Homeಕರ್ನಾಟಕಸಿಎಂ ಬದಲಾವಣೆ ಕುರಿತ ಸಂದೇಶ ಇಂದು ಸಂಜೆಗೆ: ಯಡಿಯೂರಪ್ಪ

ಸಿಎಂ ಬದಲಾವಣೆ ಕುರಿತ ಸಂದೇಶ ಇಂದು ಸಂಜೆಗೆ: ಯಡಿಯೂರಪ್ಪ

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ನಾಯಕತ್ವದ ಬದಲಾವಣೆಯ ಚರ್ಚೆ ಗರಿಗೆದರಿದ್ದು, ಈ ಬಾರಿ ಮುಖ್ಯಮಂತ್ರಿ ಬದಲಾವಣೆ ಖಚಿತ ಎನ್ನಲಾಗಿದೆ. ಇಂದು ಸಂಜೆ ವೇಳೆಗೆ ಸಿಎಂ ಬದಲಾವಣೆಯ ಕುರಿತ ಸಂದೇಶ ಪಕ್ಷದ ಹೈಕಮಾಂಡ್‌ನಿಂದ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಬೆಳಿಗ್ಗೆ ಹೇಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದ ನಂತರ ಅವರು ಮಧ್ಯಾಹ್ನ 2 ಗಂಟೆಗೆ ಬೆಳಗಾವಿ ನಗರಕ್ಕೆ ಮರಳುವ ನಿರೀಕ್ಷೆಯಿದ್ದು, ನಂತರ ಸಂಜೆ ಬೆಂಗಳೂರಿಗೆ ತೆರಳಲಿದ್ದಾರೆ. “ಸಂಜೆಯ ಹೊತ್ತಿಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಮಾಧ್ಯಮಗಳು ಸಹ ಇದರ ಬಗ್ಗೆ ತಿಳಿದುಕೊಳ್ಳುವಿರಿ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬದಲಾವಣೆಯತ್ತ ಕರ್ನಾಟಕ ರಾಜಕೀಯ; ಯಡಿಯೂರಪ್ಪ ಸುತ್ತ ಏನಾಗುತ್ತಿದೆ?

ದಲಿತರೊಬ್ಬರನ್ನು ಸಿಎಂ ಆಗಿ ಹೆಸರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇದರ ಬಗ್ಗೆ ಪಕ್ಷದ ಹೈಕಮಾಂಡ್‌‌ ನಿರ್ಧಾರ ಮಾಡುತ್ತದೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಸರ್ಕಾರವು ಅಧಿಕಾರಕ್ಕೆ ಬಂದು ಇನ್ನೆರೆಡು ದಿನಗಳಲ್ಲಿ ಎರಡು ವರ್ಷಗಳಾಗಿದೆ. ಹಿಂದಿನಿಂದಲೂ ಅವರ ನಾಯಕತ್ವದ ಬಗ್ಗೆ ಬಿಜೆಪಿಯೊಳಗೆ ಅಸಮಾಧಾನಗಳು ಇದ್ದವು. ಇದನ್ನು ಪಕ್ಷದ ನಾಯಕರೆ ಬಹಿರಂಗವಾಗಿ ಹೇಳಿದ್ದರು.

ಈ ಹಿಂದೆ ಕೂಡಾ ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕದಲ್ಲಿ ಸರಣಿ ಸಭೆಗಳನ್ನು ನಡೆಸಿ, ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿದೆ ಎಂದು ಹೇಳಿದ್ದರು. ಆದರೆ ಅದರ ನಂತರ ಕೂಡಾ ಪಕ್ಷದೊಳಗಿನ ಕಚ್ಚಾಟಗಳು ನಿಂತಿರಲಿಲ್ಲ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಿ ಸರಣಿ ಸಭೆಯನ್ನು ನಡೆಸಿದ್ದರು. ಆದರೆ ಸಭೆಯ ನಂತರ ಅವರು ಅನಾರೋಗ್ಯದ ಕಾರಣ ನೀಡಿ ರಾಜೀನಾಮೆಗೆ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ವರಿಷ್ಠರ ಸೂಚನೆಯಂತೆ ನಡೆಯುವೆ: ರಾಜೀನಾಮೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ

ಆದಾಗ್ಯೂ, ಅಲ್ಲಿ ಅವರು ರಾಜೀನಾಮೆಯ ಸುದ್ದಿಯನ್ನು ಅಲ್ಲಗೆಳೆದಿದ್ದರು. ಆದರೆ ಗುರವಾರದಂದು ಮತ್ತೇ ರಾಜೀನಾಮೆ ನೀಡುವ ಬಗ್ಗೆ ಸುಳಿವು ನೀಡಿದ್ದ ಯಡಿಯೂರಪ್ಪ, ಹೈಕಮಾಂಡ್‌ನಿಂದ ಸಂದೇಶವನ್ನು ನಿರೀಕ್ಷಿಸುತ್ತಿದ್ದೇನೆ ಮತ್ತು ಅದಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದರು.

ಈ ಮಧ್ಯೆ ಸೋಮವಾರದಂದು ತಮ್ಮ ಸರ್ಕಾರದ ಎರಡು ವರ್ಷಗಳನ್ನು ಪೂರೈಸಿದ ಸಂಭ್ರಮಾಚರಣೆ ನಡೆಸಲಿದ್ದಾರೆ. ಈ ಬಗ್ಗೆ ವಿಧಾನ ಸೌಧದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದ್ದು, ತಮ್ಮ ಸರ್ಕಾರದ ಸಾಧನೆಗಳನ್ನು ಪಟ್ಟಿಮಾಡುವ ಕಿರುಪುಸ್ತಕವೊಂದನ್ನು ಬಿಡುಗಡೆ ಮಾಡಲಾಗುತ್ತದೆ.

ನಾಯಕತ್ವದ ಬದಲಾವಣೆಯ ಬಗ್ಗೆ ಕೇಂದ್ರ ನಾಯಕರು ಉತ್ಸುಕರಾಗಿದ್ದರೂ, ಯಡಿಯೂರಪ್ಪ ಅವರ ಉತ್ತರಾಧಿಕಾರಿಯನ್ನು ಅವರು ಇನ್ನೂ ನಿರ್ಧರಿಸಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಅಲ್ಲದೆ ಪ್ರವಾಹದಿಂದ ಸಾವಿರಾರು ಜನರು ಕಷ್ಟ ಪಡುತ್ತಿರುವಾಗ ಮುಖ್ಯಮಂತ್ರಿ ಬದಲಾವಣೆಯು ಪಕ್ಷಕ್ಕೆ ಅಪಾಯ ತಂದೊಡ್ಡಬಹುದು ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಇದನ್ನೂ ಓದಿ: ಯಡಿಯೂರಪ್ಪ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಿ- ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...