Homeಕರ್ನಾಟಕಸಿಎಂ ಯಡಿಯೂರಪ್ಪಗೆ ಬೆಂಬಲ: ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಠಾಧೀಶರ ಸಮಾವೇಶ

ಸಿಎಂ ಯಡಿಯೂರಪ್ಪಗೆ ಬೆಂಬಲ: ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಠಾಧೀಶರ ಸಮಾವೇಶ

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಳೆದೆಡು ದಿನಗಳ ಹಿಂದೆ ಸೂಚನೆ ನೀಡಿದ್ದರು. ಈಗ ರಾಜೀನಾಮೆ ನೀಡಬಾರದು ಎಂಬ ಒತ್ತಡ ಹಾಕಲು ಮತ್ತು ಯಡಿಯೂರಪ್ಪ  ಅವರನ್ನು ಬೆಂಬಲಿಸಿ ರಾಜ್ಯದ 500ಕ್ಕೂ ಹೆಚ್ಚು ಮಠಾಧೀಶರು ಸಮಾವೇಶ ನಡೆಸುತ್ತಿದ್ದಾರೆ.

ಭಾನುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಠಾಧೀಶರ ಮಹಾ ಸಮಾವೇಶ ನಡೆಯುತ್ತಿದ್ದು, 500ಕ್ಕೂ ಹೆಚ್ಚು ಮಠಾಧೀಶರುಗಳು ಭಾಗಿಯಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಬಾಳೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಮತ್ತು ತಿಪಟೂರಿನ ರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ಈ ಸಮಾವೇಶ ನಡೆದಿದ್ದು, ಚಿತ್ರದುರ್ಗದ ಬಸವಕುಮಾರ ಸ್ವಾಮೀಜಿ ಸೇರಿದಂತೆ 500ಕ್ಕೂ ಅಧಿಕ ಮಠಾಧೀಶರು ಸಮಾವೇಶಕ್ಕೆ ಆಗಮಿಸಿದ್ದಾರೆ.

ಯಡಿಯೂರಪ್ಪ ಅಧಿಕಾರ ಕಳೆದುಕೊಂಡರೆ ಬಿಜೆಪಿಗೆ ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಬೆಂಬಲವೂ ದೊರೆಯುವುದಿಲ್ಲ ಎಂಬ ಸಂದೇಶ ನೀಡಲು, ವೀರಶೈವ ಮತ್ತು ಲಿಂಗಾಯತ ಸಮುದಾಯಗಳ ಸ್ವಾಮೀಜಿಗಳು ಈ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ವರಿಷ್ಠರ ಸೂಚನೆಯಂತೆ ನಡೆಯುವೆ: ರಾಜೀನಾಮೆ ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ

ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವ ತೀರ್ಮಾನ ಕೈಗೊಳ್ಳದಂತೆ ಬಿಜೆಪಿ ಹೈಕಮಾಂಡ್‌ ಮೇಲೆ ಒತ್ತಡ ತರುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲಾಗಿದೆ. ಈ ಹಿಂದೆಯು  ಮುಖ್ಯಮಂತ್ರಿ ನಿವಾಸಕ್ಕೆ ಮಠಾಧೀಶರು ತೆರಳಿ ತಮ್ಮ ಬೆಂಬಲ ಸೂಚಿಸಿದ್ದರು.

ಜುಲೈ 22 ರಂದು ಮಾತನಾಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, “75 ವರ್ಷ ದಾಟಿದವರಿಗೆ ಈವರೆಗೆ ಬಿಜೆಪಿಯಲ್ಲಿ ಯಾವುದೇ ಸ್ಥಾನಮಾನ ಕೊಟ್ಟಿಲ್ಲ. ಆದರೆ ನನಗೆ ಕೊಟ್ಟಿದ್ದಾರೆ. ಇದೀಗ ರಾಷ್ಟ್ರೀಯ ನಾಯಕರು ಯಾವ ಕೆಲಸ ಕೊಡುತ್ತಾರೋ ನಾನು ಆ ಕೆಲಸ ನಡೆಸಿಕೊಂಡು ಹೋಗುತ್ತೇನೆ. ಹೈಕಮಾಂಡ್ ಹೇಳಿದಂತೆ ನಡೆದುಕೊಂಡು ಹೋಗುತ್ತೇನೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವೇ ನನ್ನ ತೀರ್ಮಾನ. ಜುಲೈ 25 ಕ್ಕೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಅವರ ಸೂಚನೆಯಂತೆ ನಡೆದುಕೊಳ್ಳುತ್ತೇನೆ” ಎಂದಿದ್ದರು.

ಭಾನುವಾರ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಿದ ನಂತರ ಯಡಿಯೂರಪ್ಪ ಅವರು ಮಧ್ಯಾಹ್ನ 2 ಗಂಟೆಗೆ ಬೆಳಗಾವಿ ನಗರಕ್ಕೆ ಮರಳುವ ನಿರೀಕ್ಷೆಯಿದ್ದು, ನಂತರ ಸಂಜೆ ಬೆಂಗಳೂರಿಗೆ ಬರಲಿದ್ದಾರೆ. “ಸಂಜೆಯ ಹೊತ್ತಿಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ. ಮಾಧ್ಯಮಗಳು ಸಹ ಇದರ ಬಗ್ಗೆ ತಿಳಿದುಕೊಳ್ಳುವಿರಿ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಿಎಂ ಬದಲಾವಣೆ ಕುರಿತ ಸಂದೇಶ ಇಂದು ಸಂಜೆಗೆ: ಯಡಿಯೂರಪ್ಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

0
ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ 'ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)' ಕಂಪನಿ ಮತ್ತು ರಾಜ್ಯ ಸರ್ಕಾರದ...