ಗೆ ನಿಮ್ಮ ಪ್ರತಿಕ್ರಿಯೆಯೇನು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, “ರಾಫೇಲ್ ಹಗರಣದ ಬಗ್ಗೆ ನಾನು ದನಿಯೆತ್ತಿದೆ. ನೀವು ಸೇರಿದಂತೆ ಯಾವ ಮಾಧ್ಯಮಗಳು ನನ್ನನ್ನು ಬೆಂಬಲಿಸಲಿಲ್ಲ. ಇದು ನಿಜ. ಆದರೆ ನಿಧಾನವಾಗಿ ರಾಫೇಲ್ ಹಗರಣ ಹೊರಬರುತ್ತಿದೆ. ಪ್ರಧಾನ ಮಂತ್ರಿಗಳು ಈ ಹಗರಣದಲ್ಲಿ ನೇರ ಭಾಗಿಯಾಗಿದ್ದಾರೆ. ನೀವು ಏಕೆ ಮಾಜಿ ಸಿಬಿಐ ಡೈರೆಕ್ಟರ್ ಪೆಗಾಸಸ್ ಕಣ್ಗಾವಲಿಗೆ ಒಳಗಾಗಿದ್ದಾರೆ ಎಂಬ ಪ್ರಶ್ನೆ ಕೇಳಲಿಲ್ಲ? ಅವರು ತಮ್ಮದೆ ಇಲಾಖೆಯ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರ ನಂಬರ್‌ ಅನ್ನು ಟ್ಯಾಪ್ ಮಾಡುವ ಪಟ್ಟಿಗೆ ಸೇರಿಸಲಾಯಿತು? ಏಕೆ ಅವರನ್ನು ಬ್ಲಾಕ್‌ಮೇಲ್ ಮಾಡಲಾಯಿತು? ಇದನ್ನು ಯಾರು ಮಾಡಿದರು ಎಂಬುದು ನಿಜವಾದ ಪ್ರಶ್ನೆಯಲ್ಲವೇ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಹೇಗೆ ಹೇಳುತ್ತೀರಿ ಎಂಬ ಪ್ರಶ್ನೆಗೆ, “ಪೆಗಾಸಸ್ ಅನ್ನು ಸರ್ಕಾರಗಳಿಗೆ ಮಾತ್ರ ಮಾರಲಾಗುತ್ತದೆ. ಮೋದಿ ಸರ್ಕಾರ ಇದನ್ನು ಮಾಡಿಲ್ಲ ಎಂದಾದರೆ ಜಪಾನ್, ಇಸ್ರೇಲ್, ಉಗಾಂಡ ಸರ್ಕಾರ ಮಾಡಿರಬಹುದಲ್ಲವೇ? ಪೋನ್‌ಗಳು ಟ್ಯಾಪ್‌ ಆಗುತ್ತಿರುವುದು ನಿಜವಾದರೆ ಅದರ ಬಗ್ಗೆ ಸರ್ಕಾರ ಏಕೆ ತನಿಖೆ ನಡೆಸುತ್ತಿಲ್ಲ? ನಾವು ಇದನ್ನು ಮಾಡಿಲ್ಲ ಎಂದು ಏಕೆ ಮೋದಿ ಇದುವರೆಗೂ ಹೇಳಿಲ್ಲ? ಎಂದರು.

ನಾನು ಇದರಿಂದ ಹೆದರುವುದಿಲ್ಲ. ಭ್ರಷ್ಟಾಚಾರ ಮತ್ತು ಕಳ್ಳತನ ಮಾಡಿದವರು ತಮ್ಮ ಫೋನ್ ಟ್ಯಾಪ್ ಆದರೆ ಹೆದರಬೇಕು. ಈ ಎರಡು ಭಯ ನನಗಿಲ್ಲ. ಹಾಗಾಗಿ ನರೇಂದ್ರ ಮೋದಿಯವರ ಕದ್ದಾಲಿಕೆಗೆ ಹೆದರುವ ಮಾತೇ ಇಲ್ಲ ಎಂದಿದ್ದಾರೆ. ಇಂಟೆಲಿಜೆನ್ಸ್ ನವರು ಸಹ ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ.

ರಾಹುಲ್ ಗಾಂಧಿ ಆರೋಪಗಳನ್ನು ಅಲ್ಲಗೆಳೆದಿರುವ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಕುಮಾರ್, “ನಾವು ಎಲ್ಲಾ ವಿಷಯಗಳಿಗೆ ಸ್ಪಷ್ಟೀಕರಣ ನೀಡಿದ್ದೇವೆ. ಇದರಲ್ಲಿ ತನಿಖೆ ಮಾಡುವ ಅಗತ್ಯವಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...